ಶಾಸಕ ಉಮೆಶ್ ಕತ್ತಿ ಸಂತೈಸಲು ಮುಖ್ಯಮಂತ್ರಿ ಬಿ.ಎಸ್.ವೈ. ವಿಫಲ ಪ್ರಯತ್ನ
ಮುನಿಸಿಕೊಂಡಿರುವ ಕತ್ತಿ ಭೇಟಿಗೆ ಅವರದ್ದೇ ಹೊಟೇಲ್ ಗೆ ಹೋಗಿ ಉಪಹಾರ ಸೇವಿಸಿದ ಬಿಎಸ್ ವೈ
Team Udayavani, Oct 15, 2019, 8:01 PM IST
ಬೆಳಗಾವಿ: ಬೆಳಗಾವಿ ಭೇಟಿಗೆಂದು ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೊದಲಿಗೆ ಪಕ್ಷದಲ್ಲಿನ ಅಸಮಧಾನ ಶಮನದ ಕೆಲಸಕ್ಕೆ ಕೈ ಹಾಕಿದ್ದಾರೆ.
ಮುಖ್ಯಮಂತ್ರಿ ಅವರು ಬೆಳಗಾವಿಗೆ ಬರುವುದನ್ನು ತಿಳಿದ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗದೇ ತೆರಳಲು ಯೋಚಿಸಿದರು. ಆದರೆ ಈ ವಿಚಾರ ತಿಳಿದು ತಕ್ಷಣವೇ ಎಚ್ಚೆತ್ತುಕೊಂಡ ಯಡಿಯೂರಪ್ಪ ವಿಮಾನ ನಿಲ್ದಾಣದಿಂದ ತಮ್ಮ ವಾಸ್ತವ್ಯಕ್ಕೆ ನಿಗದಿಯಾಗಿದ್ದ ಸರ್ಕ್ಯೂಟ್ ಹೌಸ್ ಗೆ ತೆರಳದೇ ನೇರವಾಗಿ ಕತ್ತಿ ಮಾಲೀಕತ್ವದ ಹೊಟೇಲ್ ಗೆ ತೆರಳಿದರು. ಅಲ್ಲಿ ಬಿ.ಎಸ್.ವೈ ಅವರು ಉಮೇಶ್ ಕತ್ತಿ ಅವರನ್ನು ತನ್ನ ಪಕ್ಕದಲ್ಲಿಯೇ ಕುಳ್ಳಿರಿಸಿಕೊಂಡು ಪಕ್ಷದ ಸ್ಥಳೀಯ ನಾಯಕರ ಜೊತೆಯಲ್ಲಿ ಉಪಹಾರ ಸೇವಿಸಿದರು.
ಉಪ್ಪಿಟ್ಟು, ಅವಲಕ್ಕಿ, ಸ್ಯಾಂಡ್ ವಿಚ್, ಚಹಾ ಸೇವಿಸಿದ ಮುಖ್ಯಮಂತ್ರಿಯವರು ಉಮೇಶ ಕತ್ತಿ ಅವರೊಡನೆ ಸ್ವಲ್ಪ ಹೊತ್ತು ಲೋಕಾಭಿರಾಮವಾಗಿ ಮಾತನಾಡಿದರು. ಮುಖ್ಯಮಂತ್ರಿಯವರ ಎದುರಿನಲ್ಲಿ ಯಾವುದೇ ಮುನಿಸನ್ನು ಕತ್ತಿ ಅವರು ತೋರ್ಪಡಿಸಿದರೂ ಅವರಿಗೆ ಒಳಗೊಳಗೆ ಅಸಮಾಧಾನ ಇದ್ದಿದ್ದು ಕಂಡು ಬರುತ್ತಿತ್ತು.
ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ ಮತ್ತು ಇತರರು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.