ಎಪಿಎಂಸಿಯಲ್ಲಿ ಸ್ವಚ್ಛತೆ ಮರೀಚಿಕೆ
Team Udayavani, Oct 14, 2019, 3:00 AM IST
ಚಿಂತಾಮಣಿ: ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯಗಳಿಲ್ಲದೇ ರೈತರು ಪರದಾಡುತ್ತಿದ್ದು, ಕೂಡಲೇ ಮಾರುಕಟ್ಟೆಯಲ್ಲಿ ಸಮಸ್ಯೆಗಳನ್ನು ಈಡೇರಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಾರುಕಟ್ಟೆ ಕಾರ್ಯದರ್ಶಿ ಉಮಾ ಅವರನ್ನು ಒತ್ತಾಯಿಸಿದ್ದಾರೆ.
ಸ್ವಚ್ಛತೆ ಮರೀಚಿಕೆ: ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮತ್ತು ಟೊಮೆಟೋ ಹಾಗೂ ಗೋಡಂಬಿ ಸೇರಿದಂತೆ ಇತರೆ ತರಕಾರಿಗಳ ಹರಾಜಿಗೆ ರಾಜ್ಯದ ವಿವಿಧ ಕಡೆಗಳಿಂದ ಬಂದ ರೈತರು ಹರಾಜಿನಲ್ಲಿ ತಮ್ಮ ಬೆಳೆಗಳನ್ನು ಮಾರಾಟ ಮಾಡಿಕೊಳ್ಳುತ್ತಾರೆ. ಇದರಿಂದ ಮಾರುಕಟ್ಟೆಗೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಮಾರುಕಟ್ಟೆಯಲ್ಲಿ ಮಾತ್ರ ಸ್ವಚ್ಛತೆ ಮರೀಚಿಕೆಯಾಗಿದೆ. ಕಸ ಕಡ್ಡಿ ಎಲ್ಲೆಂದರಲ್ಲಿ ಬಿಸಾಡಿದ ಪರಿಣಾಮ ಕೊಳಚೆ ನೀರು ನಿಂತು ಮಾರುಕಟ್ಟೆಯಲ್ಲ ಅವ್ಯವಸ್ಥೆಯ ಆಗರವಾಗಿದೆ.
ಗಬ್ಬುನಾರುತ್ತಿರುವ ಶೌಚಾಲಯ: ಎಪಿಎಂಸಿ ಮಾರುಕಟ್ಟೆಯಲ್ಲಿರುವ ಶೌಚಾಲಯಗಳು ದುರ್ವಾಸನೆ ಬೀರುತ್ತಿವೆ. ಉಪಯೋಗಕ್ಕೆ ಯೋಗ್ಯವಿಲ್ಲದಿರುವುದರಿಂದ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುವ ರೈತರು ಪರದಾಡುವಂತಾಗಿದ್ದು, ಶೌಚಾಲಯಗಳನ್ನು ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.
ಪ್ರತ್ಯೇಕ ಸ್ಥಳ ನಿಗದಿಪಡಿಸಿ: ಎಪಿಎಂಸಿ ಯಾರ್ಡ್‌ನಲ್ಲಿ ಹೆಚ್ಚಿನ ವ್ಯಾಪಾರ ಮತ್ತು ವ್ಯವಹಾರ ನಡೆಯುವುದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಿ ಟ್ರಾಫಿಕ್‌ಜಾಮ್ ನಿಯಂತ್ರಿಸಲು ಕ್ರಮ ಜರುಗಿಸುವುದು ಮತ್ತು ಲಾರಿ, ಟೆಂಪೋ ಹಾಗೂ ಆಟೋ, ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪ್ರತ್ಯೇಕವಾದ ಸ್ಥಳ ನಿಗದಿಡಿಪಡಿಸಿ ವಾಹನ ಕಳ್ಳತನ ನಡೆಯದಂತೆ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.
