ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆ

Team Udayavani, Oct 22, 2019, 2:31 PM IST

ballary-tdy1

ಬಳ್ಳಾರಿ: ತೆಲಂಗಾಣ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಸಾವಿರಾರು ನೌಕರರನ್ನು ಎಕಾಏಕಿ ವಜಾಗೊಳಿಸಿದ್ದನ್ನು ಖಂಡಿಸಿ ಸೋಮವಾರ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಬಳ್ಳಾರಿ ವಿಭಾಗದ ಕೆಎಸ್‌ಆರ್‌ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಹತ್ತಾರು ಮಂದಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿ ಕೆಲಕಾಲ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ರಾವ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಜಿಲ್ಲಾ ಧಿಕಾರಿ ಕಚೇರಿ ಸಿಬ್ಬಂದಿಗೆ ಈ ಕುರಿತು ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆಯ ಮುಖಂಡರು, ತೆಲಂಗಾಣ ರಾಜ್ಯದ ರಸ್ತೆ ಸಾರಿಗೆ ನೌಕರರು, ಸಿಬ್ಬಂದಿ ವಿರುದ್ಧ ತೆಲಂಗಾಣ ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ನಿರ್ದಯಿಯಾಗಿದೆ. ಇಂಥ ಕ್ರಮವನ್ನು ಯಾವುದೇ ಸರ್ಕಾರ ಕೈಗೊಳ್ಳಬಾರದು. ನೌಕರರು, ಸಿಬ್ಬಂದಿ ವಜಾಗೊಳಿಸಿರುವುದರಿಂದ ಅವರ ಕುಟುಂಬ ಬೀದಿಗೆ ಬರಲಿವೆ ಎಂದರು.

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್‌ ಒಂದಲ್ಲ, ಎರಡಲ್ಲ ಬರೋಬ್ಬರಿ 48,000 ನೌಕರರನ್ನು ಸೇವೆಯಿಂದ ವಜಾಗೊಳಿಸಿರುವುದು ಕಾನೂನು ಬಾಹಿರವಾಗಿದೆ. ಅಲ್ಲದೇ ಸರ್ವಾಧಿ ಕಾರಿ ಧೋರಣೆಯನ್ನು ಇಲ್ಲಿ ಎತ್ತಿ ತೋರಿಸುತ್ತದೆ. ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಟಿಎಸ್‌ಆರ್‌ಟಿಸಿ ಸಂಸ್ಥೆಯ ನೌಕರರನ್ನು ಎಕಾಏಕಿ ವಜಾಗೊಳಿಸೋದು ತರವಲ್ಲ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌ ಇದನ್ನು ಉಗ್ರವಾಗಿ ಖಂಡಿಸಲಿದೆ ಎಂದು ಅವರು ತಿಳಿಸಿದರು.

ಕೂಡಲೇ ಟಿಎಸ್‌ಆರ್‌ಟಿಸಿ ಸಂಸ್ಥೆಯ ನೌಕರರ ಸೇವೆಯನ್ನು ವಜಾಗೊಳಿಸಿರೋದನ್ನ ಹಿಂಪಡೆಯಬೇಕು. ಟಿಎಸ್‌ಆರ್‌ಟಿಸಿ ಸಂಸ್ಥೆಯ ನಷ್ಟದ ನೆಪವೊಡ್ಡಿ ಈ ನಿರ್ಧಾರಕ್ಕೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್‌ ಬಂದಿರೋದು ಸರಿಯಲ್ಲ. ಖಾಸಗಿ ಒಡೆತನದಲ್ಲಿರೊ ಈ ಸಂಸ್ಥೆ ನಷ್ಟದಲ್ಲಿರೋದು ನಿಮಗೆ ಹೇಗೆ ತಿಳಿಯುತ್ತೆ. ಇದೀಗ ಮತ್ತೂಂದು ಖಾಸಗಿ ಸಹಭಾಗಿತ್ವದಡಿ ಟಿಎಸ್‌ ಆರ್‌ಟಿಸಿ ಸಂಸ್ಥೆಯನ್ನು ಆರಂಭಿಸಲು ಹೊರಟಿದೀರಿ. ಅದು ಕೂಡ ನಷ್ಟದಲ್ಲಿರೋದಿಲ್ಲ ಅಂತ ಏನ್‌ ಗ್ಯಾರಂಟಿ ಎಂದು ಅವರು ಪ್ರಶ್ನಿಸಿದರು.

ಕೆಎಸ್‌ಆರ್‌ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಸಂಘದ ಬಳ್ಳಾರಿ ವಿಭಾಗದ ಅಧ್ಯಕ್ಷ ಎಚ್‌.ಎ. ಆದಿಮೂರ್ತಿ, ಪ್ರಧಾನ ಕಾರ್ಯದರ್ಶಿ ಕಾಂತಯ್ಯ ಗುತ್ತರಗಿ ಮಠ, ಜಿ. ಶಿವಕುಮಾರ, ಶೇಖರಬಾಬು, ಜಲ್ಲಿ ಬಸಪ್ಪ ಸೇರಿದಂತೆ ನೂರಾರು ನೌಕರರು, ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.