“ಕರ್ತವ್ಯದಲ್ಲಿ ಬೇಜವಾಬ್ದಾರಿ; ಅಧಿಕಾರಿಗಳಿಗೆ ನೋಟಿಸ್‌ ನೀಡಿ’


Team Udayavani, Oct 20, 2019, 5:00 AM IST

1910BDRE1A-1

ಬೈಂದೂರು: ಕೊಡೇರಿ ಕಿರು ಬಂದರು ಕಾಮಗಾರಿಗೆ 27 ಕೋಟಿ ರೂ. ಅನುದಾನ 2016ರಲ್ಲಿ ಮಂಜೂರಾಗಿದೆ. 2019 ಜನವರಿ ಒಳಗೆ ಕಾಮಗಾರಿ ಮುಗಿಯಬೇಕಿತ್ತು. ಆದರೆ ಇದುವರೆಗೆ ಕಾಮಗಾರಿ ಪ್ರಗತಿ ಕಂಡಿಲ್ಲ. ಈ ಕುರಿತು ಎರಡೆರಡು ಬಾರಿ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳಲ್ಲಿ ಕಾರಣ ಕೇಳಲಾಗಿದೆ. ಆದರೆ ಇದುವರೆಗೆ ಕೇವಲ ಸಬೂಬು ನೀಡುತ್ತಿದ್ದಾರೆ ಬಿಟ್ಟರೆ ಕಾಮಗಾರಿ ಆರಂಭಿಸಿಲ್ಲ. ಜನರ ಸೇವೆ ಮಾಡಲು ಇಷ್ಟವಿದ್ದರೆ ಕೆಲಸ ಮಾಡಿ, ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ತೆರಳಿ ಎಂದು ಸಂಸದ ಬಿ.ವೈ. ರಾಘವೇಂದ್ರ ಬಂದರು ಮತ್ತು ಮೀನುಗಾರಿಕಾ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.

ಕಮಲಶಿಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಮರವಂತೆಯಲ್ಲಿ ಹೊಸ ಕಾಮಗಾರಿ ಟೆಂಡರ್‌ ಆಗಿದೆ. ಹಳೆಯ ಕಾಮಗಾರಿ ಮುಗಿದು 3 ವರ್ಷದಲ್ಲಿ ಶಿಥಿಲಗೊಂಡಿದೆ. ಇಂತಹ ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸ ಬೇಕು ಹಾಗೂ ಬೇಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಗಳಿಗೆ ನೋಟಿಸ್‌ ನೀಡಬೇಕು ಎಂದು ಮುಖ್ಯ ಮಂತ್ರಿಗಳ ಆಪ್ತ ಕಾರ್ಯದರ್ಶಿಗಳಿಗೆ ತಿಳಿಸಿದರು.
ಬೈಂದೂರು ತಾ| ಆಸ್ಪತ್ರೆ ಸಂಕೀರ್ಣ ನೀಲನಕಾಶೆ ವೀಕ್ಷಿಸಿ ವಿವಿಧ ಕಚೇರಿ ಗಳನ್ನು ಒಂದೇ ವಲಯದಲ್ಲಿ ಪ್ರಾರಂಭಿಸ ಬೇಕಾಗಿರುವುದರಿಂದ ಭವಿಷ್ಯದ ಯೋಚನೆ ಮನಗಂಡು ಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಟವರ್‌ ಸ್ಥಾಪಿಸಲು ಆದೇಶ
ಬಿಎಸ್ಸೆನ್ನೆಲ್‌ ನಿರ್ವಹಣೆ ಕೊರತೆಯಿಂದ ಸ್ತಬ್ಧಗೊಳ್ಳುತ್ತಿದೆ. ಆದರೆ ಗ್ರಾಮೀಣ ಭಾಗ ದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಹೀಗಾಗಿ ಸಭೆಯಲ್ಲಿ ಹಾಜರಿದ್ದ ಜಿಯೋ ಹಾಗೂ ಏರ್‌ಟೆಲ್‌ ಪ್ರತಿನಿಧಿಗಳಿಗೆ ಜಿಲ್ಲಾಡಳಿತ, ಗ್ರಾಮ ಪಂಚಾಯತ್‌ ಪೂರಕವಾಗಿ ಸ್ಪಂದಿಸಲು ತಿಳಿಸಿದರು.

ಸಮರ್ಪಕವಾಗಿ ಕಾಮಗಾರಿ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಕ್ಷೇತ್ರಕ್ಕೆ 200 ಕೋಟಿ ರೂ.ಗೂ ಅಧಿಕ ಕಾಮಗಾರಿ ಮಂಜೂರಾಗಿದೆ.ಇಲಾಖಾ ಅಧಿಕಾರಿಗಳು ಸಮರ್ಪಕವಾಗಿ ಕಾಮಗಾರಿ ನಡೆಸಬೇಕು. ಗುತ್ತಿಗೆದಾರರ ಲಾಬಿಗೆ ಮಣಿಯುವುದನ್ನು ಸಹಿಸುವುದಿಲ್ಲ. ಪಾರದರ್ಶಕ ಆಡಳಿತ ನೀಡುವುದು ನನ್ನ ಪ್ರಮುಖ ಧ್ಯೇಯ ಎಂದರು.

ಹೆದ್ದಾರಿ ಅಧಿಕಾರಿಗಳು ಗೈರು
ಈ ಹಿಂದೆ ಬೈಂದೂರಿನಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿಯೂ ಹೆದ್ದಾರಿ ಅಧಿಕಾರಿಗಳು ಹಾಜರಾಗಿರಲಿಲ್ಲ. ಈಗ ಕೂಡ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆಯಲ್ಲಿ ಉಪಸ್ಥಿತರಿರಲಿಲ್ಲ. ಇದುವರೆಗೆ ನಿರ್ಮಾಣವಾಗದ ಸರ್ವಿಸ್‌ ರಸ್ತೆ ಹಾಗೂ ಶಿರೂರಿನಲ್ಲಿ ಟೋಲ್‌ಗೇಟ್‌ ಆರಂಭಿಸುವ ಸಿದ್ಧತೆಯಲ್ಲಿದ್ದು ಸ್ಥಳೀಯರಿಗೆ ರಿಯಾಯಿತಿ ನೀಡಲು ಮನವಿಗಳಿದ್ದು ಅಧಿಕಾರಿಗಳು ಗೈರು ಹಾಜರಾದ ಕಾರಣ ಪತ್ರ ಬರೆಯಲು ಸಭೆಯಲ್ಲಿ ತಿಳಿಸಲಾಯಿತು.

ಈ ಸಂದರ್ಭ ಜಿಲ್ಲಾಧಿಕಾರಿ ಜಿ. ಜಗದೀಶ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್‌, ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ರಾಜಪ್ಪ, ಶ್ರೀರಂಗಯ್ಯ, ಕುಂದಾಪುರ ಡಿ.ವೈ.ಎಸ್‌.ಪಿ. ಹರಿರಾಮ್‌ ಶಂಕರ್‌, ಬೈಂದೂರು ತಹಶೀಲ್ದಾರ ಬಿ.ಪಿ. ಪೂಜಾರ್‌, ಜಿ.ಪಂ. ಹಾಗೂ ತಾ.ಪಂ. ಸದಸ್ಯರು ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ ತಿಪ್ಪೇಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.