ಜಾನುವಾರು ಸಂತೆಗೆ ಸ್ಥಳ ನೀಡಿ: ಪುರಾತನ ಕಾಲದಿಂದ ನಡೆಯುತ್ತಿದ್ದ ಜಾನುವಾರುಗಳ ಸಂತೆಯ ಜಾಗವನ್ನು ಖಾಲಿ ಮಾಡಿಸಿದ್ದು, ಅನೇಕ ವರ್ಷಗಳಿಂದ ಜಾನುವಾರುಗಳ ಸಂತೆ ನಡೆಸಲು ಜಾಗವಿಲ್ಲದೇ ಖಾಸಗಿ ಜಾಗದಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತಿದೆ. ಕೂಡಲೇ ಜಾನುವಾರುಗಳ ಸಂತೆ ನಡೆಸಲು ಸರ್ಕಾರ ಜಾಗವನ್ನು ಗುರುತಿಸಿಕೊಡಬೇಕೆಂದು ಒತ್ತಾಯಿಸಿದರು. ಕರ್ನಾಟಕ ರೈತ ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿದ ಎಪಿಎಂಸಿ ಮಾರುಕಟ್ಟೆಯ ಕಾರ್ಯದರ್ಶಿ ಉಮಾ ಮಾತನಾಡಿ, ಶೀಘ್ರವೇ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ಜೆ.ವಿ.ರಘುನಾಥರೆಡ್ಡಿ, ಕೆ.ವೆಂಕಟರಾಮಯ್ಯ, ಎಸ್.ವೆಂಕಟಸುಬ್ಬಾರೆಡ್ಡಿ, ತಿಮ್ಮರಾಯಪ್ಪ, ಬಿ.ವಿ.ಶ್ರೀರಾಮರೆಡ್ಡಿ, ಸತ್ಯನಾರಾಯಣ, ಜಯರಾಮರೆಡ್ಡಿ, ವೆಂಕಟೇಶಪ್ಪ, ನರಸಿಂಹಮೂರ್ತಿ, ಸೀಕಲ್ ವೆಂಕಟೇಶ್, ತ್ಯಾಗರಾಜು, ಅಶ್ವತ್ಥಗೌಡ.ವೈ.ಎಂ, ರಾಮನ್ನ, ಎಸ್.ವಿ.ಗಂಗುಲಪ್ಪ, ಕೃಷ್ಣ ಸಿ.ಎಂ, ಶ್ರೀ ನಿವಾಸಪ್ರಸಾದ್, ಬಚ್ಚಣ್ಣ, ಮಿಲ್ ನಾರಾಯಣಸ್ವಾಮಿ, ಅಂಕಾಲಮಡಗು ಶ್ರೀ ರಾಮರೆಡ್ಡಿ, ಸೀತಾರಾಮರೆಡ್ಡಿ, ವೆಂಕಟರೆಡ್ಡಿ, ರಾಮಚಂದ್ರಪ್ಪ, ಆನಂದ್, ಮುನಯಪ್ಪ, ಆಂಜನೇಯರೆಡ್ಡಿ, ಶ್ರೀರಾಮ್, ನರಸಪ್ಪ, ವನಜಾಕ್ಷಮ್ಮ, ನಾಗರಾಜ್, ರೆಡ್ಡೆಪ್ಪ ಕೆ.ವಿ, ಸುರೇಶ್, ಚೋಟೂಸಾಬ್, ನಾರಾಯಣಸ್ವಾಮಿ, ಮಂಜುನಾಥ್, ನಾಗೇಶ್, ಚಂದ್ರಶೇಖರ್ ಇದ್ದರು.
ಕ್ಯಾಂಟೀನ್, ಬ್ಯಾಂಕ್ ಸ್ಥಾಪಿಸಿ: ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಕೋಟ್ಯಂತರ ರೂ. ವ್ಯವಹಾರ ನಡೆಯುತ್ತದೆ. ಆದರೆ ಮಾರುಕಟ್ಟೆಯಲ್ಲಿ ಯಾವುದೇ ಒಂದು ಬ್ಯಾಂಕ್ ಕೇಂದ್ರ ಇಲ್ಲದಿರುವುದು ತೀವ್ರ ತೊಂದರೆಯಾಗಿದೆ. ರೈತರಿಗೆ ಮಾರುಕಟ್ಟೆಯಲ್ಲಿ ಬಂದ ಹಣವನ್ನು ಬ್ಯಾಂಕ್‌ಗೆ ಹಾಕಬೇಕಾದರೆ ಒಂದು ಕಿ.ಮೀ ದೂರ ಹೋಗಬೇಕು. ಇದರಿಂದ ಕಳ್ಳತನವಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಮಾರುಕಟ್ಟೆಯಲ್ಲೇ ಬ್ಯಾಂಕ್ ಸ್ಥಾಪಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ರೈತರಿಗೆ ಉಪಾಹಾರ ಮತ್ತು ಊಟಕ್ಕೆ ಕ್ಯಾಂಟೀನ್ ನಿರ್ಮಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.