ಸಾಮಾಜಿಕ ಜಾಲತಾಣ ಖಾತೆಗೆ ಆಧಾರ್ ಲಿಂಕ್-ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್
Team Udayavani, Oct 14, 2019, 1:15 PM IST
ನವದೆಹಲಿ: ಆಧಾರ್ ಸಂಖ್ಯೆಯನ್ನು ಎಲ್ಲಾ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಎಲ್ಲಾ ವಿಚಾರಗಳಿಗೂ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾದ ಅಗತ್ಯವಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಖಾತೆಗಳ ಕುರಿತು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಅಭಿಪ್ರಾಯವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಈ ವಿಚಾರ ಈಗಾಗಲೇ ಮದ್ರಾಸ್ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ನೀವು ಬೇಕಿದ್ದರೆ ಮದ್ರಾಸ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಬಹುದು ಎಂದು ಸೂಚಿಸಿದೆ.
ಈ ಅರ್ಜಿಯನ್ನು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ದಾಖಲಿಸಿದ್ದು, ಆಧಾರ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಸೋಮವಾರ ಪಿಐಎಲ್ ನ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.