ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳ: ಸಚಿವ ಬೊಮ್ಮಾಯಿ
Team Udayavani, Oct 20, 2019, 3:05 AM IST
ಹಾವೇರಿ: ರಾಘವೇಂದ್ರ ಔರಾದ್ಕರ ವರದಿ ಶಿಫಾರಸಿನಂತೆ ಪೊಲೀಸ್ ಅಧಿ ಕಾರಿ ಹಾಗೂ ಸಿಬ್ಬಂದಿ ವೇತನ ಶ್ರೇಣಿ ಉನ್ನತೀಕರಿಸಿ ಕಳೆದ ಆಗಸ್ಟ್ನಿಂದಲೇ ಪೂರ್ವಾನ್ವಯವಾ ಗುವಂತೆ ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ದೀಪಾವಳಿ ಉಡುಗೊರೆ ಹಾಗೂ ಪೊಲೀಸ್ ಹುತಾತ್ಮ ದಿನ ಮುನ್ನಾದಿನ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡಿದೆ. ಹೊಸ ವೇತನ ಶ್ರೇಣಿಯಂತೆ ಹೊಸದಾಗಿ ಸೇರುವ ಪೊಲೀಸ್ ಪೇದೆಗಳಿಗೆ ಹಾಲಿ ಮಾಸಿಕ ವೇತನ ರೂ. 30,427 (ಎಲ್ಲ ಭತ್ಯೆ ಸೇರಿ)ರ ಬದಲಿಗೆ ರೂ.34,267 ಸಿಗಲಿದೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ಸರ್ಕಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಕಳಕಳಿಯಿಂದ ಈಗಾಗಲೇ ಎಲ್ಲ ಶ್ರೇಣಿಯ ಸಿಬ್ಬಂದಿಗೆ ಈಗಿರುವ ಕಷ್ಟ ಪರಿಹಾರ ಭತ್ಯೆ ಜತೆಗೆ ಹೆಚ್ಚುವರಿಯಾಗಿ 1000 ರೂ. ಮಂಜೂರು ಮಾಡಿದೆ. ಇದರಿಂದ ಮಾಸಿಕವಾಗಿ 10.70 ಕೋಟಿ ರೂ. ಹಾಗೂ ವಾರ್ಷಿಕ 128.38 ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.