ಮಹರ್ಷಿ ವಾಲ್ಮೀಕಿಗೆ ಜಿಲ್ಲಾದ್ಯಂತ ನಮನ


Team Udayavani, Oct 14, 2019, 3:00 AM IST

maharshi-va

ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರದಿಂದ ಭಾನುವಾರ ಆಚರಿಸಲಾಯಿತು. ರಜೆ ದಿನವಾದರೂ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ರೂಪಿಸಿತ್ತು. ಜಿಲ್ಲಾ ಕೇಂದ್ರದಲ್ಲಿ ವಾಲ್ಮೀಕಿ ಭಾವಚಿತ್ರದಿಂದ ಅಲಂಕೃತಗೊಂಡಿದ್ದ ಸ್ತಬ್ದಚಿತ್ರಗಳು ಸಾಕಷ್ಟು ಸದ್ದು ಮಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು. ಮಹರ್ಷಿ ವಾಲ್ಮೀಕಿ ಛದ್ಮವೇಷ ಧರಿಸಿದ್ದ ವಿದ್ಯಾರ್ಥಿಗಳು ವೇದಿಕೆಯಲ್ಲಿ ಕಾಣಿಸಿಕೊಂಡು ವಾಲ್ಮೀಕಿ ಪ್ರತಿರೂಪದಂತೆ ಕಂಡರು.

ಚಿಕ್ಕಬಳ್ಳಾಪುರ: ರಾಮಾಯಣದಲ್ಲಿ ರಾಮನ ಜೀವನದ ವೃತ್ತಾಂತವನ್ನಷ್ಟೇ ಹೇಳದೆ ರಾಜನೀತಿ, ಮಾನವೀಯ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ಪರಿಶ್ರಮವನ್ನು ಸಮಾಜಕ್ಕೆ ಸಾರಿದ ಮಹಾನ್‌ ಮೇದಾವಿ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು, ಚಿಂತನೆಗಳು ಇಂದಿಗೂ ಜೀವಂತವಾಗಿವೆ ಎಂದು ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು. ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಂಗವಾಗಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಪರಿಸರದಿಂದ ಪ್ರೇರಣೆ: ವಾಲ್ಮೀಕಿ ಸಾಮಾನ್ಯ ಬುಡಕಟ್ಟು ಜನಾಂಗದ ಬೇಟೆಗಾರ. ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಸುತ್ತಮುತ್ತಲಿನ ಪರಿಸರದಿಂದ ಪ್ರೇರಣೆಗೊಂಡು ಮಹಾಕವಿಯಾದರು. ರಾಯಾಯಣ ಅನ್ನುವ ಬಹುದೊಡ್ಡ ಗ್ರಂಥ ಬರೆದು ಇಡೀ ವಿಶ್ವಕ್ಕೆ ಪ್ರಸಿದ್ಧಿಯಾದರು. ಈ ಕೃತಿ ಇಡೀ ಜಗತ್ತಿನ ಗಮನಾರ್ಹ ಕೃತಿಗಳ ಸಾಲಿನಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇದನ್ನು ಬರೆದ ವಾಲ್ಮೀಕಿ ಋಷಿಯವರ ಪಾಂಡಿತ್ಯ ದೊಡ್ಡದು ಎಂಬುದು ನಮಗೆಲ್ಲರಿಗೂ ತಿಳಿಯುತ್ತದೆ ಎಂದರು.

ಸಮಾಜ ಸುಧಾರಕ: ಮುಖ್ಯ ಭಾಷಣಕಾರ ಎನ್‌ಎಂಕೆಆರ್‌ವಿ ಮಹಿಳಾ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಎಚ್‌.ಕೆ.ನರಸಿಂಹಮೂರ್ತಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಸಮಾಜ ಸುಧಾರಕರು ಕೂಡ ಆಗಿದ್ದಾರೆ. ರಾಮರಾಜ್ಯದ ಬಗ್ಗೆ ಸಂದೇಶ ನೀಡಿದ್ದಾರೆ. ರಾಜನು ಎಷೇr ದೊಡ್ಡವನಿದ್ದರೂ ಪ್ರಜೆಗಳ ಹತ್ತಿರ ಹೋಗಿ ಅವರ ನೋವು ನಲಿವು ಆಲಿಸಬೇಕು ಎಂದು ವಾಲ್ಮೀಕಿ ಋಷಿಗಳು ಹೇಳಿದ್ದಾರೆ. ಎಲ್ಲರೂ ಒಳ್ಳೆಯ ಕೆಲಸ ಮಾಡಿದಾಗಲೇ ಸಮಾಜ ಸುಧಾರಣೆಯಾಗುತ್ತದೆ ಎಂದು ರಾಮಾಯಣ ಕೃತಿಯಲ್ಲಿ ಸಂದೇಶವಿದೆ ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರಿಗೆ ಹಾಗೂ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳನ್ನು ಸನ್ಮಾನಿಸಲಾಯಿತು. ಕಾಯಕ್ರಮದಲ್ಲಿ ಜಿಪಂ ಪ್ರಭಾರಿ ಅಧ್ಯಕ್ಷೆ ನಿರ್ಮಲಾ, ಸಿಇಒ ಬಿ.ಫೌಜಿಯಾ ತರುನ್ನುಮ್‌, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ನಗರ ಕೋಶಾಭಿವೃದ್ಧಿ ಅಧಿಕಾರಿ ರೇಣುಕಾ, ಡಿವೈಎಸ್‌ಪಿ ಪ್ರಭುಶಂಕರ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್‌ ಆನಂದ ರೆಡ್ಡಿ ಉಪಸ್ಥಿತರಿದ್ದರು.

