ಬೇಡಿಕೆ ಈಡೇರಿಕೆಗೆ ಮಸಣ ಕಾರ್ಮಿಕರ ಸಂಘ ಆಗ್ರಹ
Team Udayavani, Oct 23, 2019, 3:00 AM IST
ಬೆಂಗಳೂರು: ಮಸಣ ಪ್ರದೇಶಗಳನ್ನು ಜನಸ್ನೇಹಿ ನಂದನಗಳನ್ನಾಗಿ ರೂಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿಯಲ್ಲಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಮಂಗಳವಾರ ರಾಜ್ಯ ಮಸಣ ಕಾರ್ಮಿಕರ ಸಂಘದ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಂಘದ ಸಂಚಾಲಕರಾದ ಬಿ.ಮಾಳಮ್ಮ ಮತ್ತು ಯು.ಬಸವರಾಜ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಈ ಸಮಾವೇಶದಲ್ಲಿ ಕಲಬುರಗಿ, ಬೀದರ್, ಬಳ್ಳಾರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಪ್ರದೇಶ ಸೇರಿ ವಿವಿಧೆಡೆಗಳಿಂದ ಹಲವು ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಮಾಳಮ್ಮ, ರಾಜ್ಯದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಮಸಣ ಕಾರ್ಮಿ ಕರಿ ದ್ದಾರೆ. ಆದರೆ ಅವರ ಕೌಟುಂಬಿಕ ಬದುಕು ದುಸ್ತರವಾಗಿದೆ. ಇಂತಹ ಕುಟುಂಬಗಳ ನೆರವಿಗೆ ಸರ್ಕಾರ ಬರಬೇಕು. ಅಲ್ಲದೆ, ಮಸಣ ನಿರ್ವಾಹಕ ನೌಕರರನ್ನು ನೇಮಕ ಮಾಡಿಕೊಳ್ಳಲು ಮುಂದಾಗಬೇಕೆಂದು ಮನವಿ ಮಾಡಿದರು.
ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿಯ ಉದ್ಯೋಗವೆಂದು ಪರಿಗಣಿಸಿ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ 2,500ರೂ. ಕೂಲಿ ಪಾವತಿಸಬೇಕು. ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಬಂಧ ವಿಶೇಷ ಆರೋಗ್ಯ ಕಾರ್ಡ್ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಸಂಚಾಲಕ ಯು.ಬಸವರಾಜ ಮಾತನಾಡಿ, ಕೆಲವು ಕಡೆ ಮಸಣ ಪ್ರದೇಶಗಳ ಒತ್ತುವರಿಯಾಗಿದೆ. ಆ ಹಿನ್ನೆಲೆ ಸರ್ಕಾರ ರಾಜ್ಯದ ಎಲ್ಲಾ ಸಾರ್ವಜನಿಕ ಮಸಣ ಪ್ರದೇಶವನ್ನು ಗಣತಿ ಮಾಡಿ ಆ ಪ್ರದೇಶಕ್ಕೆ ತಂತಿಬೇಲಿ ಆಳವಡಿಕೆ ಮಾಡಬೇಕು ಎಂದು ಆಗ್ರಹಿಸಿದರು. ಹಗರಿ ಬೊಮ್ಮನಹಳ್ಳಿ ಮೂಲದ ಕಾರ್ಮಿಕ ನಾಗೇಂದ್ರಪ್ಪ, ಮಸಣದಲ್ಲಿಯೇ ದಿನ ಕಳೆಯುವ ನಮಗೆ ಸರ್ಕಾರ ಅಂತ್ಯೋದಯ ರೇಷನ್ ಕಾರ್ಡ್‌ಗಳನ್ನು ನೀಡಬೇಕು.
ಅಲ್ಲದೆ ಸುಮಾರು 3 ಸಾವಿರ ರೂ.ಪಿಂಚಣಿ ನೀಡಲು ಮಂದಾಗಬೇಕು ಎಂದರು. ಸರ್ಕಾರದ ಪರವಾಗಿ ಕಾರ್ಮಿಕರ ಮನವಿ ಸ್ವೀಕರಿಸಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶಬೀರ್ ಅಹಮದ್ ಮುಲ್ಲಾ, ನಿಮ್ಮ ಬೇಡಿಕೆಗಳನ್ನು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.