ಘಾಟ್‌ಕೋಪರ್ ದುರ್ಗಾಪರಮೇಶ್ವರಿ ಮಂದಿರ: ನವರಾತ್ರಿ ಉತ್ಸವ
Team Udayavani, Oct 20, 2019, 6:20 PM IST
ಮುಂಬಯಿ, ಅ. 19: ಘಾಟ್ ಕೋಪರ್ ಪೂರ್ವದ ಪಂತ್ ನಗರದ ಬಿಲ್ಡಿಂಗ್ ನಂಬರ್ 7ರಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಮಂದಿರದಲ್ಲಿ ವಾರ್ಷಿಕ ನವರಾತ್ರಿ ಉತ್ಸವವು ಸೆ. 29ರಂದು ಪ್ರಾರಂಭಗೊಂಡು, ಅ. 8ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ದಿನಂಪ್ರತಿ ಬೆಳಗ್ಗೆ 6ರಿಂದ ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಶ್ರೀ ಗಣಪತಿ ಹವನ, ಅಲಂಕಾರ ಪೂಜೆ, ಶ್ರೀ ದುರ್ಗಾ ಪೂಜೆ, ನೈವೇದ್ಯ ಮಂಗಳ ಆರತಿ, ಸಂಜೆ 6ರಿಂದ ಭಜನೆ, ವಿಶೇಷ ಘಟಪೂಜೆ, ರಾತ್ರಿ 8ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ, ರಾತ್ರಿ 8.30 ರಿಂದ ದಾಂಡಿಯಾ ರಾಸ್, ಗರ್ಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅ. 3ರಂದು ಸಂಜೆ 6.30 ರಿಂದ ಸಾಮೂಹಿಕ ಲಲಿತಾ ಸಹಸ್ರ ನಾಮಾರ್ಚನೆ, ಅ. 3ರಂದು ಸಂಜೆ 6.30ರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಅ. 5ರಂದು ಸಂಜೆ 4.30ರಿಂದ ಮಹಿಳಾ ವಿಭಾಗದಿಂದ ಧಾರ್ಮಿಕ ಕಾರ್ಯಕ್ರಮ, ಅ. 6 ರಂದು ಅಪರಾಹ್ನ 3ರಿಂದ ಅಷ್ಟಮಿ ಹವನ, ಅ. 7ರಂದು ಬೆಳಗ್ಗೆ 10 ರಿಂದ ಶ್ರೀ ದುರ್ಗಾ ಹವನ, ಸಂಜೆ 5ರಿಂದ ಭಕ್ತಿಸುಧಾ ಭಜನೆ, ಭಂಡಾರ ಮಹಾಪ್ರಸಾದ, ಅ. 8ರಂದು ಬೆಳಗ್ಗೆ 11ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಸಂಜೆ 5ರಿಂದ ಅರಸಿನ ಕುಂಕುಮ, ಪಲ್ಲಕ್ಕಿ ಉತ್ಸವ ನಡೆಯಿತು.
ಘಟ ವಿಸರ್ಜನೆಯು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿದ್ದು, ಹುಲಿವೇಷ ನೃತ್ಯ, ಯಕ್ಷಗಾನ ಕುಣಿತ, ಗೊಂಬೆ ಕುಣಿತ, ಇನ್ನಿತರ ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಬಿಂಬಿಸುವ ಪ್ರಾತ್ಯಕ್ಷಿಕೆಗಳು, ಜಾನಪದ ನೃತ್ಯ ಗಳು, ವಾದ್ಯ-ಸಂಗೀತಗಳ ನಿನಾದ ದೊಂದಿಗೆ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದರು. ಒಂಭತ್ತು ದಿನಗಳ ಕಾಲ ನಡೆದ ನವರಾತ್ರಿ ಉತ್ಸವದಲ್ಲಿ ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ತುಳು-ಕನ್ನಡ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ತುಳು-ಕನ್ನಡಿಗ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ದೇವಿಯ ಅನುಗ್ರಹಕ್ಕೆ ಪಾತ್ರರಾದರು.
ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.