ರಂಗನಾಯಕಿಯ ನೋವು ನಲಿವು


Team Udayavani, Oct 18, 2019, 5:26 AM IST

e-11

ನಿರ್ದೇಶಕ ದಯಾಳ್‌ ಪದ್ಮನಾಭನ್‌ “ರಂಗನಾಯಕಿ’ಯನ್ನು ತೆರೆಗೆ ತರಲು ಮುಹೂರ್ತ ನಿಗದಿ ಮಾಡಿದ್ದಾರೆ. ಚಿತ್ರ ನವೆಂಬರ್‌ 1 ರಂದು ತೆರೆಕಾಣುತ್ತಿದೆ. ಸದ್ಯ “ರಂಗನಾಯಕಿ’ ಚಿತ್ರದ ಅಂತಿಮ ಹಂತದ ಪ್ರಮೋಶನ್‌ ಕೆಲಸದಲ್ಲಿ ನಿರ್ದೇಶಕ ದಯಾಳ್‌ ಆ್ಯಂಡ್‌ ಟೀಮ್‌ ಇತ್ತೀಚೆಗೆ “ರಂಗನಾಯಕಿ’ಯ ಆಡಿಯೋ ಮತ್ತು ಟ್ರೇಲರ್‌ ಅನ್ನು ಹೊರತಂದಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ದಯಾಳ್‌, “ಇದೊಂದು ಕಾದಂಬರಿ ಆಧರಿತ ಚಿತ್ರ. ನಾನೇ ಬರೆದ ಕಾದಂಬರಿಯನ್ನು ಈಗ ಸಿನಿಮಾವಾಗಿ ತೆರೆಮೇಲೆ ತಂದಿದ್ದೇನೆ. ಚಿತ್ರದ ಟೈಟಲ್ಲೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಚಿತ್ರ. ಕೆಲ ವರ್ಷಗಳ ಹಿಂದೆ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ಸಂತ್ರಸ್ತ ಹುಡುಗಿ ಬದುಕಿದ್ದರೆ, ಎಂಥಹ ಸಂದರ್ಭ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಳು ಅನ್ನೋದನ್ನ ಈ ಚಿತ್ರದಲ್ಲಿ ಕಾಲ್ಪನಿಕವಾಗಿ ಹೇಳಿದ್ದೇವೆ. ನ್ಯಾಯಕ್ಕೊಳಗಾಗಿ ಹುಡುಗಿಯೊಬ್ಬಳು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿಟ್ಟುಕೊಂಡು, ಹೇಗೆ ಕಾನೂನಿನ ಚೌಕಟ್ಟಿನಲ್ಲಿ ಹೋರಾಡಿ ನ್ಯಾಯ ಪಡೆಯುತ್ತಾಳೆ ಅನ್ನೋದು ಚಿತ್ರದ ಕಥೆಯ ಎಳೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಇನ್ನೊಂದು ವಿಷಯವೆಂದರೆ, “ರಂಗನಾಯಕಿ’ ಚಿತ್ರ ತೆರೆಗೆ ಬರೋದಕ್ಕೂ ಮುನ್ನವೇ “ಗೋವಾ ಇಂಟರ್‌ನ್ಯಾಶನಲ್‌ ಫಿಲಂ ಫೆಸ್ಟಿವಲ್‌-2019’ಕ್ಕೆ ಪನೋರಮಾ ವಿಭಾಗದಲ್ಲಿ ಕನ್ನಡದಿಂದ ಸ್ಥಾನ ಪಡೆದುಕೊಂಡಿದೆ. ಈ ವರ್ಷ ಕನ್ನಡದಿಂದ ಆಯ್ಕೆಯಾಗಿರುವ ಏಕೈಕ ಚಿತ್ರ ಎನ್ನುವ ಗರಿಯನ್ನು ಮುಡಿಗೇರಿಸಿಕೊಂಡಿರುವ “ರಂಗನಾಯಕಿ’, ಇದೇ ಅ. 24ರಂದು ಫಿಲಂ ಫೆಸ್ಟಿವಲ್‌ನಲ್ಲಿ ಪ್ರದರ್ಶನಗೊಳ್ಳಲಿದೆ ಎಂಬ ಮಾಹಿತಿ ನೀಡಿದೆ ಚಿತ್ರತಂಡ. ಸದ್ಯ ಬಿಡುಗಡೆಯಾಗಲಿರುವ “ರಂಗನಾಯಕಿ’ ಚಿತ್ರದಲ್ಲಿ ಮೂರು ಶಾಸ್ತ್ರೀಯ ಹಾಡುಗಳನ್ನು ಬಳಸಿಕೊಳ್ಳಲಾಗಿದ್ದು, ಹಾಡುಗಳು ಮತ್ತು ಟ್ರೇಲರ್‌ಗಳಿಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

“ರಂಗನಾಯಕಿ’ ಚಿತ್ರದಲ್ಲಿ ನಟಿ ಅಧಿತಿ ಪ್ರಭುದೇವ, ಶ್ರೀನಿ, ತ್ರಿವಿಕ್ರಮ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸುಂದರ್‌, ಸುಚೇಂದ್ರ ಪ್ರಸಾದ್‌, ಸಿಹಿಕಹಿ ಚಂದ್ರು, ಸುಂದರ್‌ ರಾಜ್‌ ಮೊದಲಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಇನ್ನು “ರಂಗನಾಯಕಿ’ ಮಹಿಳಾ ಪ್ರಧಾನ ಚಿತ್ರವಾಗಿದ್ದರಿಂದ, ಚಿತ್ರ ಬಿಡುಗಡೆಯ ನಂತರ ಮಹಿಳೆಯರಿಗಾಗಿಯೇ ವಿಶೇಷ ಪ್ರದರ್ಶನವನ್ನು ಆಯೋಜಿಸಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. ಒಟ್ಟಾರೆ ಈಗಾಗಲೇ ಕಾದಂಬರಿಯಾಗಿ, ಹಾಡಾಗಿ, ಟ್ರೇಲರ್‌ನಲ್ಲಿ ಕಾಡುತ್ತಿರುವ “ರಂಗನಾಯಕಿ’ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾಳೆ ಅನ್ನೋದು ಬಿಡುಗಡೆಯಾದ ಮೇಲಷ್ಟೆ ಗೊತ್ತಾಗಲಿದೆ. ಈ ಚಿತ್ರವನ್ನು ಎಸ್‌ವಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ನಡಿ ಎಸ್‌.ವಿ.ನಾರಾಯಣ್‌ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.