ಎಸ್‌ಡಿಎಂ ಡಾಕ್ಟರ್‌ 700ನೇ ಸಂಚಿಕೆ


Team Udayavani, Oct 15, 2019, 9:37 AM IST

huballi-tdy-1

ಧಾರವಾಡ: ವಾರದ ಪ್ರತಿ ಮಂಗಳವಾರ ಕೃಷಿರಂಗ ಕಾರ್ಯಕ್ರಮದಲ್ಲಿ ಪ್ರಸಾರ ಆಗುತ್ತಿರುವ ಎಸ್‌ಡಿಎಂ ಡಾಕ್ಟರ್‌ ಆರೋಗ್ಯ ಸಂವಾದ ಕಾರ್ಯಕ್ರಮದ 700ನೇ ಸಂಚಿಕೆಯ ಮಹೋತ್ಸವವನ್ನು ನಗರದ ಆಕಾಶವಾಣಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

700ನೇ ಸಂವಾದವನ್ನು ಸಾರ್ವಜನಿಕರೊಂದಿಗೆ ನಡೆಸಿಕೊಟ್ಟ ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ಡಾ|ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಪ್ರಾರಂಭವಾದ ಎಸ್‌ಡಿಎಂ ಡಾಕ್ಟರ್‌ ಆರೋಗ್ಯ ಸಂವಾದ ಕಾರ್ಯಕ್ರಮವು ತನ್ನ 14ನೇ ವರ್ಷದ ಈ ಇತಿಹಾಸದಲ್ಲಿ ಒಂದು ವಾರವೂ ತಪ್ಪದೇ ಪ್ರತಿ ಮಂಗಳವಾರ ಸಂಜೆ 7ರಿಂದ 7:30 ಗಂಟೆವರೆಗೆ ಬಿತ್ತರಗೊಳ್ಳುತ್ತಿದೆ ಎಂದು ಹೇಳಿದರು.

ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿ 2006 ಏ. 4ರಂದು ನಡೆಸಿಕೊಟ್ಟ ಮೊದಲ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್‌ ಸರ್ಜರಿಯ ಬಗ್ಗೆ ಮಾತನಾಡಿದ್ದೆ. ಆ ಬಳಿಕ 2015 ನ. 17ರಂದು 500ನೇ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಟೆಲಿವಿಷನ್‌ ಯುಗದಲ್ಲಿ ರೇಡಿಯೋದಲ್ಲಿ ಬಿತ್ತರವಾಗುವ ಶ್ರವಣ ಮಾಧ್ಯಮದ ಮಾತುಕತೆ ಎಷ್ಟರ ಮಟ್ಟಕ್ಕೆ ಸಾಧನೆ ಮಾಡಬಹುದು ಎಂಬ ಸಂಶಯವಿತ್ತು. ಆದರೆ, ಆರೋಗ್ಯದ ಕಳಕಳಿಯ ಒಂದು ಪ್ರಯತ್ನವು ಸಂಗೀತ ಕಾರ್ಯಕ್ರಮದ ಹೊರತಾಗಿ ಎರಡನೇ ಸ್ಥಾನದಲ್ಲಿದೆ ಎಂದರು.

ಆಕಾಶವಾಣಿ ಸಹಾಯಕ ನಿರ್ದೇಶಕ ಸತೀಶ ಪರ್ವತೀಕರ ಸಂವಾದ ನಿರೂಪಿಸಿದರು. ಎಸ್‌ಡಿಎಂ ಆಡಳಿತ ವರ್ಗದಿಂದ ಆಕಾಶವಾಣಿಯ ಸತೀಶ ಪರ್ವತೀಕರ, ಗಿರೀಶ ಪಾಟೀಲ ಹಾಗೂ ಸುನಿಲ್‌ ಕುಮಾರ ಅವರನ್ನು ಸನ್ಮಾನಿಸಲಾಯಿತು. 2005ರಲ್ಲಿ ಮಂಗಳೂರಿನಿಂದ ಧಾರವಾಡಕ್ಕೆ ಈ ಕಾರ್ಯಕ್ರಮ ತಂದ ವಿರೂಪಾಕ್ಷ ಬಡಿಗೇರ ಅವರನ್ನು, ಕಾರ್ಯಕ್ರಮ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ| ಏ.ಖ. ಪ್ರವೀಣಚಂದ್ರ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ| ರತ್ನಮಾಲಾ ದೇಸಾಯಿ, ಮಾಯಾ ಚಿಕ್ಕೇರೂರು, ಮಂಜುಳಾ ಪುರಾಣಿಕ, ಮಾಲಾ ಸಾಂಬ್ರಾಣಿ ಇದ್ದರು.

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.