ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Oct 15, 2019, 9:59 AM IST
ಧಾರವಾಡ: ನ್ಯಾಯವಾದಿ ಯಲ್ಲಪ್ಪ ಬೆಳ್ಳಕ್ಕಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಅನುಚಿತವಾಗಿ ವರ್ತಿಸಿದ ಉಪನಗರ ಠಾಣೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಇದಕ್ಕೂ ಮುನ್ನ ಸಂಘದಲ್ಲಿ ಚರ್ಚಿಸಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಕೋರ್ಟ್ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ಕೈಗೊಂಡ ನ್ಯಾಯವಾದಿಗಳು, ಬಳಿಕ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದೂರು ದಾಖಲಿಸಲು ಹೋದಾಗ ಉಪನಗರ ಠಾಣೆ ಅಧಿಕಾರಿಗಳು ಹಲ್ಲೆ ಮಾಡಿದವರೊಂದಿಗೆ ಶಾಮೀಲಾಗಿ ರಾಜಿ ಮಾಡಿಕೊಳ್ಳಲು ಸೂಚಿಸಿದ್ದರು. ಅಲ್ಲದೆ ಪಿಎಸ್‌ಐ ಶರಣಬಸವ ನಾಡಗೌಡ ಎಂಬುವರು ವಕೀಲರೊಂದಿಗೆ ಅನುಚಿತವಾಗಿ ವರ್ತಿಸಿ ಅವಮಾನಿಸಿದ್ದಾರೆ. ಇಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಡಿಸಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಬಿ.ಎಸ್. ಗೋಡಸೆ, ಉಪಾಧ್ಯಕ್ಷ ರಾಜು ಕೋಟಿ, ಎನ್.ಆರ್. ಮಟ್ಟಿ, ಆಶೀಷ ಮಗದುಮ್ಮ, ಆರ್.ಯು. ಬೆಳ್ಳಕ್ಕಿ, ಪ್ರಕಾಶ ಭಾವಿಕಟ್ಟಿ, ರೂಪಾ ಕೆಂಗಾನೂರ, ಪ್ರಕಾಶ ಉಡಿಕೇರಿ, ಕೆ.ಎಚ್. ಪಾಟೀಲ, ಗಾಯಾಳು ಯಲ್ಲಪ್ಪ ಬೆಳಕ್ಕಿ ಹಾಗೂ ಸಂಘದ ಸದಸ್ಯ ವಕೀಲರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.