ಆಲ್‌ರೌಂಡರ್ ಅಭಿಷೇಕ್ ನಾಯರ್ ವಿದಾಯ
Team Udayavani, Oct 23, 2019, 11:16 PM IST
ಮುಂಬಯಿ: ಮುಂಬಯಿಯ ಹಿರಿಯ ಆಲ್‌ರೌಂಡರ್ ಅಭಿಷೇಕ್ ನಾಯರ್ ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.
36 ವರ್ಷದ ಅಭಿಷೇಕ್ ನಾಯರ್ ಎಡಗೈ ಬ್ಯಾಟ್ಸ್ ಮನ್, ಬಲಗೈ ಮಧ್ಯಮ ವೇಗಿಯಾಗಿದ್ದರು. ಭಾರತ ಪರ ಆಡಿದ್ದು 3 ಏಕದಿನ ಪಂದ್ಯ ಮಾತ್ರ. ಈ ಮೂರೂ ಪಂದ್ಯಗಳನ್ನು 2009ರ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಆಡಿದ್ದರು. ಆದರೆ ಕ್ರೀಸಿಗಿಳಿಯುವ ಅವಕಾಶ ಲಭಿಸಿದ್ದು ಒಮ್ಮೆ ಮಾತ್ರ. ಇದರಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಐಪಿಎಲ್‌ನಲ್ಲಿ ಮುಂಬೈ, ಪಂಜಾಬ್ ಮತ್ತು ಪುಣೆ ತಂಡಗಳನ್ನು ಪ್ರತಿನಿಧಿಸಿದ್ದರು.
ಪ್ರಥಮ ದರ್ಜೆ ಸಾಧಕ
ಆದರೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇವರದು ಉಲ್ಲೇಖನೀಯ ಸಾಧನೆ. ಒಂದೂವರೆ ದಶಕ ಕಾಲ ಮುಂಬಯಿ ತಂಡವನ್ನು ಪ್ರತಿನಿಧಿಸಿದ ನಾಯರ್ 103 ಪಂದ್ಯಗಳಿಂದ 5,749 ರನ್ ಗಳಿಸುವ ಜತೆಗೆ 173 ವಿಕೆಟ್ ಕಬಳಿಸಿದ್ದಾರೆ. ತಂಡವನ್ನು ಸಂಕಷ್ಟದಿಂದ ಪಾರುಮಾಡುವಲ್ಲಿ ನಿಷ್ಣಾತರಾಗಿದ್ದ ನಾಯರ್, ಕೋಚ್ ಆಗಿ ಮುಂದುವರಿಯುವ ಯೋಜನೆಯಲ್ಲಿದ್ದಾರೆ.
“ಈ ವರೆಗಿನ ನನ್ನ ಕ್ರಿಕೆಟ್ ಜೀವನದ ಕುರಿತು ನನಗೆ ಸಂಪೂರ್ಣ ತೃಪ್ತಿ ಇದೆ. ಇಷ್ಟು ಕಾಲ ಮುಂಬಯಿ ಪರ ಆಡಲು ಅವಕಾಶ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು’ ಎಂದು ಅಭಿಷೇಕ್ ನಾಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.