ಪಪಂ ಕಚೇರಿ ಎದುರು ನಿವಾಸಿಗಳ ಧರಣಿ


Team Udayavani, Oct 18, 2019, 12:07 PM IST

bk-tdy-2

ಕಮತಗಿ: ವಾರ್ಡ್‌ನ ಸ್ವತ್ಛತೆ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸಿ ಮಲಿನ ನೀರು ಬೇರೆಡೆ ಸಾಗಿಸುವಂತೆ ಆಗ್ರಹಿಸಿ 10ನೇ ವಾರ್ಡ್‌ ನಿವಾಸಿಗಳು ಪಪಂ ಕಾರ್ಯಾಲಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ವಾರ್ಡ್‌ ನಂ.10ರಲ್ಲಿ ಬರುವ ಕಟಗಿನ ತಗ್ಗಿನಲ್ಲಿ ಚರಂಡಿ ಹಾಗೂ ಮಳೆ ನೀರು ನಿಂತು ಸಂಪೂರ್ಣ ತುಂಬಿ ದುರ್ವಾಸನೆ ಬರುತ್ತಿದೆ. ಇದರಿಂದ ಕ್ರಿಮಿ ಕೀಟಗಳು, ಸೊಳ್ಳೆಗಳು, ವಿಷಜಂತುಗಳ ಹಾವಳಿ ಸೇರಿದಂತೆ ಸಾಂಕ್ರಾಮಿಕ ರೋಗ ಹರಡುತ್ತಿದ್ದು, ಅನೇಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಈ ಕುರಿತು ಸಾಕಷ್ಟು ಬಾರಿ ಪಪಂ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸದಿರುವುದರಿಂದ ಧರಣಿ ನಡೆಸಿರುವುದಾಗಿ ನಿವಾಸಿಗಳು ತಿಳಿಸಿದ್ದಾರೆ. ಪಪಂ ಮುಖ್ಯಾಧಿಕಾರಿ ಬಿ.ಟಿ. ಬಂಡಿವಡ್ಡರ ಧರಣಿ ನಿರತರನ್ನುದ್ದೇಶಿಸಿ ಮಾತನಾಡಿ, ಕಟಗಿನ ತಗ್ಗಿನಲ್ಲಿ ಸಂಗ್ರಹವಾಗಿರುವ ಮಲಿನ ನೀರು ಬೇರೆಡೆ ಸಾಗಿಸಲು ಈಗಾಗಲೇ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ಶಾಖಾಂಬರಿ ಕಾಲೇಜಿನಿಂದ ಶಿರೂರ ಹೋಗುವ ರಸ್ತೆವರೆಗೆ ಮಾತ್ರ ಚರಂಡಿ ಮಾಡಿದ್ದರಿಂದ ಚರಂಡಿ ನೀರು ಕಟಗಿನ ತಗ್ಗಿಗೆ ಹೋಗಿ ಸಂಗ್ರಹವಾಗುತ್ತಿತ್ತು. ಶಿರೂರಗೆ ಹೋಗುವ ರಸ್ತೆಯಿಂದ ಮ್ಯಾಗೇರಿ ಅವರ ಮನೆಯವರೆಗೆ ಅಪೂರ್ಣವಾಗಿದ್ದ ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ಎಂದು ವಿನಂತಿಸಿದರು.

ಪಪಂ ಮಾಜಿ ಸದಸ್ಯ ರಾಜೇಸಾಬ ಕೋಲಾರ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿ, ಮೂರು ತಿಂಗಳ ಕಾಲ ಅವಕಾಶ ತೆಗೆದುಕೊಳ್ಳದೇ ತುರ್ತಾಗಿ ಕಾಮಗಾರಿ ಮಾಡುವ ಭರವಸೆ ನೀಡಿದರೆ ಮಾತ್ರ ಧರಣಿ ಹಿಂಪಡೆಯುತ್ತೇವೆ. ಇಲ್ಲವಾದರೆ ಕಾಮಗಾರಿ ಪ್ರಾರಂಭಿಸುವವರೆಗೂ ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಪಟ್ಟು ಹಿಡಿದರು.

ನಂತರ ಪಪಂ ಸದಸ್ಯರಾದ ಸಂಗಣ್ಣ ಗಾಣಗೇರ, ಗಂಗಾಧರ ಕ್ಯಾದಿಗ್ಗೇರಿ, ರಮೇಶ ಲಮಾಣಿ ಮಹಿಬೂಬ ಡಾಲಾಯತ ಹಾಗೂ ಪಪಂ ಮುಖ್ಯಾ ಧಿಕಾರಿಗಳು ಧರಣಿ ನಿರತರ ಮನವೊಲಿಸಿ ವಾರ್ಡಿಗೆ ತೆರಳಿ ಚರಂಡಿ ನೀರು ಕಟಗಿನ ತಗ್ಗಿಗೆ ಹೋಗದಂತೆ ತಾತ್ಕಾಲಿಕವಾಗಿ ಶಿರೂರ ರಸ್ತೆಯಿಂದ ಮ್ಯಾಗೇರಿ ಅವರ ಮನೆಯವರೆಗೆ ಚರಂಡಿ ನೀರು ಹೋಗಲು ನೀರಿನ ಹರಿವು ಮಾಡಿದರು. ಜತೆಗೆ ಕಟಗಿನ ತಗ್ಗಿನ ಸುತ್ತಲಿನ ತ್ಯಾಜ್ಯ ಹಾಗೂ ಜಾಲಿ ಗಿಡಗಳನ್ನು ಸ್ವತ್ಛಗೊಳಿಸಿದ ನಂತರ ಧರಣಿ ಹಿಂಪಡೆಯಲಾಯಿತು.

ಮಂಜು ಭಜಂತ್ರಿ, ರಸುಲಸಾಬ ತಹಶೀಲ್ದಾರ್‌, ಸುಧಾಕರ ಹಡಪದ, ತಿಮ್ಮಣ್ಣ ಹಗೇದಾಳ, ಬಾಷೇಸಾಬ ಮುಲ್ಲಾ, ಪ್ರಕಾಶ ಸರೂರ, ಸೀತಾಬಾಯಿ ಲಮಾಣಿ, ಶಿವಕ್ಕ ಜೋಶಿ, ಶಂಕ್ರವ್ವ ಸೊಲ್ಲಾಪುರ, ಹನಮವ್ವ ಕಡ್ಲಿಮಟ್ಟಿ ಇದ್ದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.