ಟ್ಯಾಕ್ಸಿ ಚಾಲಕ-ಮಾಲಕರ ಸಂಘದಿಂದ ರಸ್ತೆ ದುರಸ್ತಿ
Team Udayavani, Oct 22, 2019, 2:24 PM IST
ಕುಮಟಾ: ಮಣಕಿ ಮೈದಾನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದ ಬೃಹತ್ ಹೊಂಡವನ್ನು ಸೋಮವಾರ ತಾಲೂಕಿನ ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ಸಿಮೆಂಟ್ ಹಾಕಿ ದುರಸ್ತಿಗೊಳಿಸಲಾಯಿತು.
ನಂತರ ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ನವೀನ ನಾಯ್ಕ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ಬೃಹತ್ ಹೊಂಡಗಳನ್ನು ದುರಸ್ತಿಗೊಳಿಸುವಂತೆ ಐಆರ್‌ಬಿ ಕಂಪೆನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬಳಿ ಹಲವು ಬಾರಿ ವಿನಂತಿಸಿಕೊಳ್ಳಲಾಗಿತ್ತು. ಆದರೆ ಅಧಿಕಾರಿಗಳು ಸಂಪೂರ್ಣ ಕಾಮಗಾರಿ ಮುಗಿಸದೇ, ಕಾಟಾಚಾರಕ್ಕೆ ದುರಸ್ತಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಮುಚ್ಚಿದ ಹೊಂಡಗಳು ಈಗಲೇ ಬಾಯಿ ತೆರೆದು ನಿಂತಿದೆ. ಟ್ಯಾಕ್ಸಿ ನಿಲ್ದಾಣದ ಎದುರಿನಲ್ಲಿ ಬಿದ್ದಿರುವ ಬೃಹತ್ ಹೊಂಡವನ್ನು ಟ್ಯಾಕ್ಸಿ ಚಾಲಕ ಮತ್ತು ಮಾಲಕರು ಸ್ವಂತ ಹಣದಿಂದ ದುರಸ್ತಿ ಮಾಡಿಕೊಂಡಿದ್ದೇವೆ. ಇದೇ ಹೊಂಡದಲ್ಲಿ ಕೆಲವು ಬೈಕ್ ಸವಾರರು ಬಿದ್ದು ಅಪಘಾತ ಮಾಡಿಕೊಂಡಿದ್ದಾರೆ. ಹೊಂಡದಲ್ಲಿರುವ ಕಲ್ಲುಗಳು ಸಿಡಿದು ವಾಹನಗಳ ಗ್ಲಾಸು ಒಡೆದಿರುವ ಘಟನೆಯೂ ನಡೆದಿದೆ.
ಶೀಘ್ರದಲ್ಲಿ ಸಂಬಂಧಿಸಿದ ಇಲಾಖೆ ರಾಷ್ಟ್ರೀಯ ಹೆದ್ದಾರಿ ದುರಸ್ತಿ ನಡೆಸದಿದ್ದಲ್ಲಿ ಟ್ಯಾಕ್ಸಿ ಚಾಲಕ, ಮಾಲಿಕರು ಸಾರ್ವಜನಿಕರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು. ದುರಸ್ತಿ ಕಾರ್ಯದಲ್ಲಿ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರ ಸಂಘದ ನಿತ್ಯಾನಂದ ನಾಯ್ಕ, ಕೀರ್ತಿಕಿರಣ, ನಾಗರಾಜ ಹರಿಕಂತ್ರ, ರಾಘು ಮೊಗೇರ, ಪ್ರಶಾಂತ ಸಣ್ಮನೆ, ಶ್ರೀಕಾಂತ ಮಡಿವಾಳ, ಅಬ್ದುಲ್ ಖಾಜಿ, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.