ರಾಯಲ್ ಎನ್ ಫೀಲ್ಡ್ ಮಾರಾಟದಲ್ಲಿ ಭಾರೀ ಕುಸಿತ
Team Udayavani, Oct 21, 2019, 10:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕಳೆದ ಹಲವು ತಿಂಗಳುಗಳಿಂದ ದ್ವಿಚಕ್ರ ವಾಹನ ಉದ್ಯಮ ಕುಸಿತ ಕಾಣುತ್ತಿದ್ದು, ವಾಹನ ತಯಾರಕರು ಹಬ್ಬದ ವೇಳೆಯಲ್ಲಿ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ವ್ಯಾಪಾರ ಮಟ್ಟ ಕುಸಿದ ಹಲವಾರು ಹೆಸರಾಂತ ಕಂಪೆನಿಗಳ ಪಟ್ಟಿಗೆ ದೇಶಿಯ ಮಾರುಕಟ್ಟೆಯ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಸಹ ಸೇರಿದ್ದು, ಕಳೆದ ತಿಂಗಳಿನ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ.
ಕಳೆದ ಕೆಲವು ತಿಂಗಳುಗಳಿಂದ ಮಾರಾಟದಲ್ಲಿ ಗಮನಾರ್ಹವಾದ ಕುಸಿತ ಕಾಣುತ್ತಿರುವ ರಾಯಲ್ ಎನ್ಫೀಲ್ಡ್ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 54,858 ಯುನಿಟ್ ಗಳು ಮಾರಾಟವಾಗಿದ್ದು, ರಾಯಲ್ ಎನ್ಫೀಲ್ಡ್ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ 70,065 ಯುನಿಟ್ ಗಳು ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟದ ಮಟ್ಟ ಶೇ.21.70 ರಷ್ಟು ಕುಸಿತ ಕಂಡಿದೆ.
ರಾಯಲ್ ಎನ್ಫೀಲ್ಡ್ ಶ್ರೇಣಿಯ ಪ್ರಮುಖ ಮಾದರಿಯ ಬೈಕ್ ಗಳ ಮಾರಾಟದಲ್ಲಿ ಅಧಿಕ ಮಟ್ಟದ ಕುಸಿತ ಕಂಡು ಬಂದರೂ, ರಫ್ತು ಗಣನೀಯವಾಗಿ ಹೆಚ್ಚಾಗಿದೆ. 2018ರ ಸೆಪ್ಟೆಂಬರ್ ತಿಂಗಳಲ್ಲಿ 1,597 ಯುನಿಟ್ ಗಳು ರಫ್ತಾಗಿದ್ದು, ಪ್ರಸಕ್ತ ಸಾಲಿನ ಸೆಪ್ಟೆಂಬರ್ ತಿಂಗಳಲ್ಲಿ 4,642 ಯುನಿಟ್ ಗಳಷ್ಟು ಮಾರಾಟವಾಗಿದ್ದು, ಶೇ.191 ರಷ್ಟು ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.