ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ ಭಾರತ ರತ್ನ ಬೇಡ: ಸಿದ್ದರಾಮಯ್ಯ
Team Udayavani, Oct 20, 2019, 1:32 PM IST
ಮೈಸೂರು: ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು. ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ. ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹೇಳೀದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಿ.ಟಿ.ರವಿ ಟೀಕೆ ವಿಚಾರದಲ್ಲಿ ಸಿ.ಟಿ.ರವಿ ಒಬ್ಬ ಯಕಶ್ಚಿತ್ ರಾಜಕಾರಣಿ. ನಾನು ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ಹೇಳಿಲ್ಲ. ನಾನು ಕೂಡ ಒಬ್ಬ ಹಿಂದೂ. ಹಿಂದುತ್ವದ ಮೂಲಕ ಕೋಮಯವಾದ ಬಿತ್ತುವವರಿಗೆ ಬೇಡ. ಹಿಂದೂ ಹೆಸರಿನಲ್ಲಿ ಬೆಂಕಿ ಹಚ್ಚುವವರಿಗೆ ಬೇಡ ಅಂತ ಹೇಳಿದ್ದೆ ಎಂದು ಹೇಳಿದರು.
ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತೀರಾ ? : ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ಜನರ ಆಶೀರ್ವಾದ ಇದ್ದರೆ ನೋಡೋಣ. ರಾಜಕಾರಣ ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ ಆಗುತ್ತೇನೆ, ಇದರಲ್ಲಿ ತಪ್ಪೇನಿದೆ ? ಎಂದರು.
ನಂತರ ಮಾತಾನಾಡಿದ ಅವರು ಜಾತಿಗಣತಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಆಸಕ್ತಿ ಇಲ್ಲ. ಜಾತಿಗಣತಿ ವರದಿ ಸಿದ್ಧಪಡಿಸಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದರು. ಈಗ ಅವರು ಕರ್ತವ್ಯದಲ್ಲಿ ಇಲ್ಲ. ಆದರೆ ವರದಿ ಜಾರಿ ಮಾಡಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಹೇಳಿದರು.
ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಕಮಿಟ್ಮೆಂಟ್ ಇಲ್ಲ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ದಲಿತರು, ಹಿಂದುಳಿದವರ ಅಭಿವೃದ್ಧಿ ಬೇಕಾಗಿಲ್ಲ. ಸ್ವಾತಂತ್ರ್ಯ ಬಂದ ನಂತರ ಆಯಾ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಏನು ಅಂತ ಅರ್ಥ ಮಾಡಿಕೊಳ್ಳಬೇಕಿತ್ತು. ಅದಕ್ಕಾಗಿಯೇ ಜಾತಿಗಣತಿ ಮಾಡಿಸಿದೆ. ಆ ವರದಿಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಜಾತಿಗಣತಿ ವರದಿ ಜಾರಿ ಮಾಡದೇ ಇದ್ದರೆ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.