ಆರ್‌ಪಿಎಫ್ ಸಿಬ್ಬಂದಿ ನಿರ್ಲಕ್ಷ್ಯ?
ರೈಲ್ವೇ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ ಹಿರಿಯ ಅಧಿಕಾರಿಗಳ ಜಂಟಿ ಸಭೆ
Team Udayavani, Oct 24, 2019, 3:16 PM IST
ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ನಡೆದ ವಸ್ತುವೊಂದರ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಪೊಲೀಸ್, ಆರ್‌ಪಿಎಫ್ ಹಾಗೂ ಸ್ಥಳೀಯ ಪೊಲೀಸ್ ಹಿರಿಯ ಅಧಿಕಾರಿಗಳು ಬುಧವಾರ ಜಂಟಿಯಾಗಿ ಸಭೆ ನಡೆಸಿದರು.
ಸಮನ್ವತೆಯೊಂದಿಗೆ ಪ್ರಕರಣದ ಸಮಗ್ರ ತನಿಖೆಗೆ ಹಾಗೂ ಇಂತಹ ಅನಾಹುತಗಳು ಸಂಭವಿಸದಂತೆ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.
ವಿಭಾಗೀಯ ಭದ್ರತಾ ಆಯುಕ್ತ ವಲ್ಲೇಸ್ವರ ತೋಕಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ಇಲಾಖೆಗಳ ಸಮನ್ವತೆಯೊಂದಿಗೆ ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಿಲ್ದಾಣಕ್ಕೆ ಆಗಮಿಸುವ ವಾಹನಗಳ ಹಾಗೂ ಸಂಶಯಾಸ್ಪದ
ವ್ಯಕ್ತಿ ಹಾಗೂ ವಸ್ತುಗಳ ಬಗ್ಗೆ ನಿಗಾವಹಿಸಬೇಕು. ವಸ್ತು ಮತ್ತು ವ್ಯಕ್ತಿಗಳ ಬಗ್ಗೆ ಶಂಕೆ ಬಂದರೆ ಸಮಗ್ರವಾಗಿ ತಪಾಸಣೆ ಮಾಡಬೇಕು. ವಸ್ತುಗಳನ್ನು ಮೆಟಲ್ ಡಿಟೆಕ್ಟರ್, ಶ್ವಾನದಳ ಮೂಲಕ ತಪಾಸಣೆ ನಡೆಸಬೇಕು.
ಶಂಕಾಸ್ಪದ ವಸ್ತುಗಳು ದೊರೆತರೆ ಅದನ್ನು ಹಿರಿಯ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಜೊತೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ಫೋಟಕ ವಸ್ತುಗಳು ಇದ್ದರೆ ಬಾಂಬ್ ತಪಾಸಣೆ ಮತ್ತು ನಿಷ್ಕ್ರಿಯ ತಂಡಕ್ಕೆ ಮಾಹಿತಿ ನೀಡಬೇಕು. ಸಮನ್ವತೆಯಿಂದ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ಎನ್ನಲಾಗಿದೆ.
ಸಭೆಯಲ್ಲಿ ರೈಲ್ವೆ ಪೊಲೀಸ್ ಡಿವೈಎಸ್‌ಪಿ ಬಸನಗೌಡ ಪಾಟೀಲ, ಆರ್‌ಪಿಎಫ್ ಇನ್‌ಸ್ಪೆಕ್ಟರ್, ಶಹರ ಠಾಣೆ ಇನ್‌ಸ್ಪೆಕ್ಟರ್ ಗಿರೀಶ ಬೋಜನ್ನವರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.