ಅಯೋಧ್ಯೆ ಪ್ರಕರಣದ ತೀರ್ಪು ದೂರಗಾಮಿ ಪರಿಣಾಮ
ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಲಿಖೀತ ಹೇಳಿಕೆಯಲ್ಲಿ ಮುಸ್ಲಿಂ ಸಂಘಟನೆಗಳ ವಾದ
Team Udayavani, Oct 22, 2019, 6:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಅರ್ಜಿದಾರರಿಗೆ ಲಿಖೀತ ದಾಖಲೆ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸುನ್ನಿ ವಕ್ಫ್ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ದಾಖಲೆಗಳನ್ನು ಸಲ್ಲಿಕೆ ಮಾಡಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಘಟನೆಗಳ ಪರ ನ್ಯಾಯವಾದಿ ರಾಜೀವ್ ಧವನ್ “ಲಿಖಿತವಾಗಿ ವಿವಾದದ ಬಗ್ಗೆ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಬೇಕಾದ ದಾಖಲೆಗಳನ್ನು ಸಲ್ಲಿಸಿದ್ದೇವೆ. ಗೌರವಾನ್ವಿತ ನ್ಯಾಯಾಲಯ ಯಾವುದೇ ರೀತಿ ತೀರ್ಪು ನೀಡಿದರೂ, ಅದು ಮುಂದಿನ ಜನಾಂಗದ ಮತ್ತು ರಾಜಕೀಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಅರಿಕೆ ಮಾಡಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ. ಇದರ ಜತೆಗೆ “ತೀರ್ಪು, ಸಂವಿಧಾನದ ಮೇಲೆ ನಂಬಿಕೆ ಇರಿಸಿಕೊಂಡವರ ಮನಸ್ಸಿನ ಮೇಲೂ ಪ್ರಭಾವ ಬೀರಲಿದೆ’ ಎಂದು ಪ್ರತಿಪಾದಿಸಲಾಗಿದೆ.
ಶನಿವಾರ ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳು ತಮ್ಮ ತಮ್ಮ ವಕೀಲರ ಮೂಲಕ ಹೇಳಿಕೆ ಸಲ್ಲಿಸಿದ್ದವು. ನಲವತ್ತು ದಿನಗಳ ಕಾಲ ವಾದ- ಪ್ರತಿವಾದದ ಬಳಿಕ ಅ.16ರಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ನ.17 ರಂದು ಮುಖ್ಯ ನ್ಯಾಯಮೂರ್ತಿ ಗೊಗೋಯ್ ನಿವೃತ್ತರಾಗುವ ಮುನ್ನ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.