ಶುದ್ಧ ಕುಡಿಯುವ ನೀರು ಕೊಡಿ
Team Udayavani, Oct 16, 2019, 12:10 PM IST
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಅತ್ತಿವಾಡ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ದೊರೆಯದೇ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ದೂರಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಹಾಗೂ ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಅತ್ತಿವಾಡ ಗ್ರಾಮದಲ್ಲಿ 3 ಸಾವಿರಕ್ಕಿಂತಲೂ ಹೆಚ್ಚು ಜನರು ವಾಸವಾಗಿದ್ದು, ಆದರೆ ಶುದ್ಧ ಕುಡಿಯುವ ನೀರು ಇಲ್ಲದೇ ಜನರು ಪರಿತಪಿಸುತ್ತಿದ್ದಾರೆ ಎಂದು ದೂರಿದರು.
ಅತ್ತಿವಾಡದಿಂದ ಬೆಳಗಾವಿಗೆ ಹೋಗಲು ಬಸ್ ಸೌಕರ್ಯವೂ ಇಲ್ಲದಂತಾಗಿದೆ. ರಸ್ತೆಗಳು ಸರಿಯಾಗಿ ಇಲ್ಲದೇ ವಾಹನಸಂಚಾರವೂ ನಿಂತು ಹೋಗಿದೆ. ಗ್ರಾಮದ ಪ್ರೌಢಶಾಲೆಯಲ್ಲಿ ಶಿಕ್ಷಕರು ನಿಗದಿತ ವೇಳೆಗೆ ಬಾರದ್ದಕ್ಕೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಶುದ್ಧ ಕುಡಿಯುವ ನೀರು, ಬಸ್ ಸೌಕರ್ಯ, ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ವಕೀಲ ಎನ್.ಆರ್. ಲಾತೂರ, ಕಾರ್ಮಿಕ ಸಂಘದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಉಮೇಶ ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.