ಮಳೆಗೆ ದಾವಣಗೆರೆ: ಸೋಮವಾರ ಮತ್ತೆ ಸುರಿದ ಭಾರೀ ಮಳೆಗೆ ಮಹಿಳೆ ಬಲಿ-ಬೆಳೆ ಹಾನಿ

Team Udayavani, Oct 23, 2019, 11:34 AM IST

23-October-3

ದಾವಣಗೆರೆ: ಸೋಮವಾರ ಮತ್ತೆ ಸುರಿದ ಭಾರೀ ಮಳೆಗ ದಾವಣಗೆರೆ ತಾಲೂಕಿನ ಪುಟಗನಾಳ್‌ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ 45 ವರ್ಷದ ಪೀರಿಬಾಯಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಹಲವಾರು ಕಡೆ ಮನೆ, ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ. ಕೆಲವಾರು ಕಡೆ ರಸ್ತೆ ಸಂಪರ್ಕ ಕಡಿತಗೊಂಡು ಜನರು ತೀವ್ರ ತೊಂದರೆ ಅನುಭವಿಸಿದರು. ದಾವಣಗೆರೆ ತಾಲೂಕಿನ ಆನಗೋಡು, ಮಾಯಕೊಂಡ, ಹುಚ್ಚವ್ವನಹಳ್ಳಿ, ಬಸಾಪುರ, ಲೋಕಿಕೆರೆ, ಅಣಜಿ, ಮಳಲ್ಕೆರೆ, ಕೋಲ್ಕುಂಟೆ ಇತರೆ ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಮಾಯಕೊಂಡ ಹೋಬಳಿಯಲ್ಲಿ 500 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿನ ಮೆಕ್ಕೆಜೋಳ. ರಾಗಿ, ಜೋಳ ಇತರೆ ಬೆಳೆ ಜಲಾವೃತ್ತಗೊಂಡಿವೆ.

ಹರಿಹರ ತಾಲೂಕಿನ ಚಿಕ್ಕಬಿದರಿ-ಸಾರಥಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹರಪನಹಳ್ಳಿ ರಸ್ತೆಯ ಕರಲಹಳ್ಳಿ ಬಳಿ ರಸ್ತೆ ಮೇಲೆ ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿತ್ತು. ಆದರೆ, ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಆಗಲಿಲ್ಲ. ದಾವಣಗೆರೆಯಿಂದ ಹರಿಹರದ ಮೂಲಕ ತುಂಗಭದ್ರಾ ನದಿ ಸೇರುವ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಪರಿಣಾಮ ಅಕ್ಕಪಕ್ಕದ ಹೊಲಗಳಿಗೆ ನೀರು ನುಗ್ಗಿದೆ. ಹರಿಹರದ ಬೆಂಕಿನಗರ, ಕಾಳಿದಾಸ ನಗರದ ಅನೇಕ ಭಾಗದ ಮನೆಗಳಿಗೆ ಸೋಮವಾರವೂ ನೀರು ನುಗ್ಗಿದ ಪರಿಣಾಮ ಜನರು ಮತ್ತೆ ತತ್ತರಿಸಿ ಹೋದರು. ಸತತ ಎರಡು ದಿನಗಳ ಕಾಲ ಮಳೆಯ ನೀರು ನುಗ್ಗಿದ್ದರಿಂದ ಸಾಕಷ್ಟು ಸಮಸ್ಯೆಗೆ ಸಿಲುಕಿದರು.

ಹೊನ್ನಾಳಿ ಪಟ್ಟಣದ ತಾಲೂಕು ಪಂಚಾಯತಿ ಎದುರು ಮನೆಯೊಂದು ಸಂಪೂರ್ಣ ಧರಶಾಹಿಯಾಗಿದ್ದು ಮನೆಯಲ್ಲಿದ್ದ ತಾಹೀರಾಬಾನು ಪವಾಡ ಸದೃಶ್ಯ ರೀತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕತ್ತಿಗೆ, ಆರುಂಡಿ, ಕೆಂಚಿಕೆರೆ, ಕುಂದೂರು, ಕೂಲಂಬಿ, ಸಾಸ್ವೇಹಳ್ಳಿ… ಒಳಗೊಂಡಂತೆ ಅನೇಕ ಕಡೆ ಹೊಲ-ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. 63ಕ್ಕೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ಚನ್ನಗಿರಿ ತಾಲೂಕಿನ ದೊಡ್ಡೇರಿಕಟ್ಟೆ ಇತರೆ ಭಾಗದಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ಬೆಳೆಗಳು ಹಾನಿಯಾಗಿದೆ. ಸಂತೇಬೆನ್ನೂರು- ಕಾಕನೂರು ಮಧ್ಯೆದಲ್ಲಿ ಹರಿಯುವ ಹಿರೇಹಳ್ಳ ಭೋರ್ಗರೆದು ಹರಿದ ಪರಿಣಾಮ ಹೊಲ- ಗದ್ದೆಗಳಲ್ಲಿ ಸಾಕಷ್ಟು ಪ್ರಮಾಣದ ನೀರು ನಿಂತಿದೆ.

ಬೆಳೆ ಕಳೆದುಕೊಳ್ಳುವ ಆತಂಕ ರೈತಾಪಿ ವರ್ಗದಲ್ಲಿದೆ. ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ, ಮುಸ್ಟೂರು, ದಿದ್ದಿಗೆ, ತಾರೇಹಳ್ಳಿ ಒಳಗೊಂಡಂತೆ ಇತರೆಡೆ 8 ಮನೆಗಳಿಗೆ ಹಾನಿಯಾಗಿದೆ. ಭಾರೀ ಮಳೆಯಿಂದ ತೋರಣಗಟ್ಟೆ ಮತ್ತು ಅರಿಶಿಣಗುಂಡಿಯ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.