ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಬರ್ಬರ ಹತ್ಯೆ: ವಾರದಲ್ಲಿ ನಡೆದ ಎರಡನೇ ಪ್ರಕರಣ
Team Udayavani, Oct 15, 2019, 9:50 AM IST
ನವದೆಹಲಿ: ಪಶ್ಚಿಮ ಬಂಗಾಳದ ಮಿಡ್ನಾಪೂರ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮೃತ ವ್ಯಕ್ತಿಯನ್ನು ಬಾಸುದೇಬ್ ಮೊಂಡಾಲ್ ಎಂದು ಗುರುತಿಸಲಾಗಿದ್ದು, ಬಾಕ್ಚ ಗ್ರಾಮದ ಮಾಜಿ ಪಂಚಾಯಿತಿ ಅಧ್ಯಕ್ಷರಾಗಿದ್ದರು.
ಸೋಮವಾರ ರಾತ್ರಿ ಘಟನೆ ನಡೆದಿದ್ದು ತಮ್ಮ ಮಗಳ ಮನೆಯಿಂದ ಹಿಂದಿರುಗುತ್ತಿದ್ದ ವೇಳೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಾರದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದ್ದು , ಭಾನುವಾರ ಸ್ಥಳೀಯ ಬಿಜೆಪಿ ಮುಖಂಡ ಹರಾಲ ದೇಬ್ ನಾಥ್ ರನ್ನು ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದರು. ವಾರದ ಹಿಂದೆ ಬೊಂದು ಪ್ರಕಾಶ್ ಪಾಲ್ , ಆತನ ಗರ್ಭಿಣಿ ಪತ್ನಿ ಮತ್ತು 6 ವರ್ಷದ ಮಗನನ್ನು ಮುರ್ಷಿದಾಬಾದ್ ನಲ್ಲಿ ಬರ್ಬರವಾಗಿ ಕೊಲೆಗೈಯಲಾಗಿತ್ತು.
ಕಳೆದ ಮೂರು ತಿಂಗಳಲ್ಲಿ ಪಶ್ಚಿಮ ಬಂಗಾಳದ 8 ಬಿಜೆಪಿ ಕಾರ್ಯಕರ್ತರನ್ನು ಸರಣಿ ಹತ್ಯೆ ಮಾಡಲಾಗಿತ್ತು ಎಂದು ಬಿಜೆಪಿ ಇದೇ ವೇಳೆ ಅರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.