ನಾನು ಮಾರಾಟವಾಗಿದ್ದೇನೆಂದು ಚಾಮುಂಡಿಬೆಟ್ಟಕ್ಕೆ ಬಂದು ಸತ್ಯ ಮಾಡಿ
Team Udayavani, Oct 16, 2019, 3:00 AM IST
ಮೈಸೂರು: ಸಮ್ಮಿಶ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಸಿಡಿದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದ ಮೇಲೆ ನನ್ನನ್ನು 25 ಕೋಟಿಗೆ ಬಿಜೆಪಿಗೆ ಮಾರಿಕೊಂಡಿದ್ದೇನೆ ಎನ್ನುವ ಮಾಜಿ ಸಚಿವ ಸಾ.ರಾ.ಮಹೇಶ್, ನನ್ನನ್ನು ಕೊಂಡುಕೊಂಡವನನ್ನು ಗುರುವಾರ ಬೆಳಗ್ಗೆ 9ಗಂಟೆಗೆ ಚಾಮುಂಡಿಬೆಟ್ಟಕ್ಕೆ ಕರೆ ತಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸತ್ಯ ಮಾಡಲಿ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಸವಾಲು ಹಾಕಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದ 17 ಶಾಸಕರಲ್ಲಿ ಬಹುತೇಕರು 500, ಸಾವಿರ ಕೋಟಿಗೆ ಲೆಕ್ಕ ಕೊಟ್ಟವರು. ನಾನೇನು ರಿಯಲ್ ಎಸ್ಟೇಟ್, ಗಣಿದಂಧೆ ಮಾಡಿಲ್ಲ. ನಾನು ರೈತನ ಮಗ. ನನ್ನ ಮನೆಗೆ ಹತ್ತು ಜನ ಬಂದರೆ ಕುಳಿತುಕೊಳ್ಳಲು ಕಷ್ಟ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಬದುಕಲು ಪ್ರಯತ್ನಿಸುತ್ತಿರುವವರಲ್ಲಿ ನಾನೂ ಒಬ್ಬ.
ಈ ಕಾರಣಕ್ಕಾಗಿಯೇ ಐಟಿ, ಇ.ಡಿಯವರು ನಮ್ಮ ಮನೆ ಹತ್ತಿರ ಬರಲಾಗಲ್ಲ. ಆದರೆ, ಮಹೇಶ್ ಅವರು, ಪದೇ ಪದೆ ವಿಶ್ವನಾಥ್ 25 ಕೋಟಿಗೆ ಬಿಜೆಪಿಗೆ ಮಾರಿಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಹಾಗಾಗಿ, ನನ್ನನ್ನು ಕೊಂಡುಕೊಂಡವನನ್ನು ಚಾಮುಂಡಿಬೆಟ್ಟಕ್ಕೆ ಕರೆ ತನ್ನಿ. ಸತ್ಯ ಆಗಿ ಬಿಡಲಿ. ಗುರುವಾರ ಚಾಮುಂಡಿಬೆಟ್ಟಕ್ಕೆ ಬರದಿದ್ದರೆ ಈ ಬಗ್ಗೆ ಇನ್ನು ಮಾತನಾಡಬಾರದು ಎಂದು ಮಹೇಶ್‌ಗೆ ತಾಕೀತು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.