ಸುವರ್ಣಾವಕಾಶದ ನಿರೀಕ್ಷೆಯಲ್ಲಿ ರಿಷಿ

ದೇವರೆ ದೇವರೆ ರ್ಯಾಪರ್‌ ಸಾಂಗ್‌ಗೆ ಕೇಳುಗರು ಫಿದಾ

Team Udayavani, Oct 20, 2019, 3:02 AM IST

suvarnavakasha

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಅಚ್ಚ ಕನ್ನಡದ ಶೀರ್ಷಿಕೆಗಳು ಜನಪ್ರಿಯವಾಗುತ್ತಿವೆ. ಆ ಸಾಲಿಗೆ ಇದೀಗ “ಸಾರ್ವಜನಿಕರಿಗೆ ಸುವರ್ಣಾವಕಾಶ’ ಚಿತ್ರವೂ ಸೇರಿದೆ. ರಿಷಿ ಈ ಚಿತ್ರದ ಹೀರೋ. ಅವರಿಗಿದು ನಾಲ್ಕನೇ ಸಿನಿಮಾ. ಇನ್ನು, ಈ ಚಿತ್ರಕ್ಕೆ “ಗುಳ್ಟು’ ಖ್ಯಾತಿಯ ಜನಾರ್ದನ್‌ ಚಿಕ್ಕಣ್ಣ ಹಾಗೂ ಎನ್‌.ಹರಿಕೃಷ್ಣ ಕಥೆ ಮತ್ತು ಚಿತ್ರಕಥೆ ಒದಗಿಸಿದ್ದಾರೆ. ಅನೂಪ್‌ ರಾಮಸ್ವಾಮಿ ನಿರ್ದೇಶಕರು.

ಪ್ರಶಾಂತ್‌ರೆಡ್ಡಿ, ದೇವರಾಜ್‌ ಆರ್‌., ಜನಾರ್ದನ್‌ ಚಿಕ್ಕಣ್ಣ ನಿರ್ಮಾಪಕರು. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇತ್ತೀಚೆಗೆ ಮೊದಲ ವಿಡಿಯೋ ಸಾಂಗ್‌ ಬಿಡುಗಡೆ ಮಾಡಿದ್ದು, ಎಲ್ಲೆಡೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ. ಇದು ಸಹಜವಾಗಿಯೇ ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಮಿಥುನ್‌ ಮುಕುಂದನ್‌ ಸಂಗೀತವಿರುವ “ದೇವರೆ ದೇವರೆ..’ ಹಾಡನ್ನು ರ್ಯಾಪರ್‌ ಅಲೋಕ್‌ ಹಾಗು ನಿರ್ದೇಶಕ ಅನೂಪ್‌ ಬರೆದಿದ್ದಾರೆ.

ಈ ಚಿತ್ರದ ಮೊದಲ ವಿಡಿಯೋ ಹಾಡನ್ನು ಅಲೋಕ್‌ ಹಾಗು ಅರ್ಪಿತ್‌ ಹಾಡಿದ್ದಾರೆ. ಇಡೀ ಹಾಡಿಗೆ ಸೆಟ್‌ ಹಾಕಿ ಚಿತ್ರೀಕರಿಸಿದ್ದು, ಮೊದಲ ಬಾರಿಗೆ ಹೊಸ ಶೈಲಿಯ ರ್ಯಾಪರ್‌ ಹಾಡನ್ನು ಚಿತ್ರೀಕರಿಸಲಾಗಿದೆ. ಚೆನ್ನೈ ಮೂಲದ ಶ್ರೀಧರ್‌ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ನಾಯಕ ರಿಷಿ ಅವರಿಗೆ ಧನ್ಯಾ ಬಾಲಕೃಷ್ಣ ನಾಯಕಿಯಾಗಿದ್ದಾರೆ. ಇದು ಇವರ ಮೊದಲ ಚಿತ್ರ.

ಈ ಹಿಂದೆ ತಮಿಳು, ತೆಲುಗು ಹಾಗು ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. “ಇದೊಂದು ಕಾಮಿಡಿ ಥ್ರಿಲ್ಲರ್‌ ಶೈಲಿಯ ಚಿತ್ರವಾಗಿದ್ದು, ನಾಯಕ ತನ್ನ ಜೀವನದಲ್ಲಿ ಗೊತ್ತಿಲ್ಲದಂತೆ ಸಮಸ್ಯೆಯೊಂದರಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಹೊರಬರಲು ಹೇಗೆಲ್ಲ ಹೆಣಗಾಡುತ್ತಾನೆ. ಅಂತಿಮವಾಗಿ ಏನಾಗುತ್ತದೆ? ಎಂಬುದುದೇ ಚಿತ್ರದ ಸಾರಾಂಶ. ನಾಯಕ ರಿಷಿ ಅವರಿಲ್ಲಿ ಅಂತಿಮ ವರ್ಷದ ಎಂಬಿಎ ಓದುತ್ತಿರುವ ಹುಡುಗನ ಪಾತ್ರ ನಿರ್ವಹಿಸಿದ್ದಾರೆ.

ನಾಯಕಿ ಧನ್ಯಾ ಅವರದು ಎಂಬಿಎ ಓದುತ್ತಿರುವ ಸಂಪ್ರದಾಯಸ್ಥ ಬ್ರಾಹ್ಮಣ ಮನೆತನದ ಹುಡುಗಿಯ ಪಾತ್ರವಂತೆ. ಉಳಿದಂತೆ ಚಿತ್ರದಲ್ಲಿ ದತ್ತಣ್ಣ, ರಂಗಾಯಣ ರಘು, ಮಿತ್ರ, ಶಾಲಿನಿ, ಜಯ, ಸಿದ್ದು ಮೂಲೆಮನೆ ಇತರರು ನಟಿಸಿದ್ದಾರೆ. ಚಿತ್ರಕೆಕ ವಿಘ್ನೇಶ್‌ ರಾಜ್‌ ಛಾಯಾಗ್ರಹಣವಿದೆ. ಶಾಂತ ಕುಮಾರ್‌ ಸಂಕಲನವಿದೆ. ವರದರಾಜ್‌ ಕಲಾ ನಿರ್ದೇಶನ ಮತ್ತು ವಿಕ್ರಂ ಮೋರ್‌ ಸಾಹಸ ನಿರ್ದೇಶನವಿದೆ. ಬೆಂಗಳೂರು ಮತ್ತು ವಯನಾಡು ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.