INX ಭ್ರಷ್ಟಾಚಾರ ಪ್ರಕರಣ; ತಿಹಾರ್ ಜೈಲಿನಲ್ಲಿ ಇ.ಡಿ ವಿಚಾರಣೆ ಬಳಿಕ ಚಿದಂಬರಂ ಬಂಧನ
Team Udayavani, Oct 16, 2019, 11:49 AM IST
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ 55 ದಿನಗಳ ಕಾಲ ಸಿಬಿಐ ಮತ್ತು ನ್ಯಾಯಾಂಗ ವಶದಲ್ಲಿದ್ದ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ.
ಐಎನ್ ಎಕ್ಸ್ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ನವದೆಹಲಿಯ ಸ್ಥಳೀಯ ಕೋರ್ಟ್ ಮಂಗಳವಾರ ಅನುಮತಿ ನೀಡಿತ್ತು.
ಸೆಪ್ಟೆಂಬರ್ 5ರಿಂದ ಜೈಲುವಾಸದಲ್ಲಿದ್ದ ಚಿದಂಬರಂ ಅವರ ಸಿಬಿಐ ವಿಚಾರಣೆ ಪೂರ್ಣಗೊಂಡಿದ್ದು, ಬುಧವಾರ ಬೆಳಗ್ಗೆ ತಿಹಾರ್ ಜೈಲಿಗೆ ಭೇಟಿ ನೀಡಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿದಂಬರಂ ಅವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಹೆಚ್ಚಿನ ವಿಚಾರಣೆಗಾಗಿ ಚಿದಂಬರಂ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಾಗಿದೆ ಜಾರಿ ನಿರ್ದೇಶನಾಲಯದ ಪರ ವಕೀಲರು ವಿಶೇಷ ಸಿಬಿಐ ಜಡ್ಜ್ ಅಜಯ್ ಕುಮಾರ್ ಕುಹರ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಚಿದಂಬರಂ ಅವರನ್ನು ಕಸ್ಟಡಿಗೆ ಒಪ್ಪಿಸಿ ವಿಚಾರಣೆ ನಡೆಸುವುದು ಅಗತ್ಯವಿದೆ ಎಂದು ಕೂಡ ಹೇಳಿತ್ತು. ಈ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ತೆರಳಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆಯುವಂತೆ ಜಡ್ಜ್ ಕುಹರ್ ಮಂಗಳವಾರ ಇ.ಡಿಗೆ ಆದೇಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.