ಸೋರುತಿಹುದು ಜ್ಞಾನ ದೇಗುಲ ಮಾಳಿಗೆ
ನಿರಂತರ ಮಳೆಗೆ ಶಿಥಿಲಗೊಂಡ ಶಾಲಾ ಕಟ್ಟಡಗಳುವಿದ್ಯಾರ್ಥಿಗಳು-ಶಿಕ್ಷಕರಲ್ಲಿ ಆತಂಕ
Team Udayavani, Oct 16, 2019, 12:02 PM IST
ಉಮೇಶ ಬಳಬಟ್ಟಿ
ಇಂಡಿ: ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಅನೇಕ ಶಾಲೆಗಳ ಚಾವಣಿ ಸೋರುತ್ತಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗಿದ್ದು, ಶಾಲಾ ಶಿಕ್ಷಕರು ಆತಂಕದಲ್ಲಿ ಪಾಠ ಬೋಧನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನ ಇಂಗಳಗಿ ತಾಂಡಾ-1 ಹಾಗೂ ತಾಂಡಾ-2ರ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಇಂಡಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಗಳ ಕಟ್ಟಡಗಳು ಮಳೆನೀರಿನಿಂದ ಸೋರುತ್ತಿವೆ. ಇಂಗಳಗಿ ತಾಂಡಾ ಶಾಲಾ ಕಟ್ಟಡಗಳೆರಡು ಶಿಕ್ಷಣ ಇಲಾಖೆಗೆ ಮತ್ತು ಇಂಡಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಶಾಲೆಯೂ ಪುರಸಭೆ ವ್ಯಾಪ್ತಿ ಬರುತ್ತವೆ. ಶಾಲೆ ಕಟ್ಟಡ ಶಿಥಿಲಾವ್ಯವಸ್ಥೆಗೆ ತಲುಪಿದ್ದು, ಅಲ್ಲಿ ಪಾಠ ಮಾಡುವ ಶಿಕ್ಷಕರು ಮತ್ತು ಕಲಿಯುವ ವಿದ್ಯಾರ್ಥಿಗಳು ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಕೂರಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಶಿಥಿಲಗೊಂಡ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿಕೊಡಲು ಪಾಲಕರು ಸಹ ಹಿಂದೇಟು ಹಾಕುತ್ತಿದ್ದಾರೆ.
ನಗರದ ಶಾಲೆಯನ್ನು ದುರಸ್ತಿಗೊಳಿಸಲು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಪುರಸಭೆಗೆ ಹತ್ತಾರು ಬಾರಿ ಮೌಖೀಕ ಹಾಗೂ ಲಿಖೀತವಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.
ಇನ್ನು ಇಂಗಳಗಿ ತಾಂಡಾ ಶಾಲೆಗಳ ದುರಸ್ತಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಲ್ಲಿನ ನಿವಾಸಿಗಳು ಆಪಾದಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿ ಕಾರಿಗಳಿಗೆ ಹೇಳಿದರೆ ಶಾಲೆಗೆ ಬಂದು ನೋಡಿಕೊಂಡು ಹೋಗುತ್ತಾರೆ. ಜಿಪಂಗೆ ಪತ್ರ ಬರೆಯಲಾಗಿದೆ. ಅನುದಾನ ಬಂದ ಕೂಡಲೇ ದುರಸ್ತಿ ಮಾಡಿಸುವುದಾಗಿ ತಿಳಿಸುತ್ತಾರೆ. ಇದು ಮೂರು ವರ್ಷಗಳಿಂದ ಹೀಗೆ ನಡೆಯುತ್ತ ಬಂದಿದೆ. ಆದರೆ, ಶಾಲೆಯ ಗೋಡೆಗಳು ಕುಸಿಯುತ್ತಿವೆ. ಯಾವಾಗ ಶಾಲೆ ಕಟ್ಟಡ ಬೀಳುತ್ತದೆಯೋ ಗೊತ್ತಿಲ್ಲ. ಹೀಗಾಗಿ ಮಳೆ ಬಂದರೆ ಶಾಲೆಯ ಮುಂದಿನ ಕಿರಾಣಿ ಅಂಗಡಿಯ ಪತ್ರಾಸ್ ಸೆಡ್‌ನಲ್ಲಿ ಶಿಕ್ಷಕರು ತರಗತಿ ನಡೆಸುತ್ತಿದ್ದಾರೆ.
ಶಿಕ್ಷಣ ಇಲಾಖೆ ಕೂಡಲೇ ಇತ್ತ ಗಮನಹರಿಸಿ ಶಾಲಾ ಕಟ್ಟಡಗಳ ದುರಸ್ತಿ ಮಾಡಬೇಕೆಂದು ಶಾಲಾ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.