ಹರಿಯಾಣದಲ್ಲಿ ಕರ್ನಾಟಕ “ಕೈ” ಮಾದರಿ ಮೈತ್ರಿ- ಜೆಜೆಪಿ ದುಶ್ಯಂತ್ ಚೌಟಾಲಾಗೆ CM ಪಟ್ಟ?
Team Udayavani, Oct 24, 2019, 10:48 AM IST
ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಏತನ್ಮಧ್ಯೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದಕ್ಕೆ ಕಾರಣವಾಗುತ್ತಿರುವುದು ಈ ಬಾರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕುವುದು ಅನುಮಾನ ಮೂಡಿಸಿದೆ. ಬಿಜೆಪಿ 40 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ (ಜನನಾಯಕ್ ಜನತಾ ಪಕ್ಷ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಜೆಜೆಪಿ ಸ್ಥಾಪಕ ದುಶ್ಯಂತ್ ಚೌಟಾಲಾ ಇದೀಗ ಯಾರೇ ಸರಕಾರ ರಚನೆ ಮಾಡುವುದಿದ್ದರೂ ಅದರ ಕೀಲಿ ಕೈ ನಮ್ಮ ಬಳಿ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ ನಮಗೆ ಯಾರು ಮುಖ್ಯಮಂತ್ರಿ ಸ್ಥಾನ ಕೊಡುತ್ತಾರೋ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಚೌಟಾಲಾ ಆಫರ್ ನೀಡಿದ್ದಾರೆ.
ಮತ್ತೊಂದೆಡೆ ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಜತೆ ಕಾಂಗ್ರೆಸ್ ಪಕ್ಷ ನಿರಂತರ ಸಂಪರ್ಕದಲ್ಲಿದ್ದು, ಡಿಸಿಎಂ ಹುದ್ದೆ ಕೊಡುವುದಾಗಿ ತಿಳಿಸಿದ್ದು, ಮಾತುಕತೆ ಮುಂದುವರಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಹರಿಯಾಣದಲ್ಲಿ ಸರಕಾರ ರಚನೆ ಮಾಡಲು 45 ಸ್ಥಾನಗಳ ಅಗತ್ಯವಿದೆ. ಬಿಜೆಪಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ, ಜೆಜೆಪಿ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನ ಹೊಸ್ತಿಲಿನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.