ಮಡಿಕೇರಿ: ಸೇನೆ ಭರ್ತಿ ರ್ಯಾಲಿಗೆ ಚಾಲನೆ, ಯುವಕರು ಭಾಗಿ

Team Udayavani, Oct 15, 2019, 5:16 AM IST

sene-barti-rally

ಮಡಿಕೇರಿ: ಭಾರತೀಯ ಸೇನೆಯ ವಿವಿಧ ವಿಭಾಗಗಳಿಗೆ ಆರು ದಿನಗಳ ಕಾಲ ನಡೆಯುವ ಸೇನಾ ಭರ್ತಿ ರ್ಯಾಲಿಗೆ ನಗರದ ಜನರಲ್‌ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು.

ಸೇನೆಯ ಬೆಂಗಳೂರು ಕೇಂದ್ರ ಕಚೇರಿಯ ಭರ್ತಿ ವಿಭಾಗದಿಂದ ಅ.18ರ ವರೆಗೆ ಮಡಿಕೇರಿಯಲ್ಲಿ ನಡೆಯುವ ರ್ಯಾಲಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಯುವಕರು ಪಾಲ್ಗೊಂಡಿದ್ದಾರೆ. ಬೆಳಗೆ 6 ಗಂಟೆಗೆ ಆರಂಭವಾದ ರಾಲಿಯಲ್ಲಿ ಮೊದಲಿಗೆ ಅಭ್ಯರ್ಥಿಗಳ ಎತ್ತರ ಪರೀಕ್ಷೆಯನ್ನು ನಡೆಸಿ ಬಳಿಕ ಮೈದಾನದ ಒಳಗೆ ಬಿಡಲಾಯಿತು. ತದನಂತರ 80 ಮಂದಿ ಯುವಕರ ತಂಡಕ್ಕೆ 1.6 ಕಿ.ಮೀ. ಓಟವನ್ನು ಕೇವಲ 6 ನಿಮಿಷಗಳಲ್ಲಿ ಪೂರೈಸುವ ಸಮಯವನ್ನು ನಿಗಧಿ ಪಡಿಸಲಾಗಿತ್ತು. ಓಟವನ್ನು ಯಶಸ್ವಿಯಾಗಿ ಪೂರೈಸಿದ ಅರ್ಹರನ್ನು ಅವರು ಕ್ರಮಿಸಿದ ಸಮಯದ ಆಧಾರದಲ್ಲಿ 3 ಪ್ರತ್ಯೇಕ ವರ್ಗಮಾಡಿ, ಬಳಿಕ ದೈಹಿಕ ಪರೀಕ್ಷಗೆ ಒಳಪಡಿಸಲಾಯಿತು. ಕೆಲವು ಯುವಕರು ಕೂದಲೆಳೆಯ ಅಂತರದಲ್ಲಿ ಓಟದಲ್ಲಿ ಅನುತ್ತೀರ್ಣರಾಗಿ ಭರ್ತಿಯಿಂದ ಹೊರ ನಡೆಯಲ್ಪಟ್ಟರೆ, ಮತ್ತೆ ಕೆಲವರು ಮುಂದಿನ ಪರೀಕ್ಷೆಗಳಿಗೆ ಅರ್ಹತೆ ಪಡೆದರು.

ಕೊಡಗು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ಮಹಾನಗರ, ಬೆ.ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಿಂದ ನೂರಾರು ಯುವಕರು ಶನಿವಾರ ಸಂಜೆಯ ವೇಳೆಗೆ ಮಡಿಕೇರಿಗೆ ಆಗಮಿಸಿದ್ದರು. ಭಾನುವಾರ ಬೆಳಗಿನ 4 ಗಂಟೆಯ ವೇಳೆಗೆ ಹಲವಾರು ಯುವಕರು ಮೈದಾನದಲ್ಲಿ ಉಪಸ್ಥಿತರಿದ್ದು ಭರ್ತಿಯಲ್ಲಿ ಆದಿಯಾಗಿ ಪಾಲ್ಗೊಂಡರು. ಬೆಂಗಳೂರು ವಲಯ ನೇಮಕಾತಿ ವಿಭಾಗದ ಅಧಿಕಾರಿ ಕರ್ನಲ್‌ ನವರತನ್‌ ಶಿಬಿಯಾ, ಬ್ರಿಗೇಡಿಯರ್‌ ರಾಯ್‌ ಮತ್ತು ಬೆಂಗಳೂರು ಕಮಾಂಡೋ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಶಿಬಿರಲ್ಲಿ ಹಾಜರಿದ್ದು, ಖುದ್ದಾಗಿ ವಿವಿಧ ಪರೀಕ್ಷೆಗಳನ್ನು ನೆರವೇರಿಸಿದರು.

ಬೆಂಗಳೂರಿನ ಆರ್ಮಿ ಸಪ್ಲೆç ಕೋರ್‌ನ ಸೈನ್ಯಾಧಿಕಾರಿ ಕರ್ನಲ್‌ ಬನ್ವರ್‌ ರಾಮ್‌ ಮತ್ತು ಸೇನಾ ಭರ್ತಿ ವಿಭಾಗದ ಯೋಧರು ಗುರುವಾರವೇ ಮಡಿಕೇರಿಗೆ ಆಗಮಿಸಿ, ಭರ್ತಿ ನಡೆಯುವ ಜನರಲ್‌ ತಿಮ್ಮಯ್ಯ ಮೈದಾನವನ್ನು ಸಜ್ಜುಗೊಳಿಸಿದ್ದರು. ಶನಿವಾರ ರಾತ್ರಿ ವೇಳೆಯಲ್ಲಿ ಸುರಿದ ಮಳೆಯಿಂದಾಗಿ ಮೈದಾನದಲ್ಲಿ ನೀರು ನಿಂತಿತ್ತಾದರೂ, ಸೇನಾ ಭರ್ತಿಯಲ್ಲಿ ಪಾಲ್ಗೊಂಡ ಯುವಕರು ಉತ್ಸಾಹದಿಂದಲೇ ಓಟದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಭರ್ತಿಗೆ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ ಯುವಕರನ್ನು ಹೊರತುಪಡಿಸಿ ಮೈದಾನಕ್ಕೆ ಯುವಕ ಪೋಷಕರು ಮತ್ತು ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಸೇನಾ ಯೋಧರು, ಜಿಲ್ಲಾ ಪೊಲೀಸ್‌ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಮೈದಾನದ ಸುತ್ತಲು ನಿಯೋಜಿಸಲಾಗಿತು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.