ಹೆಬ್ರಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
Team Udayavani, Oct 20, 2019, 5:24 AM IST
ಹೆಬ್ರಿ: ಹೆಬ್ರಿ ತಾಲೂಕು ಕಚೇರಿಗೆ ಅ.18ರಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಭೇಟಿ ನೀಡಿ ಅಲ್ಲಿಯ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.
ಹೆಬ್ರಿ ತಾಲೂಕು ಘೋಷಣೆಗೊಂಡು ಸುಮಾರು ಎರಡು ವರ್ಷಗಳಾಗುತ್ತಾ ಬಂದರೂ ಇನ್ನೂ ಪೂರ್ಣ ಪ್ರಮಾಣದ ತಾಲೂಕು ಕಾರ್ಯಾರಂಭವಾಗದ ಕುರಿತು, ಜನರ ಪ್ರಮುಖ ಬೇಡಿಕೆಯಾದ ಆಧಾರ್, ಅಟಲ್ ಜೀ ಸೇವಾ ಕೇಂದ್ರ ಮೊದಲಾದ ತುರ್ತು ಕಚೇರಿಗಳ ಕೆಲಸ ಆರಂಭವಾಗದ ಬಗ್ಗೆ ಹೆಬ್ರಿ ತಹಶೀಲ್ದಾರ್ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.
ಶೀಘ್ರ ಸಮಸ್ಯೆ ಪರಿಹಾರ
ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ ತುರ್ತು ಸೇವೆಗಳ ಕಚೇರಿಯನ್ನು ಶೀಘ್ರ ಆರಂಭಿಸಲಿದ್ದು ತಾಲೂಕಿನ ವಿವಿಧ ಇಲಾಖೆಗಳನ್ನು ಕೂಡಲೇ ತರುವಂತೆ ಪ್ರಯತ್ನಿಸಲಾಗುವುದು ಎಂದರು.
ತಹಶೀಲ್ದಾರ್‌ಗೆ ಮೆಚ್ಚುಗೆ
ಸಕಾಲ ಸೇವೆಗಳ ಆಧಿನಿಯಮದಡಿ ನಿಗದಿತ ಕಾಲಮಿತಿಯಲ್ಲಿ ರಾಜ್ಯದ ನಾಗರಿಕರಿಗೆ ಸೇವೆ ಒದಗಿಸಿ ತಮ್ಮ ಕರ್ತವ್ಯಪ್ರಜ್ಞೆಯಿಂದ ಕೆಲಸ ನಿರ್ವಹಿಸಿ ಪ್ರಮುಖ ಪಾತ್ರ ವಹಿಸಿದ್ದ ಹೆಬ್ರಿ ತಾಲೂಕು ತಹಶೀಲ್ದಾರ್ ಮಹೇಶ್ಚಂದ್ರ ಅವರ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್,ಹೆಬ್ರಿ ಗ್ರಾ.ಪಂ.ಅಧ್ಯಕ್ಷ ಎಚ್.ಕೆ. ಸುಧಾಕರ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.