ತ್ಯಾಜ್ಯ ವಿಲೇವಾರಿಗೆ 500 ಕೋಟಿ ರೂ.

Team Udayavani, Oct 22, 2019, 10:41 AM IST

bng-tdy-4

ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು 500 ಕೋಟಿ ರೂ. ಮೀಸಲಿಡಬೇಕು. ಕಣ್ಣೂರು ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಸೂಚನೆ ನೀಡಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿಟಿಗಾನಹಳ್ಳಿ ಮತ್ತು ಮಂಡೂರು ಗ್ರಾಮಗಳಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಕುರಿತ ಸಭೆಯಲ್ಲಿ ಪಾಲಿಕೆ ವತಿಯಿಂದ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿಯಾಗದಿರುವ ಬಗ್ಗೆ ಶಾಸಕರು ಅಳಲು ತೋಡಿಕೊಂಡರು.

ಅದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ 500 ಕೋಟಿ ರೂ. ಮೀಸಲಿಡಬೇಕು. ತ್ಯಾಜ್ಯ ಸಂಸ್ಕರಿಸಿ ವಿದ್ಯುತ್‌ ಉತ್ಪಾದನೆಗೆ ಹೆಚ್ಚು ಗಮನ ನೀಡಬೇಕು. ಮಂಡೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಶೇಖರಣೆ  ಯಾಗಿರುವ ತ್ಯಾಜ್ಯವನ್ನು ಅಲ್ಲಿಯೇ ಸಂಸ್ಕರಿಸಿ ವಿದ್ಯುತ್‌ ಉತ್ಪಾದನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಉಚಿತವಾಗಿ ಕಸ ಕೊಡಿ: ತ್ಯಾಜ್ಯ ವಿಲೇವಾರಿ ಕುರಿತಂತೆ ಅಧಿಕಾರಿಗಳು ಇನ್ನು ಮುಂದೆ ವಾರಕ್ಕೊಮ್ಮೆ ಸಭೆ ನಡೆಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಸಂಸ್ಕರಿಸಿ ವಿದ್ಯುತ್‌ ಉತ್ಪಾದಿಸಲು ಆಸಕ್ತಿ ತೋರುವ ಖಾಸಗಿ ಕಂಪೆನಿಗಳಿಗೆ ಉಚಿತವಾಗಿ ಕಸ ನೀಡಬೇಕು ಎಂದು ಸೂಚನೆ ನೀಡಿದರು.

ಕುಡಿಯುವ ನೀರಿಗೆ ಹಣ: ಕಣ್ಣೂರಿನಲ್ಲಿ ತ್ಯಾಜ್ಯ ವಿಲೇವಾರಿಯಿಂದಾಗಿ ಗ್ರಾಮದ ಕೊಳವೆಬಾವಿಗಳು ಕಲುಷಿತಗೊಂಡಿರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಆಯುಕ್ತರಿಗೆ ಸೂಚಿಸಿದರು. ಮೇಯರ್‌ ಗೌತಮ್‌ ಕುಮಾರ್‌, ಸಂಸದ ಪಿ.ಸಿ.ಮೋಹನ್‌, ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಆಯುಕ್ತ ಅನಿಲ್‌ ಕುಮಾರ್‌ ಇತರರು ಉಪಸ್ಥಿತರಿದ್ದರು.

ವರದಿ ನೀಡಿ: ತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಸಂಬಂಧಪಟ್ಟಂತೆ ವಾರದೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಜತೆಗೆ ತ್ಯಾಜ್ಯ ಸಂಸ್ಕರಣೆಯಿಂದ ವಿದ್ಯುತ್‌ ಉತ್ಪಾದನಾ ಘಟಕ ನಿರ್ಮಾಣ ಸಂಬಂಧ ಸಮಿತಿಯೊಂದನ್ನು ರಚಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಮೇಯರ್‌ ಗೌತಮ್‌ ಕುಮಾರ್‌ ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಪಾಲಿಕೆ ಆದಾಯವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮಳಿಗೆ, ಉದ್ದಿಮೆಗಳ ನಾಮಫ‌ಲಕಗಳಲ್ಲಿ ಕನ್ನಡವನ್ನು ಶೇ.60ರಷ್ಟು ಭಾಗದಲ್ಲಿ ಬಳಸಬೇಕು ಎಂಬುದನ್ನು ಜಾಹೀರಾತು ಉಪವಿಧಿ ನಿಯಮದಲ್ಲಿ ಸೇರ್ಪಡೆ ಮಾಡಲಾಗಿದೆ. ಅದರಂತೆ ನ.1ರೊಳಗೆ ಇದನ್ನು ಪಾಲಿಸುವಂತೆ ಸೂಚಿಸಲಾಗಿದೆ. ಎಲ್‌ಇಡಿ ಫ‌ಲಕಗಳಿದ್ದರೆ 15 ದಿನ ಕಾಲಾವಕಾಶ ನೀಡಲಾಗುವುದು. ಇದರಲ್ಲಿ ಪ್ರಚಾರದ ಯಾವುದೇ ಗಿಮಿಕ್‌ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.