ಕೌರವ ಖ್ಯಾತಿಯ ಗೋಡೆಯವರ ಸಾಕ್ಷ್ಯಚಿತ್ರ ನಿರ್ಮಾಣ

Team Udayavani, Oct 18, 2019, 1:30 PM IST

uk-tdy-2

ಶಿರಸಿ: ಆರುವರೆ ದಶಕಗಳ ಕಾಲ ಯಕ್ಷಗಾನ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳನ್ನು ಕಟ್ಟಿಕೊಟ್ಟ, ಕೌರವ ಪಾತ್ರದ ಮೂಲಕ ಮನೆಮಾತಾದ ಸರಳ ಸಜ್ಜನಿಕೆಯ ಕಲಾವಿದ ಗೋಡೆ ನಾರಾಯಣ ಹೆಗಡೆ ಅವರ ರಂಗಭೂಮಿ ಬದುಕಿನ ಕುರಿತ ಸಾಕ್ಷ್ಯ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಅವರ ಕಲಾ ಬದುಕಿನ ಅನಾವರಣ ದಾಖಲಿಸುವ ಕಾರ್ಯವನ್ನು ಯಕ್ಷಗಾನ ಅಕಾಡೆಮಿ ಮಾಡಿಸುತ್ತಿದೆ.

ಯಕ್ಷಗಾನ ಕಲೆಯನ್ನೇ ತಮ್ಮ ಜೀವನದ ಉಸಿರಾಗಿಸಿಕೊಂಡ, ಅನೇಕ ಪಾತ್ರಗಳ ಸೃಷ್ಟಿಯೊಂದಿಗೆ ಯಕ್ಷಗಾನಕ್ಕೆ ಮಹೋನ್ನತ ಕೊಡುಗೆ ನೀಡಿದ ಪ್ರಸಿದ್ಧ ಕಲಾವಿದ ಗೋಡೆ ನಾರಾಯಣ ಹೆಗಡೆಯವರು. ಸಾವಿರಕ್ಕೂ ಅಧಿಕ ಕೌರವ ಪಾತ್ರದಲ್ಲಿ ಮಿಂಚಿದ, ಅದನ್ನು ಅಷ್ಟೇ ಮನೋಜ್ಞವಾಗಿ ಕಟ್ಟಿಕೊಟ್ಟ ಗೋಡೆ ನಾರಾಯಣ ಹೆಗಡೆಯವರ ಬದುಕು ಮತ್ತು ಕಲಾಸಾಧನೆ

ಕುರಿತು ಸಾಕ್ಷ್ಯಚಿತ್ರ ಇದಾಗಲಿದೆ. ಈ ಕುರಿತಾದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ದಂಟ್ಕಲರ ಮಹತ್ವದ ಯೋಚನೆಯ ಪ್ರತಿಫಲ ಇದಾಗಿದೆ. ಈಗಾಗಲೇ ನೆಬ್ಬೂರು ನಾರಾಯಣ ಭಾಗವತರ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆ ಹಂತದಲ್ಲಿದ್ದು, ಗೋಡೆ ಅವರ ಕುರಿತ ಸಾಕ್ಷ್ಯಚಿತ್ರ ಈ ವರ್ಷದ ಕೊನೆಯೊಳಗೆ ಅಭಿಮಾನಿಗಳ ಕೈ ಸೇರಲಿದೆ.

ಈ ಸಾಕ್ಷಚಿತ್ರವನ್ನು ಶ್ರೀಧರ ಹೆಗಡೆ ಬೆಂಗಳೂರು ಮತ್ತು ಪ್ರಸಿದ್ಧ ಚಿತ್ರನಟ ರಮೇಶ್‌ ಪಂಡಿತ್‌ ನಿರ್ದೇಶಿಸಿದ್ದಾರೆ. ಸಂಶೋಧಕ ಲಕ್ಷಿಶ್‌ ಸೋಂದಾ ಅವರ ಸಂಯೋಜನೆಯಲ್ಲಿ ಈಗಾಗಲೇ ಮಲೆನಾಡಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮುಗಿದಿದೆ. ಈ ಸಾಕ್ಷ್ಯಚಿತ್ರದ ವಿಶೇಷತೆ ಎಂದರೆ ಗೋಡೆಯವರ ಬಾಲ್ಯದ ಬದುಕು, ಅವರಿಗೆ ಯಕ್ಷಗಾನದೆಡೆಗೆ ಆಸಕ್ತಿ ಬರಲು ಕಾರಣವಾದ ಘಟನೆ, ನಂತರದಲ್ಲಿ ಕೊಳಗಿ ಸೀತಾರಾಮ ಭಾಗವತರಲ್ಲಿ ಅವರಿಗೆ ಕಲಿಯಲು ದೊರಕಿದ ಅವಕಾಶ ಎಲ್ಲ ಘಟನೆಗಳನ್ನ ಮರುಸೃಷ್ಟಿ ಮಾಡಲಾಗಿದೆ. ಹಾಗಲ್ಲದೆ ಅವರ ಪ್ರಸಿದ್ಧ ಮತ್ತು ಸ್ಥಾಪಿತ ಪಾತ್ರಗಳ ವಿಶ್ಲೇಷಣೆ ಕೂಡ ಇದೆ. ಗೋಡೆಯವರ ಕುರಿತು ಪತ್ರಕರ್ತ ಎಂ.ಕೆ. ಭಾಸ್ಕರ್‌ರಾವ್‌, ಕಲಾವಿದರಾದ ಸುಬ್ರಹ್ಮಣ್ಯ ಧಾರೇಶ್ವರ, ಎಂ.ಎಲ್‌. ಸಾಮಗ, ಶ್ರೀಧರ ಹೆಗಡೆ ಚಪ್ಪರಮನೆ, ನಿರ್ಮಲಾ ಹೆಗಡೆ ಮುಂತಾದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಾಕ್ಷ್ಯಚಿತ್ರ ಗೋಡೆಯವರ ಇದುವರೆಗಿನ ಕಲಾ ಬದುಕಿನ ಕನ್ನಡಿಯಾಗಿ ಕೈ ಸೇರಲಿದೆ.

ಯಕ್ಷರಂಗದ ಕೌರವ ಎಂದೇ ಜನಜನಿತರಾದ ಗೋಡೆ ಅವರಿಗೆ ಅಕಾಡೆಮಿ ಸಾಕ್ಷ್ಯಚಿತ್ರದ ಮೂಲಕ ಗೌರವಿಸುತ್ತಿರುವದು ವಿಶೇಷವಾಗಿದೆ.

ಟಾಪ್ ನ್ಯೂಸ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.