ಮೂಲಸೌಲಭ್ಯ ವಂಚಿತ ವಾಚನಾಲಯ
Team Udayavani, Oct 19, 2019, 3:20 PM IST
ಯಲಬುರ್ಗಾ: ಪಟ್ಟಣದಲ್ಲಿರುವ ತಾಲೂಕು ಕೇಂದ್ರದ ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಕೊರತೆಯಿಂದ ಓದುಗರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
1984ರಲ್ಲಿ ಗ್ರಂಥಾಲಯ ಪಟ್ಟಣದಲ್ಲಿ ಆರಂಭಗೊಂಡಿದೆ. 1994ರಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಗ್ರಂಥಾಲಯಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಿರಿಯ ನಾಗರಿಕರು ಪತ್ರಿಕೆ, ಪುಸ್ತಕ ಓದಲು ಬರುತ್ತಾರೆ. ಆದರೆ ಕಟ್ಟಡ ಇಕ್ಕಟ್ಟಿನಿಂದ ಕೂಡಿದೆ. ಕೇವಲ 30×20 ಅಳತೆ ಕಟ್ಟಡವಿದೆ. ಓದುಗರಿಗೆ ಸ್ಥಳದ ಅಭಾವ ಕಾಡುತ್ತಿದೆ. ನಿತ್ಯ 200 ಜನರು ಆಗಮಿಸುತ್ತಿದ್ದು, ಇವರಿಗೆ ಕುಳಿತುಕೊಳ್ಳಲು ಕೇವಲ 32 ಕುರ್ಚಿಗಳು ಮಾತ್ರ ಇವೆ. ಇನ್ನುಳಿದಂತೆ ಹಲವಾರು ಜನತೆ ಹೊರಗೆ ಕುಳಿತು ಅಭ್ಯಾಸ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯದಲ್ಲಿ 5 ಅಲ್ಮೆರಾ, 7 ರ್ಯಾಕ್, 32 ಕುರ್ಚಿಗಳು ಇವೆ. ಗ್ರಂಥಾಲಯದಲ್ಲಿ ಸುಮಾರು 10 ಸಾವಿರ ಪುಸ್ತಕಗಳಿವೆ. ಕನ್ನಡ ದಿನಪತ್ರಿಕೆಗಳನ್ನು ಹಾಕಿಸಲಾಗುತ್ತಿದೆ.
ಸೌಲಭ್ಯಗಳಿಲ್ಲ: ಗ್ರಂಥಾಲಯಕ್ಕೆ ಫ್ಯಾನ್, ಕುಡಿಯುವ ನೀರಿನ ವ್ಯವಸ್ಥೆ, ಸ್ಥಳ ಅಭಾವ, ಶೌಚಾಲಯ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ.
ನಿರ್ವಹಣೆ ಕೊರತೆ: ಗ್ರಂಥಾಲಯ ನಿರ್ವಹಣೆ ಕೊರತೆಯಿಂದ ಬಳಲುತ್ತಿದೆ. ಸುಣ್ಣ ಬಣ್ಣ ಕಂಡಿಲ್ಲ, ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ. ಸಮಯಕ್ಕೆ ಸರಿಯಾಗಿ ಗ್ರಂಥಾಲಯ ಬಾಗಿಲು ತೆರೆಯುವುದಿಲ್ಲ. ಮೇಲ್ವಿಚಾರಕು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಪುಸ್ತಕಗಳು ಧೂಳು ತಿನ್ನುತ್ತಿವೆ. ಮೇಲ್ವಿಚಾರಕ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಇತ್ತೀಚೆಗೆ ಬಹಳಷ್ಟು ಯುವಕರು ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಆಸಕ್ತಿ ತಳೆದಿದ್ದು, ಗ್ರಂಥಾಲಯದತ್ತ ಮುಖ ಮಾಡುತ್ತಿದ್ದಾರೆ. ಆದರೆ ಗ್ರಂಥಾಲಯ ಮೂಲ ಸೌಕರ್ಯ ಕೊರತೆಯಿಂದ ಓದುಗರು ನಿರಾಸೆ ಅನುಭವಿಸುವಂತಾಗಿದೆ. ಗ್ರಂಥಾಲಯಗಳ ಪುನಶ್ಚೇತನಕ್ಕೆ ಸಂಬಂಧಿ ಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಈ ಬಗ್ಗೆ ಯಾರೊಬ್ಬರೂ ಸ್ಪಂದಿಸಿಲ್ಲ. ಹಾಗಾಗಿ ಗ್ರಂಥಾಲಯ ಕೇಳುವವರೇ ಇಲ್ಲದಂತಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ
ಸದಸ್ಯತ್ವ ದರ ಹೆಚ್ಚು: ಗ್ರಂಥಾಲಯ ಸದಸ್ಯತ್ವ ಪಡೆಯಲು 100 ರೂ. ನಿಗದಿ ಮಾಡಿದ್ದಾರೆ. ಈ ಮೊದಲು 10 ರೂ. ಇತ್ತು, ಮತ್ತೆ 10 ರೂ.ಗೆ ಸದಸ್ಯತ್ವ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇವರೆಗೂ 239 ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ. ಒಟ್ಟಾರೆಯಾಗಿ ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ, ಇಂಗ್ಲಿಷ್ ದಿನಪತ್ರಿಕೆಗಳು, ಸಾಹಿತ್ಯಕ ಪುಸ್ತಕಗಳ ಬೇಡಿಕೆ ಇದೆ. ಪುಸ್ತಕ ಸಂಗ್ರಹಣೆಗೆ ಇನ್ನೊಂದು ಕಟ್ಟಡ ಅವಶ್ಯಕತೆ ಇದೆ. ಮತ್ತೆ ಒಂದು ಕಟ್ಟಡ ಅವಶ್ಯಕತೆ ಈ ಗ್ರಂಥಾಲಯಕ್ಕೆ ಇದೆ. ತಾಲೂಕು ಕೇಂದ್ರದಲ್ಲೇ ಇರುವ ಗ್ರಂಥಾಲಯ ದುಸ್ಥಿತಿ ಈ ರೀತಿಯಾದರೆ ಗ್ರಾಮೀಣ
ಪ್ರದೇಶಗಳ ಗ್ರಂಥಾಲಯಗಳ ದುಸ್ಥಿತಿ ಹರೋಹರ ಎನ್ನುವಂತಾಗಿದೆ. ಯಲಬುರ್ಗಾ ಹಿಂದುಳಿದ ತಾಲೂಕು ಆಗಿದ್ದು, ವಿದ್ಯಾವಂತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರಿಂದ ಸೌಲಭ್ಯ ಕಲ್ಪಿಸಲು ಮುಂದಾಗುವಂತೆ ಓದುಗರು ಆಗ್ರಹಿಸಿದ್ದಾರೆ.
-ಮಲ್ಲಪ್ಪ ಮಾಟರಂಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.