ಕಾಲಮಿತಿಯೊಳಗೆ ಸಾಲ ಮರುಪಾವತಿಸಿ: ಚಪ್ಪರದಳ್ಳಿ
Team Udayavani, Oct 18, 2019, 12:54 PM IST
ಹಿರೇಕೆರೂರ: ಬ್ಯಾಂಕ್‌ಗಳು ನೀಡುವ ಸಾಲ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವ ಜತಗೆ ಪಡೆದ ಸಾಲವನ್ನು ಕಾಲಮಿತಿಯಲ್ಲಿ ಮರುಪಾವತಿ ಮಾಡಬೇಕು ಎಂದು ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ ಹೇಳಿದರು.
ರಟ್ಟಿಹಳ್ಳಿಯ ಕೆಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಮಾರುತಿ ಮಹಿಳಾ ಸ್ವಸಹಾಯ ಸಂಘ ಮತ್ತು ಬಸವೇಶ್ವರ ಮಹಿಳಾ ಸ್ವಸಹಾಯ ಸಂಘಕ್ಕೆ ಮಂಜೂರಾದ ತಲಾ 5 ಲಕ್ಷ ರೂ. ಮೊತ್ತದ ಸಾಲದ ಚೆಕ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ ಪ್ರಗತಿಗೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡುತ್ತಿದ್ದು, ಪಡೆದ ಸಾಲವನ್ನು ವ್ಯರ್ಥ ಖರ್ಚು ಮಾಡದೆ, ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಪಡೆದ ಸಾಲ ಸಮಯಕ್ಕೆ ಸರಿಯಾಗಿ ಮರು ಪಾವತಿ ಮಾಡಿದರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಎಂದು ಹೇಳಿದರು.
ಶಾಖಾ ವ್ಯವಸ್ಥಾಪಕ ಎ.ಸಿ.ಪಾಟೀಲ, ಕೆಸಿಸಿ ಬ್ಯಾಂಕ್ ನಿರೀಕ್ಷಕ ಕೆ.ಆರ್.ಹುಲ್ಲತ್ತಿ, ಎಸ್.ಬಿ.ಪಾಟೀಲ, ಎಸ್.ಎನ್.ನಾಡರ, ಎಸ್.ಎಂ.ರೋತಿ, ಸಿ.ಎಸ್.ಗುರಪ್ಪನವರ, ಶ್ವೇತಾ ಮರ್ಕಳ್ಳಿ, ಸಂಘದ ಪ್ರತಿನಿಧಿ ಬಸಮ್ಮ ಗೌಡರ, ಗಿರಿಜಕ್ಕ ಬಣಕಾರ, ಗೀತಾ ಬಣಕಾರ, ಮಲ್ಲಮ್ಮ ಬಣಕಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.