ಆರ್ಥಿಕ ಹಿಂಜರಿತದ ಬಗ್ಗೆ ಜನಾಂದೋಲನ ಅಗತ್ಯ


Team Udayavani, Oct 14, 2019, 3:05 AM IST

arthika

ಬೆಂಗಳೂರು: ಆರ್ಥಿಕ ಹಿಂಜರಿತದ ಬಗ್ಗೆ ಯುಜ ಜನತೆ ಜಾಗೃತರಾಗಬೇಕಿದ್ದು, ಈ ಬಗ್ಗೆ ಜನರಿಗೆ ಅರಿವು ಮೂಡಿಸಿ ಜನಾಂದೋಲನ ರೂಪಿಸಬೇಕಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್‌.ಮಹೇಶ್‌ ಹೇಳಿದರು. ಬಹುಜನ ವಿದ್ಯಾರ್ಥಿ ಸಂಘ ಭಾನುವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ “ಭಾರತದ ಆರ್ಥಿಕ ಹಿಂಜರಿತ ಕಾರಣ -ಪರಿಣಾಮ- ಪರಿಹಾರ’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಕಾರ್ಮಿಕರ ಸಮಸ್ಯೆ ಬಗ್ಗೆ ಮಾತನಾಡಿದರೆ ಕಮ್ಯುನಿಸ್ಟರು ಎಂಬ ಹಣೆಪಟ್ಟಿ ಕಟ್ಟುತ್ತಾರೆ. ಆದರೆ, ಅದೇ ಕಾರ್ಮಿಕ ವರ್ಗ ದೇಶದ ಆರ್ಥಿಕತೆ‌ಗೆ ಹೆಚ್ಚಿನ ಕೊಡುಗೆ ನೀಡುತಿದೆ. ಕಾರ್ಮಿಕ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡದಿದ್ದರೆ ದೇಶದ ಆರ್ಥಿಕತೆ ಚೇತರಿಕೆ ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸೃಷ್ಟಿ ಮಾಡದಿದ್ದರೆ ಅವರೆಲ್ಲಾ ಕೆಲಸಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಬರುತ್ತಾರೆ. ನಗರ ಪ್ರದೇಶಗಳಲ್ಲಿ ಸಮರ್ಪಕವಾಗಿ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರಗಳು ವಿಫ‌ಲವಾಗುತ್ತವೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗಕ್ಕೆ ಒತ್ತು ನೀಡುವುದರ ಜತೆಗೆ ಕೃಷಿ ಚಟುವಟಿಕೆಗಳಿಗೆ ಸರ್ಕಾರ ಒತ್ತು ನೀಡಿದರೆ ಮಾತ್ರ ಆರ್ಥಿಕತೆ ಚೇತರಿಕೆ ಸಾಧ್ಯ ಎಂದರು.

ಪ್ರಾಧ್ಯಾಪಕಿ ಎಂ.ಶೈಲಜಾ ಮಾತನಾಡಿ, ನೋಟು ಅಮಾನ್ಯ, ಜಿಎಸ್‌ಟಿ, ಬ್ಯಾಂಕ್‌ಗಳ ಎನ್‌ಪಿಎ, ಉದ್ಯೋಗ ಸೃಷ್ಟಿ ವೈಫ‌ಲ್ಯ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಸೇರಿ ಕೇಂದ್ರ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳೇ ಇಂದಿನ ಆರ್ಥಿಕ ಹಿಂಜರಿತಕ್ಕೆ ಕಾರಣ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ರಾಮಾಂಜಿನೇಯಲು, ಸರ್ಕಾರಗಳು ಆಡಳಿತ ನಡೆಸುವಲ್ಲಿ ವಿಫ‌ಲವಾಗಿರುವುದೇ ಇಂದಿನ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿದೆ. ಜಿಡಿಪಿ ಕುಸಿತವನ್ನು ಕೇವಲ ಉತ್ಪಾದನಾ ಪ್ರಮಾಣ ಆಧರಿಸಿ ಲೆಕ್ಕ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿವಿಎಸ್‌ ಮುಖಂಡ ಎ.ಹರಿರಾಮ್‌, ಮಹೇಶ್‌ ದಾಸ್‌, ಎಚ್‌ಎಎಲ್‌ ನೌಕರರ ಸಂಘದ ಪದಾಧಿಕಾರಿ ಶಿವಲಿಂಗ ಮತ್ತು ಹೊಸಕೋಟೆ ತಾಲೂಕು ಬಿಜೆಪಿ ಉಪಾಧ್ಯಕ್ಷ ಎಚ್‌.ಎಸ್‌.ಸುಬ್ಬರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.