ಸನ್ನಿಧಿಯ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಕುಸುಮಾ ಭೋಜ ಶೆಟ್ಟಿ
Team Udayavani, Oct 13, 2019, 4:11 PM IST
ಥಾಣೆ, ಅ. 12: ಥಾಣೆ ಪೂರ್ವದ ಮೀಟ್ ಬಂದರ್ ರೋಡ್, ಚಾಂದನಿ ಕೋಲಿವಾಡದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಚಾರಿಟೆಬಲ್ ಟ್ರಸ್ಟ್ ಇದರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 50ನೇ ವಾರ್ಷಿಕ ಶರನ್ನವರಾತ್ರಿ ಮಹೋತ್ಸವವು ಸೆ. 29ರಿಂದ ಅ. 8ರ ವರೆಗೆ ಧಾರ್ಮಿಕ, ಅಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆದು ಸಂಪನ್ನಗೊಂಡಿತು.
ವೇದಮೂರ್ತಿ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಅವರ ಮಾರ್ಗದರ್ಶನದಲ್ಲಿ ಸಾಣೂರು ಸುಬ್ರಹ್ಮಣ್ಯ ಭಟ್ ಅವರ ಪೌರೋತ್ಯದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕುಸುಮಾ ಭೋಜ ಶೆಟ್ಟಿ, ಗೌರವಾಧ್ಯಕ್ಷ ಭೋಜ ಶೆಟ್ಟಿ, ಅಧ್ಯಕ್ಷ ಎಸ್. ಎಸ್. ಪೂಜಾರಿ, ಉಪಾಧ್ಯಕ್ಷರಾದ ವಿಕ್ರಮಾನಂದ ಶೆಟ್ಟಿ, ವಿಠಲ್ ಶೆಟ್ಟಿ, ಕಾರ್ಯದರ್ಶಿ ಸುಭಾಶ್ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿ ಜ್ಯೋತಿ ಎನ್. ಶೆಟ್ಟಿ, ಕೋಶಾಧಿಕಾರಿ ವಿಜಯ ಶೆಟ್ಟಿ, ಜತೆ ಕೋಶಾಧಿಕಾರಿ ಜಯಪ್ರಕಾಶ್ ಎ. ಶೆಟ್ಟಿ, ಉದ್ಯಮಿ ಲಕ್ಷ್ಮಣ್ ಮಣಿಯಾಣಿ, ಸರ್ವ ಸದಸ್ಯರು, ಮಹಿಳಾ ಸಮಿತಿಯ ಹಾಗೂ ಸೇವಾರ್ಥಿಗಳ ಉಪಸ್ಥಿತಿಯಲ್ಲಿ ಗಣಹೋಮ, ಸ್ಥಳ ಶುದ್ಧೀಕರಣ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಸಹಸ್ರ ನಾಮಾರ್ಚನೆ, ಕಲಶ ಪ್ರತಿಷ್ಠೆ, ದುರ್ಗಾಹೋಮ, ರಂಗಪೂಜೆ ಮುಂತಾದ ವಿವಿಧ ಪೂಜಾ ಕೈಂಕರ್ಯಗಳು ವೈದಿಕ ತತ್ವದಡಿ ನೆರವೇರಿದವು.
ಪ್ರತಿದಿನ ಅಪರಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ ರಾತ್ರಿ ದೇವಿ ದರ್ಶನ ನಡೆಯಿತು. ಅ.7 ರಂದು ನಡೆದ ಅಭಿನಂದನಾ ಸಮಾರಂಭದಲ್ಲಿ ಆಡಳಿತ ಮೊಕ್ತೇಸರ ಕುಸುಮಾ ಭೋಜ ಶೆಟ್ಟಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಈಗ 50 ರ ಸಂಭ್ರಮ. ಇತಿಹಾಸದ ಪ್ರಸಿದ್ದ ಈ ಕ್ಷೇತ್ರದಲ್ಲಿ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಚಿಂತನೆಗಳ ಕಾರ್ಯಕ್ರಮಗಳು ದಾನಿಗಳ ನೆರವಿಂದ ನಿರಂತರವಾಗಿ ನಡೆಯುತ್ತಾ ಬಂದಿವೆ. ನಿಸ್ವಾರ್ಥ ಸೇವೆ, ವಿಶಾಲ ಮನೋಭಾವನೆಯಿಂದ ಶ್ರೀ ಮಾತೆಯ ಪೂಜೆ ಈವರೆಗೆ ಮಾಡಿದ್ದೇನೆ. ನೂತನ ಕಾರ್ಯಕಾರಿ ಸಮಿತಿಯು ಸನ್ನಿಧಿಯ ಮಹತ್ತರ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ವಿನಂತಿಸಿದರು.
ಲೇಖಕ ನಿತ್ಯಾನಂದ ಬೆಳುವಾಯಿ ಕಾರ್ಯಕ್ರಮ ನಿರ್ವಹಿಸಿದರು. ಪ್ರತಿದಿನ ನಡೆದ ಭಜನೆಯಲ್ಲಿ ಕೋಲಿವಾಡ ದುರ್ಗಾಪರಮೇಶ್ವರಿ ಭಜನ ಮಂಡಳಿ, ಕಲ್ವಾ ಫ್ರೆಂಡ್ಸ್ ಭಜನ ಮಂಡಲಿ, ಥಾಣೆ ಬಂಟ್ಸ್ ಭಜನ ಮಂಡಳಿ, ಘೋಡ್ ಬಂದರ್‌ರೋಡ್ ಕನ್ನಡ ಸಂಘ ಭಜನ ಮಂಡಳಿ, ಆಯ್ಯಪ್ಪ ಭಜನ ಮಂಡಳಿ, ಕೊಂಡೆವೂರು ಶ್ರೀ ಯೋಗಾನಂದ ಭಜನ ಮಂಡಳಿ ಮುಂಬಯಿ ಸಮಿತಿ, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಲ್ಕುಮ…, ಶ್ರೀ ದುರ್ಗಾಪರಮೇಶ್ವರಿ ಭಜನ ಮಂಡಳಿ ಪನ್ವೆಲ…, ಓಂ ಶಕ್ತಿ ಭಜನ ಮಂಡಳಿ ಥಾಣೆ ಮೊದಲಾದವರು ಪಾಲ್ಗೊಂಡರು. ಸ್ಥಳೀಯ ಉದ್ಯಮಿಗಳು, ತುಳು ಕನ್ನಡಿಗರು, ಕನ್ನಡೇತರು, ಪರಿಸರದ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವಿಕರಿಸಿದರು.
ಚಿತ್ರ-ವರದಿ: ರಮೇಶ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.