ಕೆಡಿಪಿ ಸಭೆ ದಿಢೀರ್ ಮುಂದೂಡಿಕೆ
ಸಿಎಂ ಆಗಮನ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ಬದಲಾಗದ ಸರ್ಕಾರದ ಕಾರ್ಯವೈಖರಿ
Team Udayavani, Oct 17, 2019, 11:16 AM IST
ಕಲಬುರಗಿ: ಕೆಡಿಪಿ ಸಭೆ ನಡೆಯದ ಕುರಿತು ಉದಯವಾಣಿಯಲ್ಲಿ ಪ್ರಕಟವಾದ ವರದಿಗಳು.
ಹಣಮಂತ ರಾವ್ ಭೈರಾಮಡಗಿ
ಕಲಬುರಗಿ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬದಲಾದ ನಂತರ ಆಡಳಿತ ಕಾರ್ಯವೈಖರಿಯಲ್ಲಿ ಸ್ವಲ್ಪಾದರೂ ಬದಲಾವಣೆಯಾಗಬಹುದು ಎಂಬ ಜನರ ನಿರೀಕ್ಷೆ ಸುಳ್ಳಾಗುತ್ತಿದೆಯೇ ಎಂಬುದಕ್ಕೆ ಕೆಡಿಪಿ ಸಭೆ ನಡೆಸಲು ಮುಂದಾಗದಿರುವುದು, ಹಿಂದೆ ಮುಂದೆ ನೋಡದೇ ತಮಗೆ ಅನುಕೂಲವಾಗಬಲ್ಲ ಅಧಿಕಾರಿಗಳಿಗೆ ಮಣೆ ಹಾಕುತ್ತಿರುವುದು ಜತೆಗೆ ಆಡಳಿತ ಚುರುಕುಗೊಳ್ಳದಿರುವುದೇ ಇದಕ್ಕೆ ಪ್ರಮುಖ ಸಾಕ್ಷಿ ಎನ್ನಬಹುದಾಗಿದೆ.
ಈ ಹಿಂದೆ ಪ್ರಿಯಾಂಕ್ ಖರ್ಗೆ ಅವರು ಒಂದು ವರ್ಷದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವಾವಧಿಯಲ್ಲಿ ಕೇವಲ ಒಂದೇ ಕೆಡಿಪಿ ಸಭೆ ನಡೆಸಿದ್ದರು. ಈಗ ಬಿಜೆಪಿ ಸರ್ಕಾರ ಬಂದು ಎರಡೂವರೆ ತಿಂಗಳು ತಿಂಗಳಾದರೂ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿ ತಿಂಗಳಾದರೂ ಕೆಡಿಪಿ ಸಭೆ ನಡೆಸುವ ಘಳಿಗೆ ಇನ್ನೂ ಕೂಡಿ ಬರುತ್ತಿಲ್ಲ.
ಉಮುಖ್ಯಮಂತ್ರಿಗಳಾಗಿರುವ ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಖಾತೆ ಜತೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಳಜೋಳ ಅವರ ಅಧ್ಯಕ್ಷತೆಯಲ್ಲಿ ಅ. 17ರಂದು ನಿಗದಿಯಾಗಿದ್ದ ಕೆಡಿಪಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ. ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಕೆಡಿಪಿ ಸಭೆ ಬದಲು ಅಧಿಕಾರಿಗಳ ಸಭೆ ಮಾತ್ರ ನಡೆಸಲಾಗುತ್ತಿದೆ.
ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಜಿಲ್ಲೆಯಲ್ಲಿ ಬರೋಬ್ಬರಿ ಒಂದು ವರ್ಷ ಒಂದು ತಿಂಗಳು ಐದು ದಿನಗಳ ನಂತರ ಕೆಡಿಪಿ ಸಭೆಗೆಮುಹೂರ್ತ ನಿಗದಿ ಮಾಡಲಾಗಿತ್ತು. ಈಗ ಈ
ಸಭೆಯೂ ಮುಂದೂಡಿಕೆಯಾಗಿದೆ. ಮತ್ತೆ ಯಾವಾಗ ಸಭೆ ನಡೆಯುತ್ತದೆ ಎಂಬ ಪ್ರಶ್ನೆ ಎದುರಾಗಿದೆ.
ಬೆಂಗಳೂರಲ್ಲಿ ಸಭೆ: ಡಿಸಿಎಂ ಗೋವಿಂದ ಕಾರಜೋಳ ಅವರು ಸೆಪ್ಟೆಂಬರ್ ಸೆ. 27ರಂದು ಬೆಂಗಳೂರಿನ ವಿಕಾಸಸೌಧನ ರೂಂ. ಸಂಖ್ಯೆ 123ರಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಇತರ ಪ್ರಮುಖರೊಂದಿಗೆ ಸಭೆ ನಡೆಸಿದ್ದರು. ಕಲಬುರಗಿಗೆ ಬಂದು ಸಭೆ ನಡೆಸುವ ಬದಲು ಬೆಂಗಳೂರಲ್ಲೇ ಸಭೆ ನಡೆಸಿರುವುದಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಜಿಲ್ಲಾ ಉಸ್ತುವಾರಿ ಅಧ್ಯಕ್ಷತೆಯಲ್ಲಿ ನಡೆಯಬೇಕಿರುವ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ಕಳೆದ ಒಂದು ವರ್ಷ, ಒಂದು ತಿಂಗಳಿನಿಂದ ನಡೆದಿಲ್ಲ.
ರಾಜ್ಯದಲ್ಲಿ ಇದೊಂದು ಇತಿಹಾಸವೇ ಎನ್ನಬಹುದು. ಹಿಂದಿನ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ 2018ರ ಸೆಪ್ಟೆಂಬರ್ 12ರಂದು ನಡೆಸಿದ್ದೇ ಕೊನೆ ಕೆಡಿಪಿ ಸಭೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.