ದೇಗುಲಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ನಿಷೇಧ?
Team Udayavani, Oct 22, 2019, 5:45 AM IST
ಬೆಂಗಳೂರು: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.
ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.
ಚರ್ಮ ಸಮಸ್ಯೆಗಳಿಗೂ ಕಾರಣ
ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ ಸಮಸ್ಯೆ ಗಳಿಗೂ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ತಜ್ಞರು ಹೇಳುವುದೇನು?
ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಿಂದ ಅಲರ್ಜಿ (ಬಿಂದಿ ಡರ್ಮಟೈಟಿಸ್) ಉಂಟಾಗುವ ಸಾಧ್ಯತೆ ಇದೆ. ಇದರಿಂದ ಕುಂಕುಮ ಹಚ್ಚಿ ಕೊಂಡ ಭಾಗದಲ್ಲಿ ಕೆರೆತ, ಸಣ್ಣ ನೀರಿನ ಗುಳ್ಳೆ ಕಾಣಿಸಿಕೊಳ್ಳಬಹುದು. ಇಂತಹ ಕುಂಕುಮಗಳಿಂದ ಜೀವಕಣ ಗಳು ನಾಶವಾಗಿ ಕ್ರಮೇಣ ಆ ಭಾಗ ಬೆಳ್ಳಗಾಗಲಿದೆ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ.
ಕೆಲವು ದೇಗುಲಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಸಲಾಗುತ್ತಿದೆ ಎಂದು ಭಕ್ತರಿಂದ ದೂರುಗಳು ಕೇಳಿ ಬಂದಿವೆ. ಭಕ್ತರ ಹಿತದೃಷ್ಟಿಯಿಂದ ರಾಸಾಯನಿಕ ಮಿಶ್ರಿತವೆಂದು ಕಂಡುಬಂದ ಕುಂಕುಮ ಖರೀದಿ, ಬಳಕೆ ಮಾಡದಂತೆ ಆದೇಶ ಹೊರಡಿಸಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.