ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟರಿಗೆ ಉತ್ತೇಜನ
Team Udayavani, Oct 14, 2019, 10:57 AM IST
ಧಾರವಾಡ: ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಕವಿಸಂನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೂತನ ಕೈಗಾರಿಕಾ ನೀತಿ ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಪ್ರಕಟವಾಗಲಿದೆ. ಅದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದರು. ಬಸವಣ್ಣ, ಡಾ| ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಸೇರಿದಂತೆ ಎಲ್ಲಾ ಮಹನೀಯರು ಯಾವುದೇ ಜಾತಿ, ಮತಗಳಿಗೆ ಸೀಮಿತವಲ್ಲ. ಮಹರ್ಷಿ ವಾಲ್ಮೀಕಿ ಹೆಸರು ತೆಗೆದುಕೊಂಡ ಕೂಡಲೇ ಶ್ರೇಷ್ಠ ಮಹಾಕಾವ್ಯ ರಾಮಾಯಣ ಎಲ್ಲರಿಗೂ ನೆನಪಾಗುತ್ತದೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಭಾರತ ಸರ್ಕಾರ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ವಿಶೇಷವಾಗಿ ಎಸ್ಟಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಾರಂಭಿಸಿದೆ. ದೇಶದಲ್ಲಿ ಈಗಾಗಲೇ 284 ಶಾಲೆಗಳಿವೆ. ರಾಜ್ಯದಲ್ಲಿಯೂ ವಿಶೇಷ ಕೌಶಲಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದರು.
ರಾಜಪ್ರಭುತ್ವ, ಆಡಳಿತ, ಕಲ್ಯಾಣ ರಾಜ್ಯ ಕಲ್ಪನೆಗಳು ನಮಗೆ ಸಿಕ್ಕಿರುವುದೇ ರಾಮಾಯಣದ ಮೂಲಕ. ತ್ರೇತಾಯುಗದಿಂದ ಇಲ್ಲಿಯವರೆಗೆ ನಾವೆಲ್ಲ ರಾಮಾಯಣ ಹಾಗೂ ವಾಲ್ಮೀಕಿಯನ್ನು ಸ್ಮರಿಸುತ್ತಿರುವುದು ಅದರ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ವಿಪ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಲ್ಲ, ಎಲ್ಲರಿಗೂ ಅವರು ಪೂಜ್ಯರು. ಅಂದಿನ ಕಾಲದಲ್ಲಿ 24 ಸಾವಿರ ಶ್ಲೋಕಗಳನ್ನು ನವಿಲುಗರಿಯಿಂದ ಬರೆದಿದ್ದು ಸಾಮಾನ್ಯ ಸಂಗತಿಯಲ್ಲ. ರಾಮಾಯಣದ ಮೂಲಕ ಪ್ರೀತಿ, ವಿಶ್ವಾಸ, ಪರಸ್ಪರ ನಂಬಿಕೆ, ಸದ್ಗುಣಗಳನ್ನು ಕಲಿಯಲು ಸಾಧ್ಯವಾಗಿದೆ ಎಂದರು. ವಾಲ್ಮೀಕಿ ಜನಾಂಗದ ಸಾಧಕರಾದ ಬಿ. ಮಾರುತಿ, ತಿಮ್ಮಣ್ಣ ಎಸ್. ಕ್ವಾಟಿಹಳ್ಳಿ, ಸುರೇಶಬಾಬು ತಳವಾರ, ಹನುಮಂತಪ್ಪ ಫ. ದೊಡ್ಡಮನಿ ಹಾಗೂ ಅರವಿಂದ ದೊಡ್ಡಮನಿ ಅವರನ್ನು ಸನ್ಮಾನಿಸಲಾಯಿತು. ಕುಷ್ಟಗಿಯ ಭಾರತಿ ನೀರಗೇರಿ ಉಪನ್ಯಾಸ ನೀಡಿದರು. ಡಿಸಿ ದೀಪಾ ಚೋಳನ್, ಎಸ್ಪಿ ಕಿಶೋರಬಾಬು, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಎಸಿ ಮಹ್ಮದ್ ಜುಬೇರ್, ಜಿಪಂ ಉಪಕಾರ್ಯದರ್ಶಿ ಎಸ್.ಜಿ. ಕೊರವರ, ಅಬಕಾರಿ ಉಪ ಆಯುಕ್ತ ಶಿವನಗೌಡ ಪಾಟೀಲ, ಪ್ರೊಬೆಷನರಿ ಐಎಎಸ್ ಅ ಧಿಕಾರಿ ಆಕೃತಿ ಬನ್ಸಾಲ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.