ಬಾಂಬ್ ಸ್ಫೋಟ ಪ್ರಕರಣ ತನಿಖೆಗೆ ಸೂಚನೆ: ಶೆಟ್ಟರ್
Team Udayavani, Oct 21, 2019, 4:52 PM IST
ಕೊಪ್ಪಳ: ಹುಬ್ಬಳ್ಳಿ – ಧಾರವಾಡದಲ್ಲಿ ಬಾಂಬ್ ಸ್ಪೋಟ ಪ್ರಕರಣ ಕುರಿತು ಅಧಿಕಾರಿಗಳಿಗೆ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ಬಾಂಬ್ ಸ್ಪೋಟ ಪ್ರಕರಣ ಗಮನಕ್ಕೆ ಬಂದಿದೆ.ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ. ಪೊಲೀಸ್ ತನಿಖೆಯಲ್ಲಿ ಈ ಬಗ್ಗೆ ಗೊತ್ತಾಗಲಿದೆ. ಈ ಹಿಂದೆ ಜಿ.ಪರಮೇಶ್ವರ ಗೃಹ ಸಚಿವರಾಗಿದ್ದಾಗ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದೆವು.ವಿಧಾನಸಭೆಯಲ್ಲಿ ಈ ಬಗ್ಗೆ ಮಾತಾಡಿದ್ದೇವೆ. ಆಗಿನ ಗೃಹಮಂತ್ರಿ ಪರಮೇಶ್ವರ ಕ್ರಮ ಕೈಗೊಳ್ಳಲಿಲ್ಲ ಇದರ ಪರಿಣಾಮವನ್ನು ಈಗ ಎದುರಿಸುತ್ತಿದ್ದೇವೆ ಎಂದರು.
ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರ ಚರ್ಚೆಯಲ್ಲಿದೆ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಸೇನಾನಿ ವೀರ ಸಾವರ್ಕರ್. ಇವರ ಬಗ್ಗೆ ಹಗುರವಾಗಿ ಮಾತಾಡುವ ನಿಮಗೆ ನಾಚಿಕೆ ಮಾನ ಮರ್ಯಾದೆ ಇದೆಯಾ ?ಎಂದು ಕೈ ನಾಯಕರ ವಿರುದ್ದ ಗುಡುಗಿದರು.
ವೀರ ಸಾವರ್ಕರ್ ರಿಗೆ ಭಾರತ ರತ್ನ ಯಾಕೆ ಕೊಡಬಾರದು ಎಂದು ಪ್ರಶ್ನಿಸಿ ಶೆಟ್ಟರ್.ಪ್ರಚಾರ ಸಿಗುತ್ತೆ ಅಂತಾ ಸಿದ್ದರಾಮಯ್ಯ ಏನೇನೋ ಬೇಕಾಬಿಟ್ಟಿ ಮಾತಾಡಬಾರದು.
ನಾಳೆ ಇವರೆಲ್ಲ ಟಿಪ್ಪು ಸುಲ್ತಾನ್ ಗೆ ಭಾರತ ರತ್ನ ಕೊಡಲಿ ಎನ್ನುವವರು ಇವರು. ಯುಪಿಎ 10 ವರ್ಷ ಅಧಿಕಾರದಲ್ಲಿದ್ದಾಗ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಏಕೆ ಕೊಡಲಿಲ್ಲ ? ಆಗ ಕಾಂಗ್ರೆಸ್ ನಾಯಕರು ಮಲಗಿಕೊಂಡಿದ್ದಿರಾ ಎಂದರು.
ಕಾಂಗ್ರೆಸ್ ಅಧಿನಾಯಕಿ ಇಂದಿರಾ ಗಾಂಧಿಯೇ ವೀರ್ ಸಾವರ್ಕರ್ ಬಗ್ಗೆ ಏನು ಮಾತಾಡಿದ್ದಾರೆ ಅಂತಾ ತಿಳಿದುಕೊಳ್ಳಲಿ.ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ ಈ ಬಗ್ಗೆ ನಾನೂ ಒತ್ತಾಯ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.