ಬುದ್ಧಗಯಾ, ಪಾಟ್ನಾ ಸ್ಫೋಟ ಕೇಸು: ಶಂಕಿತ ಸಿಮಿ ಸದಸ್ಯನ ಸೆರೆ
Team Udayavani, Oct 13, 2019, 5:04 AM IST
ರಾಯ್ಪುರ: 2013ರ ಬುದ್ಧಗಯಾ ಮತ್ತು ಪಾಟ್ನಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ನಿಷೇಧಿತ ಸಿಮಿ ಸಂಘಟನೆಯ ಶಂಕಿತ ಕಾರ್ಯಕರ್ತ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಕೆಮಿಕಲ್ ಅಲಿ ಎಂಬಾತನನ್ನು ಶನಿವಾರ ಛತ್ತೀಸ್‌ಗಡ ಪೊಲೀಸರು ಬಂಧಿಸಿದ್ದಾರೆ.
ಸೌದಿ ಅರೇಬಿಯಾದಿಂದ ವಾಪಸಾದ ಅಲಿ (32) ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯು³ರದವನಾದ ಅಲಿಯನ್ನು ಕಳೆದ 6 ವರ್ಷಗಳಿಂದಲೂ ಪೊಲೀಸರು ಹುಡುಕುತ್ತಿದ್ದರು. ಬುದ್ಧಗಯಾ ಹಾಗೂ ಪಾಟ್ನಾ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಆಶ್ರಯ ನೀಡಿರುವ ಆರೋಪ ಅಲಿ ಮೇಲಿದೆ. 2013ರ ಡಿಸೆಂಬರ್‌ನಲ್ಲಿ ರಾಯು³ರ ಪೊಲೀಸರು ಸಿಮಿ ಸ್ಲಿàಪರ್ ಸೆಲ್ ಮುಖ್ಯಸ್ಥ ಉಮರ್ ಸಿದ್ದಿಕಿ ಸೇರಿದಂತೆ 17 ಮಂದಿಯನ್ನು ಬಂಧಿಸಿದ್ದರು. ಅದೇ ಸಂದರ್ಭದಲ್ಲಿ ಅಲಿ ಪೊಲೀಸರ ಕಣ್ತಪ್ಪಿಸಿ ನಕಲಿ ಪಾಸ್‌ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದ. ಶನಿವಾರ ಆತ ಹೈದರಾಬಾದ್‌ಗೆ ಆಗಮಿಸುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಛತ್ತೀಸ್‌ಗಡ ಪೊಲೀಸರು, ಹೈದರಾಬಾದ್ ಎಟಿಎಸ್ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಲಿಯನ್ನು ಬಂಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.