ಯೋಜನೆ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಿ

Team Udayavani, Oct 19, 2019, 4:02 PM IST

19-October-18

ಬಳ್ಳಾರಿ: ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳು ಜಾರಿಗೆ ತರುತ್ತಿದ್ದು, ಯುವಕರು ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಸದುಪಯೋಗ ಪಡೆದುಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಸಿರುಗುಪ್ಪ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್‌ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಗಿರಿಜನ ಉಪಯೋಜನೆಯಡಿ ಮೀಸಲು ಕ್ಷೇತ್ರದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಯೋಜನೆಗಳ ಕುರಿತು 2 ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸುಮಾರು 1 ಕೋಟಿ ರೂವರೆಗೂ ಆರ್ಥಿಕ ನೆರವು ಹಾಗೂ ಸಹಾಯಧನ ನೀಡುತ್ತಿದೆ. ಬ್ಯಾಂಕ್‌ಗಳ ಮೂಲಕ ಸಾಲ ಪಡೆದು ಉದ್ದಿಮೆಗಳನ್ನು ಸ್ಥಾಪಿಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿ, ಸರ್ಕಾರದ ಸಹಾಯಧನವನ್ನು ಕೂಡ ಪಡೆದುಕೊಂಡು ಯಶಸ್ವಿಯಾಗಿ ಜವಳಿ ಕ್ಷೇತ್ರದಲ್ಲಿ ಜೀನ್ಸ್‌ ಉದ್ಯಮ, ಸಿದ್ಧ ಉಡುಪುಗಳ ಘಟಕ ಸ್ಥಾಪಿಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಫ್ತು ಮಾಡುವ ಅವಕಾಶವನ್ನು ಒದಗಿಸಿದೆ ಎಂದು ಅವರು ತಿಳಿಸಿದರು.

ಉತ್ತರ ವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಶ್ರೀಧರ ನಾಯಕ ಮಾತನಾಡಿ, ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ಕ್ಷೇತ್ರವೆಂದರೆ ಜವಳಿ ಕ್ಷೇತ್ರವಾಗಿದ್ದು, ಜೀನ್ಸ್‌ ಉದ್ಯಮದಲ್ಲಿ ಬಳ್ಳಾರಿ ಜಿಲ್ಲೆಯು ರಾಜ್ಯದಲ್ಲಿ 2ನೇ ಸ್ಥಾನವನ್ನು ಪಡೆದಿದ್ದು, ಜಿಲ್ಲೆಯಲ್ಲಿ ಜವಳಿ ಕ್ಷೇತ್ರಕ್ಕೆ ಅಗತ್ಯವಿರುವ ಕಚ್ಚಾವಸ್ತು ಹತ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ ಎಂದರು.

ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ರೈತರು ಬೆಳೆದ ಹತ್ತಿಯನ್ನು ಸಂಸ್ಕರಿಸಿ ಬಟ್ಟೆ ನೇಯಲು ಅಗತ್ಯವಿರುವಂತೆ ಸಂಸ್ಕರಿಸುವ ಕಾರ್ಖಾನೆಗಳ ಸ್ಥಾಪನೆಗೆ ಹಾಗೂ ಸಿದ್ಧವಾದ ಬಟ್ಟೆಗಳನ್ನು ಉಡುಪುಗಳನ್ನಾಗಿ ಹೊಲಿಯುವ ಟೈಲರಿಂಗ್‌ ಘಟಕಗಳ ಸ್ಥಾಪನೆಗೆ ಅನೇಕ ಯೋಜನೆಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದ್ದು, ಕೈಮಗ್ಗ ನೇಕಾರರಿಗೆ ತರಬೇತಿ, ನೇಕಾರರ ಸಾಲಮನ್ನಾ ಕೈಮಗ್ಗ ವಿಕಾಸ ಯೋಜನೆ, ಕಚ್ಚಾಮಾಲು ಖರೀದಿಗೆ ಸಹಾಯಧನ, ಮಾರುಕಟ್ಟೆ, ವಿದ್ಯುತ್‌ ಮಗ್ಗ ಖರೀದಿಗೆ ಸಹಾಯಧನ, ವಸತಿ ಸೌಲಭ್ಯ, ವಿದ್ಯುತ್‌ ರಿಯಾಯಿತಿ ಸಹಾಯಧನ, ಸ್ಯಾನಿಟರಿ ನ್ಯಾಪ್‌ಕಿನ್‌ ತಯಾರಿಕಾ ಘಟಕ ಸೇರಿದಂತೆ ವಿಶೇಷ ಬೊಟಿಕ್‌ ತರಬೇತಿ, ಮುಂದುವರೆದ ಹೊಲಿಗೆ ತರಬೇತಿ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿದ್ದು, ಪ.ಜಾತಿ. ಪ.ಪಂಗಡದ ಫಲಾನುಭವಿಗಳಿಗೆ ಶೇ. 90ರಷ್ಟು ಸಹಾಯಧನ ಯೋಜನೆಗಳನ್ನು ಇಲಾಖೆಯು ನೀಡುತ್ತಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕಿನ ತಾ.ಪಂ ಅಧ್ಯಕ್ಷೆ ಕೆ.ದೇವಮ್ಮ ಪಕ್ಕೀರಪ್ಪ, ಜಿ.ಪಂ. ಸದಸ್ಯರಾದ ಹೆಚ್‌.ಸಿ.ರಾಧ ಧರಪ್ಪನಾಯಕ ಮತ್ತು ಕೋಟೆಶ್ವರರೆಡ್ಡಿ, ತಾಪಂ ಇ.ಒ. ಶಿವಪ್ಪ ಸುಬೇದಾರ್‌, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ವಿ.ವಿಠ್ಠಲ ರಾಜು, ಶಿಶು ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ನಾಯಕ, ತಾ.ಪಂ ಸದಸ್ಯ ಕೊರಿ ಪಿಡ್ಡಯ್ಯ ಮುಖಂಡರಾದ ಪಕ್ಕೀರಪ್ಪ, ನಾಗೇಶಪ್ಪ, ಶಂಕ್ರಪ್ಪ, ಶೇಷಯ್ಯ ಸೇರಿದಂತೆ ಪ.ಜಾತಿ. ಪ.ಪಂಗಡದ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.