ನನೆಗುದಿ ಕಾಮಗಾರಿ ಮುಗಿಸಲು ಸೂಚನೆ

ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಗಂಗವಾರ ಭೇಟಿ ಗುತ್ತಿಗೆದಾರರಿಗೆ ಗಡುವು

Team Udayavani, Oct 21, 2019, 1:24 PM IST

21-October-12

ಬಸವಕಲ್ಯಾಣ: ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರು ರವಿವಾರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಟಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಮೊದಲು ನೀಲಕಂಠವಾಡಿ ಗ್ರಾಮಕ್ಕೆ ಭೇಟಿ ನೀಡಿ, ಸಂಬಂಧ ಪಟ್ಟ ಗುತ್ತಿಗೆದಾರರಿಗೆ ದೂರವಾಣಿ ಮೂಲಕ ಮಾತನಾಡಿ, ನನೆಗುದಿಗೆ ಬಿದ್ದಿರುವ ನೀರಿನ ಟ್ಯಾಂಕ್‌ ಕಾಮಗಾರಿ ಟೆಂಡರ್‌ ಪ್ರಕಾರ ಕಳೆದ ಆಗಸ್ಟ್‌ ತಿಂಗಳಲ್ಲೇ ಮುಗಿಸಬೇಕಾಗಿತ್ತು. ಈವರೆಗೂ ಪೈಪ್‌ಲೈನ್‌ ಕೂಡ ಅಳವಡಿಸಿಲ್ಲ. ಇನ್ನು 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಶೇ.2ರಷ್ಟು ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಂಠಾಳ ಗ್ರಾಮದಲ್ಲಿ ಅರ್ಥಕ್ಕೆ ನಿಂತಿರುವ ನೀರು ಶುದ್ಧಿಕರಣ ಘಟಕವನ್ನು ಶೀಘ್ರವಾಗಿ ಮುಗಿಸಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗೆ ಒಪ್ಪಿಸಬೇಕು ಹಾಗೂ ಪ್ರಧಾನ ಮಂತ್ರಿ ಸಡಕ್‌ ಯೋಜನೆಯಡಿ ಕೈಗೊಂಡಿರುವ ಮಂಠಾಳ-ಚಂಡಕಾಪುರ ರಸ್ತೆ ಕಾಮಗಾರಿ ಬಹಳ ದಿನಗಳಿಂದ ನಡೆಯುತ್ತಿದೆ. ಟೆಂಡರ್‌ ಪ್ರಕಾರ ಈವರೆಗೆ ಕೆಲಸ ಪೂರ್ಣಗೊಳಿಸಬೇಕಾಗಿತ್ತು ಅಂದಾಗ, ಸ್ಥಳದಲ್ಲಿದ್ದ ಅಧಿಕಾರಿಗಳು ಕೆಲ ರೈತರು ರಸ್ತೆ ಅಗಲೀಕರಣ ಮಾಡಲು ವಿರೋಧಿಸುತ್ತಿರುವುದು ಮತ್ತು ವಿದ್ಯುತ್‌ ಕಂಬಗಳ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಗಮನಕ್ಕೆ ತಂದರು. ಮತ್ತೆ ನಮ್ಮ ಗಮನಕ್ಕೆ ಯಾಕೆ ತಂದಿಲ್ಲ ಎಂದು, ಇವರಿಗೆ ನೋಟಿಸ್‌ ನೀಡಿ ಶೇ.1ರಷ್ಟು ದಂಡ ವಿಧಿಸಿ ಎಂದರು.

ಬಟಗೇಗಾ ಗ್ರಾಮಕ್ಕೆ ಮಂಜೂರಾದ ಒಟ್ಟು 39 ಲಕ್ಷ ರೂ.ಗಳಲ್ಲಿ ಈಗಾಗಲೇ 23 ಲಕ್ಷ ಖರ್ಚು ಮಾಡಲಾಗಿದೆ. ಉಳಿದ ಹಣದಲ್ಲಿ ಪೈಪ್‌ಲೈನ್‌ ಸಂಪರ್ಕ ಕೊಟ್ಟು ಈ ತಿಂಗಳ ಒಳಗೆ ಸಂಬಂಧ ಪಟ್ಟ ಗ್ರಾಮ ಪಂಚಾಯತ್‌ ಅಭಿವೃದ್ಧಿಗೆ ಅಧಿ ಕಾರಿಗೆ ಹಸ್ತಾಂತರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹತ್ಯಾಳ ಹಾಗೂ ಚಿತ್ತಕೋಟಾ (ಕೆ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಗಲೀಕರಣ ಹಾಗೂ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿ ಹಾಗೂ ಮಧ್ಯದಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಕೋಹಿನೂರ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು. ಅಲ್ಲಿ ಶಿವಶರಣಪ್ಪಾ ಸಂತಾಜಿ ಹಾಗೂ ರತಿಕಾಂತ, ಪ್ರಶಾಂತರೆಡ್ಡಿ ಅವರು, ಜಿಪಂನಿಂದ ಸೋಲಾರ್‌ ವ್ಯವಸ್ಥೆ ಮತ್ತು ಮೊರಾರ್ಜಿ ಶಾಲೆಗೆ ಜಮೀನು ಇದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರು.

ತಾಪಂ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಮಡೋಳಪ್ಪ ಪಿ.ಎಸ್‌., ಪಿಆರ್‌ಈ ರಾಜಕುಮಾರ ಸಾಹುಕಾರ, ಆನಂದ ಮೋರೆ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.