ಕಂಬದಕೋಣೆ: ಮೃತ ಮಕ್ಕಳ ಮನೆಯವರಿಗೆ ಶಾಸಕರಿಂದ ನೆರವು
Team Udayavani, Oct 24, 2019, 5:09 AM IST
ಉಪ್ಪುಂದ: ಕಂಬದಕೋಣೆ ಗ್ರಾಮದ ಎಡಮಾವಿನ ಹೊಳೆಗೆ ಸ್ನಾನಕ್ಕೆಂದು ತೆರಳಿದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿ ಮೃತಪಟ್ಟಿದ್ದು ಅವರ ಮನೆಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಂಗಳವಾರ ಸಂಜೆ ಭೇಟಿ ನೀಡಿ ಮನೆಯವರಿಗೆ ವೈಯಕ್ತಿಕ ಪರಿಹಾರ ವಿತರಿಸಿದರು.
ಹಳಗೇರಿ ದೊಡ್ಮನೆ ವೆಂಕಪ್ಪ ಶೆಟ್ಟಿ ಅವರ ಪುತ್ರ ವಂಶಿತ ಶೆಟ್ಟಿ (12) ಮತ್ತು ಕಂಬದಕೋಣೆ ಹಳಗೇರಿ ಪಟೇಲರ ಮನೆಯ ರತ್ನಾಕರ ಶೆಟ್ಟಿ ಅವರ ಪುತ್ರ ರಿತೇಶ್ ಶೆಟ್ಟಿ (12) ನೀರುಪಾಲಾದವರು. ಇವರಿಬ್ಬರೂ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು. ಶಾಲೆಗೆ ಮಧ್ಯಾವಧಿ ರಜೆ ಇದ್ದ ಕಾರಣ ಇತರ ಗೆಳೆಯರ ಜತೆ ನದಿ ಬದಿಗೆ ತೆರಳಿದ್ದರು. ಕಾಲು ತೊಳೆಯಲು ಇಳಿದಾಗ ದುರ್ಘಟನೆ ಸಂಭವಿಸಿತ್ತು.
ಹುಡುಕಾಟ ಸಂದರ್ಭ ಭೇಟಿ ನೀಡಿದ್ದ ಶಾಸಕರು ಬಳಿಕ ಸಂಸದ ಬಿ.ವೈ. ರಾಘವೇಂದ್ರ ಅವರ ಬಳಿ ಈ ಇಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ವಿನಂತಿಸಿದ್ದರು. ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿದ್ದರು. ಮುಖ್ಯಮಂತ್ರಿಗಳನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ. ಈ ಮಧ್ಯೆ ಶಾಸಕರು ಎರಡೂ ಮನೆಯವರನ್ನೂ ಭೇಟಿ ಮಾಡಿ ತಮ್ಮ ವೈಯಕ್ತಿಕ ನೆಲೆಯಲ್ಲಿ 50 ಸಾವಿರ ರೂ.ಗಳ ನೆರವು ಹಸ್ತಾಂತರಿಸಿದರು. ಇಬ್ಬರಿಗೂ ಪುತ್ರಿಯರಿದ್ದು ಕುಂದಾಪುರ ಎಜುಕೇಶನ್ ಟ್ರಸ್ಟ್ ವತಿಯಿಂದ ದ್ವಿತೀಯ ಪಿಯುಸಿವರೆಗೆ ಟ್ರಸ್ಟ್‌ನ ಶಾಲೆ, ಕಾಲೇಜುಗಳಲ್ಲಿ ಉಚಿತ ಶಿಕ್ಷಣ, ಸಮವಸ್ತ್ರದ ಭರವಸೆ ನೀಡಿದರು.
ಈ ಸಂದರ್ಭ ಶಾಸಕರ ಜತೆ ಉದಯ ಶೆಟ್ಟಿ ಹಳಗೇರಿ, ಹೇರೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕಂಬದಕೋಣೆ ಪಂಚಾಯತ್ ಸದಸ್ಯ ರವೀಂದ್ರ ಶೆಟ್ಟಿ, ಕಿರಿಮಂಜೇಶ್ವರ ಪಂಚಾಯತ್ ಸದಸ್ಯ ಮಂಜುನಾಥ ದೇವಾಡಿಗ, ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿ ಪ್ರಿಯದರ್ಶಿನಿ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.