ರಾಷ್ಟ್ರ ರಾಜಧಾನಿಯಲ್ಲಿ ನಾಲ್ಕನೇ ದಿನವೂ ವಾಯು ಗುಣಮಟ್ಟ ಕಳಪೆ
Team Udayavani, Oct 13, 2019, 7:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ವಾಯು ಗುಣಮಟ್ಟ ಕಳಪೆಯಾಗಿದ್ದು, ವಾಯು ಗುಣಮಟ್ಟದ ಸೂಚ್ಯಂಕ 266 ತಲುಪಿದೆ ಎಂದು ವಾಯು ಗುಣಮಟ್ಟ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ. ಮುಂಬರುವ ದಿನಗಳಲ್ಲಿ ವಾಯುವಿನ ಗುಣಮಟ್ಟ ಮತ್ತಷ್ಟು ಕುಸಿಯಲಿದ್ದು, 29 ವರ್ಷಗಳಲ್ಲಿಯೇ ದೆಹಲಿ ವಾಯು ಮಾಲಿನ್ಯದ ಮಟ್ಟ ಗಂಭೀರ ಸ್ಥಿತಿಗೆ ತಲುಪಿದೆ.
ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ಕೃಷಿ ಭೂಮಿಗಳಲ್ಲಿ ವ್ಯಾಪಕವಾಗಿ ಬಣವೆ, ಕೃಷಿ ಭೂಮಿಯ ಕಳೆಗೆ ಬೆಂಕಿ ಹಾಕುತ್ತಾರೆ. ಇದರಿಂದ ಉತ್ಪತ್ತಿಯಾಗುವ ಹೊಗೆಭರಿತ ಗಾಳಿ ದಿಲ್ಲಿಯನ್ನು ಆವರಿಸುತ್ತಿದೆ ಎನ್ನಲಾಗಿದೆ.
ವರದಿ ತಿಳಿಸಿರುವ ಪ್ರಕಾರ, ವಾಯು ಗುಣಮಟ್ಟ ಸೂಚ್ಯಂಕ 0-50 ಇದ್ದರೆ ವಾತಾವರಣ ಉತ್ತಮವಾಗಿರುತ್ತದೆ. 51-100 ಇದ್ದರೆ ತೃಪ್ತಿದಾಯಕ ಹಾಗೂ 101-200 ಇದ್ದರೆ ಮಧ್ಯಮ ಸ್ಥಿತಿಯಲ್ಲಿರಲ್ಲಿದ್ದು, 201-300 ಇದ್ದರೆ ಕಳಪೆ 301-400 ಇದ್ದರೆ ತೀರಾ ಕಳಪೆಯಾಗಿರುತ್ತದೆ.
ದಿಲ್ಲಿಯ ಕೆಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ ಪ್ರಮಾಣ ತೀರಾ ಕಳಪೆಯಾಗಿದ್ದು, ಧೀರ್ ಪುರ್ ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ 313, ಮಥುರಾ ರಸ್ತೆ 306, ದೆಹಲಿ ವಿಶ್ವವಿದ್ಯಾಲಯ ಬಳಿ 300ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.