ಶ್ರೀನಗರದಲ್ಲಿ ಪ್ರತಿಭಟನೆ; ಫಾರೂಖ್ ಅಬ್ದುಲ್ಲಾ ಸಹೋದರಿ, ಮಗಳು ಸಾಫಿಯಾ ಬಂಧನ
Team Udayavani, Oct 15, 2019, 3:40 PM IST
ಶ್ರೀನಗರ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಮಗಳು, ಸಹೋದರಿ ಸೇರಿದಂತೆ ಹಲವು ಮಹಿಳಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ.
ಫಾರೂಖ್ ಅಬ್ದುಲ್ಲಾ ಸಹೋದರಿ ಸುರಯ್ಯಾ ಅಬ್ದುಲ್ಲಾ, ಮಗಳು ಸಾಫಿಯಾ ಅಬ್ದುಲ್ಲಾ ಖಾನ್, ಜಮ್ಮು-ಕಾಶ್ಮೀರದ ಮಾಜಿ ಚೀಫ್ ಜಸ್ಟೀಸ್ ಬಶೀರ್ ಅಹ್ಮದ್ ಖಾನ್ ಪತ್ನಿ ಹಾವಾ ಬಶೀರ್ ಸೇರಿದಂತೆ ಹಲವು ಪ್ರಮುಖ ಮಹಿಳಾ ಪ್ರತಿಭಟನಾಕಾರರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಆಗಸ್ಟ್ 5ರಂದು ನಮ್ಮನ್ನು ಗೃಹಬಂಧನದಲ್ಲಿ ಇರಿಸಿ, 370ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಇದೊಂದು ಬಲಾತ್ಕಾರದ ಮದುವೆ ಹೀಗಾಗಿ ಇದು ಕಾರ್ಯಗತವಾಗುವುದಿಲ್ಲ ಎಂದು ಸುರಯ್ಯಾ ಅಬ್ದುಲ್ಲಾ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಶ್ರೀನಗರದ ಲಾಲ್ ಚೌಕ್ ಸಮೀಪದ ಪ್ರತಾಪ್ ಪಾರ್ಕ್ ನಲ್ಲಿ ಮಹಿಳಾ ಪ್ರತಿಭಟನಾಕಾರರು 370ನೇ ವಿಧಿಯನ್ನು ರದ್ದುಪಡಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
KAUP: ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.