ಪಲ್ಲಕ್ಕಿಗಳ ಮೆರವಣಿಗೆ: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಅವರ ಭಾವಚಿತ್ರ, ಸ್ತಬ್ಧಚಿತ್ರಗಳು ಹಾಗೂ ಪಲ್ಲಕ್ಕಿಯೊಂದಿಗೆ ಶ್ರೀ ರಂಗನಾಥಸ್ವಾಮಿ ದೇವಾಲಯದಿಂದ ನಗರದ ಬಿ.ಬಿ. ರಸ್ತೆಯಲ್ಲಿರುವ ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು. ಸುಮಾರು 50 ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ವಿಶೇಷ ಅಲಂಕಾರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಮಹರ್ಷಿಗಳ ಜಯಂತಿಗೆ ಕಳೆ ತಂದುಕೊಟ್ಟವು. ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಗಾರಡಿಬೊಂಬೆ ಹಾಗೂ ಕೀಲುಕುದುರೆ ಮತ್ತಿತರ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಗಮನ ಸೆಳೆದವು. ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ಸಮುದಾಯದ ಯುವಕರು ನೃತ್ಯ ಪ್ರದರ್ಶಿಸಿದರು.

ಸಂಸದರು ಬಂದರೂ ಸ್ವಾಗತಿಸಲು ಯಾರು ಇರಲಿಲ್ಲ: ಜಿಲ್ಲಾಡಳಿತದಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಸದ ಬಿ.ಎನ್‌.ಬಚ್ಚೇಗೌಡ ಆಗಮಿಸಿದರೂ ಅವರನ್ನು ಸ್ವಾಗತಿಸಲು ಸ್ಥಳದಲ್ಲಿ ಯಾರು ಇರಲಿಲ್ಲ. ಸಂಸದರು ಬರುವಷ್ಟರದಲ್ಲಿ ಮೆರವಣಿಗೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ, ಸಿಇಒ ಉದ್ಘಾಟಿಸಿದ್ದರು. ಮೊದಲು ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದ ಸಂಸದರಿಗೆ ಖಾಲಿ ಕುರ್ಚಿಗಳ ದರ್ಶನ ಆಯಿತು.

ಅಲ್ಲಿಂದ ಮೆರವಣಿಗೆ ಬಳಿ ಬರುವಷ್ಟರಲ್ಲಿ ಮೆರವಣಿಗೆ ಆರಂಭಗೊಂಡಿತು. ಕೊನೆಗೂ ಸಂಸದರು ಮೆರವಣಿಗೆಯಲ್ಲಿ ಕೆಲಕಾಲ ಪಾಲ್ಗೊಂಡು ಅಲ್ಲಿಂದ ದೇವನಹಳ್ಳಿ, ಹೊಸಕೋಟೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳಿಸಿದರು. ಸಂಸದರ ಆಪ್ತ ಸಹಾಯಕರು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದರೂ ಫ‌ಲ ಕೊಡಲಿಲ್ಲ. ಸಂಸದರು ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸದೇ ಮೆರವಣಿಗೆಯಲ್ಲಿದ್ದು ಹೊರಟರು. ಇನ್ನೂ ಅಧಿಕಾರಿಗಳು ಶಿಷ್ಟಾಚಾರ ಮರೆತು ತಾವೇ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸಿದ್ದು, ಚರ್ಚೆಗೆ ಗ್ರಾಸವಾಯಿತು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.