ರಾಮಾಯಣ ಮಹಾಕಾವ್ಯ ಜೀವನಕ್ಕೆ ಸ್ಪೂರ್ತಿ


Team Udayavani, Oct 14, 2019, 3:00 AM IST

ramayana

ಹಾಸನ: ರಾಮಾಯಣ ಮಹಾ ಕಾವ್ಯವು ಕೇವಲ ಗ್ರಂಥವಲ್ಲ.ಅದು ಪ್ರತಿಯೊಬ್ಬರ ಜೀವನಕ್ಕೆ ಸ್ಪೂರ್ತಿದಾಯಕ ಮಾರ್ಗದರ್ಶಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಭಿಪ್ರಾಯಪಟ್ಟರು.  ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಾಸನ ನಗರ ಸಭೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿಯವರು ಬರೆದ ರಾಮಾಯಾಣ ಮಹಾ ಕಾವ್ಯದಲ್ಲಿ ಪ್ರತಿಪಾದಿಸಿರುವ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿರುತ್ತವೆ. ಮಹಾಪುರುಷರ ಹಾಗೂ ಮಹಾ ಕಾವ್ಯಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದು ಆಶಿಸಿದರು.

ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು:  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌. ಶ್ವೇತಾ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಹಿಂದುಳಿದ ಸಮುದಾಯದ ಜನರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಒಗ್ಗಟ್ಟು ಮುಖ್ಯ. ನಾಯಕ ಸಮುದಾಯ ಅಥವಾ ಹಿಂದುಳಿದ ಸಮುದಾಯದ ಪ್ರತಿಯೊಬ್ಬರೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮೀಸಲಾತಿ ಸದ್ಬಳಕೆಯಾಗಲಿ: ಶೇ.7.5 ರಷ್ಟು ಮೀಸಲಾತಿಯನ್ನು ಪರಿಶಿಷ್ಟ ಪಂಗಡದವರು ಪಡೆದುಕೊಂಡು ಮುಂದಿನ ಪೀಳಿಗೆ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕರಿಸಬೇಕು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ವಾಲ್ಮೀಕಿ ಭವನ ನಿರ್ಮಾಣ: ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಪ್ರೀತಂ.ಜೆ.ಗೌಡ ಅವರು, ಪ್ರತಿ ಸಮುದಾಯವು ಸಂಘಟಿತರಾಗಿ ಸವಲತ್ತುಗಳನ್ನು ಬಳಸಿಕೊಳ್ಳಬೇಕು. ಹಾಸನ ನಗರದಲ್ಲಿ ವಾಲ್ಮೀಕಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ನಿಮಾರ್ಣಕ್ಕೆ ನಿವೇಶನವನ್ನು ಡಿಸೆಂಬರ್‌ ಅಂತ್ಯದೊಳಗೆ ಒದಗಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಮಂಜೂರಾತಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸರ್ವರೂ ಸಮಾನರೆಂಬ ಆದರ್ಶ ಮೈಗೂಡಿಸಿಕೊಳ್ಳಿ. ಪ್ರತಿಯೊಬ್ಬರೂ ಯಾವುದೇ ಜಾತಿ ಬೇದಲ್ಲದೆ ಸರ್ವರೂ ಸಮಾನರೆಂಬ ಆದರ್ಶ ಮೈಗೂಡಿಸಿಕೊಳ್ಳಬೇಕು. ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನದ ತತ್ವಾದರ್ಶಗಳನ್ನು ಅನುಸರಿಸಬೇಕು ಎಂದರು. ಮುಖ್ಯ ಭಾಷಣಕಾರರಾಗಿದ್ದ ಸಹಾಯಕ ಪ್ರಾಧ್ಯಾಪಕ ನಂಜುಂಡಸ್ವಾಮಿ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ್‌ ಸೆಪಟ್‌, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ ಪರಮೇಶ್‌, ತಾಲೂಕು ಪಂಚಾುತಿ ಅಧ್ಯಕ್ಷ ನಿಂಗೇಗೌಡ, ಪ್ರಭಾರ ಅಪರ ಜಿಲ್ಲಾಧಿಕಾರಿ ಎಚ್‌.ಎಲ್‌.ನಾಗರಾಜ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ನಾಯಕ ಸಮುದಾಯದ ಮುಖಂಡ ಮಹಾಂತಪ್ಪ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನಾಯಕ ಸಮುದಾಯದ ಸಾಧಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಆಕರ್ಷಕ ಮೆರವಣಿಗೆ: ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಶಾಸಕ ಪ್ರೀತಂ.ಜೆ.ಗೌಡ, ಜಿಲ್ಲಾ ಪಂಚಾತತಿ ಅಧ್ಯಕ್ಷರಾದ ಬಿ.ಎಸ್‌. ಶ್ವೇತಾ, ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಡೋಲು ಕುಣಿತ, ವೀರಗಾಸೆ, ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೂಲಕ ನೋಡುಗರ ಗಮನ ಸೆಳೆದವು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.