ಸಂತ್ರಸ್ತರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಿ
Team Udayavani, Oct 18, 2019, 12:22 PM IST
ಗೋಕಾಕ: ಕಲಾರಕೊಪ್ಪ ಗ್ರಾಮದಲ್ಲಿ ನೆರೆಯಿಂದ ನೆಲಸಮವಾದ ಗುಡಿಸಲು ಮನೆಗಳಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಂತ್ರಸ್ತರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು. ಈ ವೇಳೆ ರೈತ ಸಂಘದ ಮುಖಂಡ ಭೀಮಶಿ ಗಡಾದ ಮಾತನಾಡಿ, ನೆರೆ ಬಂದು ಗುಡಿಸಲುಗಳು ಸಂಪೂರ್ಣ ನೆಲಸಮವಾಗಿವೆ. ಪ್ರಾರಂಭಿಕ ಹಂತದ 10,000ರೂ.ಬಿಟ್ಟರೆ ಸಂತ್ರಸ್ತರಿಗೆ ಬೇರೆ ಯಾವ ಸೌಲಭ್ಯಗಳು ದೊರೆತಿಲ್ಲ. ಆದ್ದರಿಂದ ಗ್ರಾಮದ ಗುಡಿಸಲು ವಾಸಿಗಳಿಗೆ ಕಾಯಂ ಮನೆ ಕಟ್ಟಿಸಿಕೊಡಬೇಕೆಂದು ಆಗ್ರಹಿಸಿದರು.
ಗ್ರಾಮದಲ್ಲಿ ಸರ್ವೇ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಅದಕ್ಕಾಗಿ ಮತ್ತೂಮ್ಮೆ ಸರ್ವೇ ಮಾಡಬೇಕು. ಅಲ್ಲದೆ ಸರ್ವೇ ಕಾರ್ಯದಲ್ಲಿಯೂ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಈ ಕುರಿತು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಎಲ್ಲ ನೆರೆ ಪೀಡಿತರಿಗೆ ಸರಕಾರದ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಮಂಜುನಾಥ ಪೂಜೇರಿ, ಭರಮು ಖೇಮಲಾಪೂರ, ಮುತ್ತೇಪ್ಪ ಬಾಗನ್ನವರ, ಮಾರುತಿ ಸನದಿ, ರಾಯಪ್ಪ ಗೌಡಪ್ಪನವರ, ಯಲ್ಲಪ್ಪ ತಿಗಡಿ, ಪ್ರದೀಪ ಪೂಜೇರಿ, ಗೌರವ್ವ ಕುರಿ, ಮುತ್ತೇವ್ವ ದುರದುಂಡಿ, ಶಿವು ಪಾಟೀಲ ಸೇರಿದಂತೆ ಅನೇಕ ಸಂತ್ರಸ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.