ಅರ್ಥಪೂರ್ಣ ಕನ್ನಡ ರಾಜ್ಯೋತ್ಸವಕ್ಕೆ ನಿರ್ಧಾರ


Team Udayavani, Oct 19, 2019, 3:00 AM IST

arthapoorna

ಚಾಮರಾಜನಗರ: ಜಿಲ್ಲಾಡಳಿತದಿಂದ ಎಲ್ಲರ ಸಹಕಾರದೊಂದಿಗೆ ನವೆಂಬರ್‌ 1ರಂದು ನಗರದಲ್ಲಿ ಕನ್ನಡ ರಾಜೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಶುಕ್ರವಾರ ತೀರ್ಮಾನಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ದಾಖಲೆಗಳು ಕನ್ನಡದಲ್ಲೇ ಇರಲಿ: ಸಭೆಯ ಆರಂಭದಲ್ಲೇ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಎಲ್ಲಾ ಶಾಲೆಗಳು, ಬ್ಯಾಂಕುಗಳು, ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯಾಗಬೇಕು. ಸರ್ಕಾರಿ ಕಚೇರಿ ಮಾಹಿತಿ ಫ‌ಲಕ ಹಾಗೂ ಅರ್ಜಿ- ನಮೂನೆಗಳು ಕನ್ನಡದಲ್ಲೇ ಇರಬೇಕು. ಜತೆಗೆ ಅಂಗಡಿ-ಮುಂಗಟ್ಟುಗಳ ಫ‌ಲಕಗಳು ಕನ್ನಡ ಭಾಷೆಯಲ್ಲಿ ಇರುವಂತೆ ಸೂಚನೆ ನೀಡಬೇಕು ಎಂಬ ಸಲಹೆ ನೀಡಿದರು.

ಕನ್ನಡ ಭಾಷೆ ಹಾಗೂ ಕರ್ನಾಟಕ ಏಕೀಕರಣ ಕುರಿತು ವಿಚಾರ ಸಂಕಿರಣವನ್ನು ನವೆಂಬರ್‌ ತಿಂಗಳಿನಲ್ಲಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಜಾನಪದ ಕಲಾವಿದರಿಗೆ ಆದ್ಯತೆ ನೀಡಿ, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಪ್ರಸ್ತಾಪ ಮಾಡಿದರು.

ರಾಜ್ಯೋತ್ಸವ ಪ್ರಯುಕ್ತ ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಮತ್ತು ಅಭ್ಯುದಯವನ್ನು ಬಿಂಬಿಸುವ ಹಾಗೂ ಜಾನಪದ ಕಲಾತಂಡಗಳಿಗೆ ಹೆಚ್ಚಿನ ಅವಕಾಶ ಒದಗಿಸಬೇಕು. ಕನ್ನಡ ಭಾಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಬೇಕು. ಜತೆಗೆ ಸರ್ಕಾರಿ ಇಲಾಖೆಗಳಲ್ಲಿ ಕನ್ನಡವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿರುವ ಅಧಿಕಾರಿಗಳನ್ನು ಗೌರವಿಸಬೇಕು ಎಂಬುದೂ ಸೇರಿದಂತೆ ವಿವಿಧ ಸಲಹೆಗಳನ್ನು ನೀಡಿದರು.

ಡಾ.ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ: ಎಲ್ಲರ ಸಲಹೆಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಈ ಬಾರಿಯು ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಆಕರ್ಷಕ ಪಥ ಸಂಚಲನ, ನಾಡು ನುಡಿ ಕುರಿತು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಬೇಕು. ಸಂಜೆ ವೇಳೆ ಶಾಲಾ-ಕಾಲೇಜುಗಳ ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ನವೆಂಬರ್‌ ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಾವೇರಿ ನಿರ್ದೇಶನ ನೀಡಿದರು.

ರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ, ಕ್ರೀಡಾಂಗಣ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಶೇಷವಾಗಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಕಾರ್ಯಕ್ರಮದಂದು ತಳಿರು-ತೋರಣಗಳಿಂದ ಸಿಂಗರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.

ಫ‌ಲಕಗಳು ಕನ್ನಡದಲ್ಲೇ ಇರಲಿ: ಕನ್ನಡೇತರ ಭಾಷೆಗಳಲ್ಲಿ ಫ‌ಲಕಗಳನ್ನು ಹೊಂದಿರುವ ಅಂಗಡಿಗಳ ಮಾಲಿಕರಿಗೆ ನಗರಸಭೆಯಿಂದ ನೋಟಿಸ್‌ ಜಾರಿ ಮಾಡಿ, ಕೂಡಲೇ ತೆರವುಗೊಳಿಸುವಂತೆ, ಫ‌ಲಕಗಳು ಕನ್ನಡ ಭಾಷೆಯಲ್ಲಿ ಇರುವಂತೆ ಸೂಚಿಸಲಾಗುವುದು. ಬ್ಯಾಂಕುಗಳಿಗೂ ನೋಟಿಸ್‌ ನೀಡಿ, ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಹಾಗೂ ಬ್ಯಾಂಕುಗಳ ಸೂಚನಾ ಫ‌ಲಕ, ಅರ್ಜಿಗಳಲ್ಲಿ ಕನ್ನಡ ಅನುಷ್ಠಾನಗೊಳಿಸಲು ಆದೇಶಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಆರ್‌ಟಿಓ ಇಲಾಖೆಗಳಲ್ಲಿ ಸಮರ್ಪಕ ರೀತಿಯಲ್ಲಿ ಕನ್ನಡ ಭಾಷೆ ಅನುಷ್ಠಾನ ಕೆಲಸವಾಗಬೇಕು. ಅಲ್ಲಿನ ಅರ್ಜಿ-ನಮೂನೆ, ಮಾಹಿತಿ ಫ‌ಲಕಗಳನ್ನು ಶೀಘ್ರವೇ ಕನ್ನಡ ಭಾಷೆಗೆ ಅನುವಾದಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ಬಿ.ಎಚ್‌. ನಾರಾಯಣರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ವೈ. ಸೋಮಶೇಖರ್‌, ಸಾಹಿತಿ ಕೆ. ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ‌ ಬಿ.ಎಸ್‌.ವಿನಯ್‌, ಕನ್ನಡ ಪರ ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ,

ಚಾ.ಗು. ನಾಗರಾಜು, ಗು. ಪುರುಷೋತ್ತಮ್‌, ಸುರೇಶ್‌ ವಾಜಪೇಯಿ, ನಿಜಧ್ವನಿ ಗೋವಿಂದರಾಜು, ಸಿ.ಕೆ. ಮಂಜುನಾಥ್‌, ವೆಂಕಟರಮಣಸ್ವಾಮಿ(ಪಾಪು), ಸಿ.ಎಂ. ನರಸಿಂಹಮೂರ್ತಿ, ಆಲೂರು ಮಲ್ಲು, ನಾಗೇಂದ್ರ, ಸೋಮ ನಾಯಕ, ಜಯಕುಮಾರ್‌, ಸಿ.ಎಂ. ಕೃಷ್ಣಮೂರ್ತಿ, ಆಲೂರು ನಾಗೇಂದ್ರ, ಅಂಬರೀಶ, ಬ್ಯಾಡಮೂಡ್ಲು ಬಸವಣ್ಣ, ಸಿ.ಎಂ.ಶಿವಣ್ಣ, ಸುರೇಶ್‌ ನಾಯಕಹರೀಶ್‌, ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.