ಕನ್ನಡ ರಾಜ್ಯೋತವ ಅದ್ಧೂರಿ ಆಚರಣೆಗೆ ನಿರ್ಧಾರ
Team Udayavani, Oct 18, 2019, 4:35 PM IST
ಯಾದಗಿರಿ: ಜಿಲ್ಲಾಡಳಿತ ವತಿಯಿಂದ ನ.1ರಂದು ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ನ. 1ರಂದು ಬೆಳಗ್ಗೆ 7ರಿಂದ 8:00 ಗಂಟೆಯವೆಗೆ ಜಿಲ್ಲೆಯ ವಿವಿಧ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಬೆಳಗ್ಗೆ 8ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ 9:00 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡುವರು.
ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು. ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸ್ತಬ್ಧಚಿತ್ರಗಳ ಮೆರವಣಿಗೆ: ಸಮಾರಂಭಕ್ಕೂ ಮೊದಲು ನಗರದ ಮೈಲಾಪುರ ಅಗಸಿಯಿಂದ ಗಾಂಧಿ ವೃತ್ತದ ಮಾರ್ಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜುವರೆಗೆ ಸ್ತಬ್ಧಚಿತ್ರಗಳನ್ನೊಳಗೊಂಡ ಮೆರವಣಿಗೆ ನಡೆಯಲಿದೆ. ನಾಡದೇವತೆ ಭಾವಚಿತ್ರದ ಮೆರವಣಿಗೆಗೆ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಬೇಕು. ಮೆರವಣಿಗೆಯನ್ನು ನಿಗದಿತ ಸಮಯಕ್ಕೆ ಸರಿಯಾಗಿ ಆರಂಭಿಸಿ, ಕಾರ್ಯಕ್ರಮ ಆರಂಭದ ಮೊದಲು ಕಾಲೇಜು ಮೈದಾನ ತಲುಪಬೇಕು ಎಂದು ನಿರ್ದೇಶಿಸಿದರು.
ಮೆರವಣಿಗೆಯಲ್ಲಿ ಶಿಕ್ಷಣ ಇಲಾಖೆಯಿಂದ 4 ಸ್ತಬ್ಧಚಿತ್ರ, ಅರಣ್ಯ ಇಲಾಖೆ-1, ಎನ್‌ಇಕೆಆರ್ ಟಿಸಿ-1, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ-1, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-1, ನಗರಸಭೆ-2 ಹಾಗೂ ತಹಶೀಲ್ದಾರ್ ಕಾರ್ಯಾಲಯದಿಂದ-1 ಸ್ತಬ್ಧಚಿತ್ರ ಭಾಗವಹಿಸಬೇಕು. ಮೆರವಣಿಗೆಗಾಗಿ ವಾಹನಗಳನ್ನು ಜವಾಬ್ದಾರಿ ವಹಿಸಿಕೊಂಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಒಂದು ದಿನ ಮುಂಚಿತವಾಗಿ ಒದಗಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 5 ವ್ಯಕ್ತಿಗಳನ್ನು ಸನ್ಮಾನಿಸಲು ಜಿಲ್ಲಾ ಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಸಹಾಯಕ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನೊಳಗೊಂಡ ಆಯ್ಕೆ ಸಮಿತಿಯನ್ನು ಸಭೆಯಲ್ಲಿ ರಚಿಸಲಾಯಿತು.
ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಂಜೆ 6:00 ಗಂಟೆಯಿಂದ ನಗರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕೆ ಬೇಕಾದ ಅಗತ್ಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಹ ಮಕ್ಕಳಿಗೆ ಬಹುಮಾನ ನೀಡುವುದಾಗಿ ಭಾವೈಕ್ಯತಾ ಸಮಿತಿ ಸದಸ್ಯರಾದ ಬಾಬು ದೋಖಾ ತಿಳಿಸಿದರು.
ಸಮಾರಂಭದ ವೇದಿಕೆಗೆ ಆಸನ, ಜನರೇಟರ್ ವ್ಯವಸ್ಥೆ ಮಾಡಬೇಕು. ಎಲ್ಲಾ ಸರಕಾರಿ ಕಚೇರಿ, ಜಿಲ್ಲಾಡಳಿತ ಕಾರ್ಯಾಲಯ, ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ನಗರ ಸ್ವತ್ಛತೆ ಮಾಡುವಂತೆ ವಿವಿಧ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ನೀರಿನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ ವಾಹನ ಹಾಗೂ ಕಾಲೇಜು ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು.
ಅಂದು ಬೆಳಗ್ಗೆ 5:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ವಿದ್ಯುತ್ ಲೋಡ್‌ಶೆಡ್ಡಿಂಗ್ ಮಾಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸಭೆಯ ನಡವಳಿಗಳನ್ನು ಓದಿದರು.
ಅಪರ ಜಿಲ್ಲಾ ಧಿಕಾರಿ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭಗವಂತ ಅನವಾರ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ, ಅಬಕಾರಿ ಇಲಾಖೆಯ ಜಿಲ್ಲಾ ವಿಚಕ್ಷಣ ದಳದ ನಿರೀಕ್ಷಕ ಕೇದಾರನಾಥ್, ಉಪ ನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಸಾಹಿತಿ ಅಯ್ಯಣ್ಣ ಹುಂಡೇಕಾರ, ಡಾ| ಸಿದ್ದಪ್ಪ ಹೊಟ್ಟಿ, ಆರ್. ಮಹಾದೇವಪ್ಪ ಅಬ್ಬೆತುಮಕೂರ, ಬಸವಂತರಾಯ ಮಾಲಿಪಾಟೀಲ, ಮೌಲಾಲಿ ಅನಪುರ, ನೂರೊಂದಪ್ಪ ಲೇವಡಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.