ರೈತರಿಗೆ ಪರಿಹಾರ ನೀಡಲು ಲಂಚ: ಏಳು ಮಂದಿ ಬಂಧನ

Team Udayavani, Oct 17, 2019, 3:06 AM IST

raitarige-lan

ಬೆಂಗಳೂರು: ನೆಲಮಂಗಲ ಬಳಿಯ ಸೋಂಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಉದ್ದೇಶಕ್ಕೆ ಭೂಮಿ ನೀಡಿದ ರೈತರಿಗೆ ಕೊಡುವ ಪರಿಹಾರ ಮೊತ್ತದಲ್ಲಿ ಶೇ.10ರಷ್ಟು ಹಣವನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಲಂಚವಾಗಿ ಪಡೆಯುತ್ತಿದ್ದ ಅಕ್ರಮನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಯಲಿಗೆ ಎಳೆದಿದೆ.

ರೇಸ್‌ಕೋರ್ಸ್‌ ರಸ್ತೆಯ ಖನಿಜ ಭವನದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು, ಮಂಗಳವಾರ ರಾತ್ರಿ ಇಡೀ ಶೋಧ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 12.96 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ರೈತರಿಂದ ಪಡೆದಿದ್ದ 13 ಬ್ಯಾಂಕ್‌ ಚೆಕ್‌ಗಳು, ಭೂ ದಾಖಲೆಗಳು ಸಿಕ್ಕಿವೆ. ಲಂಚದ ಹಣ ಸ್ವೀಕರಿಸಿ ಅಕ್ರಮ ಎಸಗುತ್ತಿದ್ದ ಒಬ್ಬ ಕೆಐಎಡಿಬಿ ಅಧಿಕಾರಿ, ಆರು ಮಧ್ಯವರ್ತಿಗಳನ್ನು ಬಂಧಿಸಿದ್ದಾರೆ.

ಕೆಐಎಡಿಬಿ ಹಿರಿಯ ಸಹಾಯಕ ಎಸ್‌.ಎಲ್‌.ಎ ಓ-2 ಆಗಿರುವ ಶ್ರೀನಿವಾಸ್‌, ಮಧ್ಯವರ್ತಿಗಳಾದ ದೇವರಾಜ್‌, ನಾರಾಯಣ ಸ್ವಾಮಿ, ಜಗದೀಶ್‌, ನವೀನ್‌ ಕುಮಾರ್‌, ಸಮೀರ್‌ ಪಾಷ ಹಾಗೂ ಕೇಶವ ಬಂಧಿತ ಆರೋಪಿಗಳು. ಇನ್ನೂ ಹಲವು ಮಂದಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಈ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಸೋಂಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ 800 ಎಕರೆ ಭೂಮಿ ಸ್ವಾಧೀನ ಪಡೆಸಿಕೊಂಡಿದೆ.ಭೂಮಿ ನೀಡಿದ ರೈತರಿಗೆ ಪರಿಹಾರ ಮೊತ್ತವಾಗಿ ಇತ್ತೀಚೆಗೆ 50 ಕೋಟಿ ರೂ.ಗಳನ್ನು ಸೆ. 20ರಂದು ಮಂಜೂರು ಮಾಡಿದೆ. ಪರಿಹಾರ ಮೊತ್ತ ಪಡೆಯಲಿದ್ದ ರೈತರನ್ನು ಸಂಪರ್ಕಿಸಿದ್ದ ಮಧ್ಯವರ್ತಿಗಳು ಬೇಗನೇ ಪರಿಹಾರ ಮೊತ್ತ ಸಿಗಲು ಸರ್ಕಾರದಿಂದ ಸಿಗುವ ಪರಿಹಾರ ಹಣದಲ್ಲಿ ಶೇ 10ರಷ್ಟು ಹಣವನ್ನು ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಒಪ್ಪಿಕೊಂಡ ರೈತರ ಬಳಿ ಭದ್ರತೆಗಾಗಿ ಖಾಲಿ ಚೆಕ್‌ಗಳನ್ನು ಪಡೆದುಕೊಂಡಿದ್ದರು. ಕಮಿಷನ್‌ ನೀಡಲು ಒಪ್ಪದ ರೈತರ ಪರಿಹಾರದ ಕಡತಗಳನ್ನು ಮುಟುತ್ತಲೇ ಇರಲಿಲ್ಲ. ವಿನಾಕಾರಣ ಅವರನ್ನು ಅಲೆದಾಡಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ.

ರೈತರಿಗೆ ನೀಡುವ ಪರಿಹಾರ ಹಣದಲ್ಲಿ ಕಮಿಷನ್‌ ಪಡೆಯುವ ದಂಧೆಯ ಕಿಂಗ್‌ ಪಿನ್‌ ಅಧಿಕಾರಿ ಶ್ರೀನಿವಾಸ್‌ ಎಂಬುದು ಗೊತ್ತಾಗಿದೆ. ಮಧ್ಯವರ್ತಿ ಸಮೀರ್‌ ಪಾಷಾ ಆಧಿಕಾರಿಗಳಿಗೆ ಲಂಚ ತಲುಪಿಸುತ್ತಿದ್ದ. ಇವರ ಜತೆ ಇನ್ನೂ ಅನೇಕ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆಯಿದೆ. ತನಿಖೆ ಬಳಿಕ ಉಳಿದವರ ಪಾತ್ರದ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಖನಿಜ ಭವನದ ನೆಲಮಹಡಿಯಲ್ಲಿ ಎಸಿಬಿ ಕಚೇರಿಯಿದ್ದು 4 ಮತ್ತು 5ನೇ ಮಹಡಿಯಲ್ಲಿ ಕೆಐಎಡಿಬಿಯ ವಿವಿಧ ವಿಭಾಗಗಳ ಕಚೇರಿಗಳಿವೆ. ಕೆಐಎಡಿಬಿ ಕಮಿಷನ್‌ ದಂಧೆಯ ದೂರು ಬಂದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಎಸಿಬಿ ಎಸ್ಪಿ ಡಾ. ಜಿನೇಂದ್ರ ಕಣಗಾವಿ, ಮೂರು ಮಂದಿ ಡಿವೈಎಸ್ಪಿಗಳು, ಇನ್ಸ್‌ಪೆಕ್ಟರ್‌ಗಳು ಸೇರಿ 50 ಸಿಬ್ಬಂದಿಗಳ ತಂಡ ಬುಧವಾರ ಮುಂಜಾನೆಯವರೆಗೂ ಶೋಧ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿ ದಾಖಲೆಗಳನ್ನು ಜಪ್ತಿ ಮಾಡಿದೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.